ಬೆಳಗಾವಿ ಪತ್ರಕರ್ತರ ವಿಮೆ ಸೌಲಭ್ಯ ನವೀಕರಣಕ್ಕೆ ಆಗ್ರಹ

KannadaprabhaNewsNetwork |  
Published : Jul 15, 2026, 03:00 AM IST
ಬೆಳಗಾವಿ | Kannada Prabha

ಸಾರಾಂಶ

ಬೆಳಗಾವಿ ಮಹಾನಗರ ಪಾಲಿಕೆಯಿಂದ ಪತ್ರಕರ್ತರಿಗೆ ನೀಡಲಾಗುತ್ತಿರುವ ವಿಮಾ ಸೌಲಭ್ಯವನ್ನು ಶೀಘ್ರದಲ್ಲೇ ನವೀಕರಿಸುವಂತೆ ಆಗ್ರಹಿಸಿ ಬೆಳಗಾವಿ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ವತಿಯಿಂದ ಮಂಗಳವಾರ ಶಾಸಕ, ಮೇಯರ್ ಹಾಗೂ ಮಹಾನಗರಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಬೆಳಗಾವಿ ಮಹಾನಗರ ಪಾಲಿಕೆಯಿಂದ ಪತ್ರಕರ್ತರಿಗೆ ನೀಡಲಾಗುತ್ತಿರುವ ವಿಮಾ ಸೌಲಭ್ಯವನ್ನು ಶೀಘ್ರದಲ್ಲೇ ನವೀಕರಿಸುವಂತೆ ಆಗ್ರಹಿಸಿ ಬೆಳಗಾವಿ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ವತಿಯಿಂದ ಮಂಗಳವಾರ ಶಾಸಕ, ಮೇಯರ್ ಹಾಗೂ ಮಹಾನಗರಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.

ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ, ಮೇಯರ್ ಪ್ರೀತಿ ಕಾಮಕರ್ ಹಾಗೂ ಮಹಾನಗರ ಪಾಲಿಕೆ ಆಯುಕ್ತ ಎಂ.ಕಾರ್ತಿಕ್ ಅವರನ್ನು ಭೇಟಿ ಮಾಡಿದ ನಿಯೋಗವು, ಪತ್ರಕರ್ತರ ವಿಮಾ ಸೌಲಭ್ಯವನ್ನು ತಕ್ಷಣ ನವೀಕರಿಸಿ ಈ ಸೌಲಭ್ಯ ದೊರೆಯುವಂತೆ ಕ್ರಮ ಕೈಗೊಳ್ಳುವಂತೆ ಕೋರಿತು.ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಚಂದ್ರಕಾಂತ ಸುಗಂಧಿ, ಗೌರವಾಧ್ಯಕ್ಷ ಶ್ರೀಕಾಂತ್ ಕುಬಕಡ್ಡಿ, ಉಪಾಧ್ಯಕ್ಷ ಚಂದ್ರು ಶ್ರೀರಾಮುಡು ಮಂಜುನಾಥ ಪಾಟೀಲ, ಪ್ರಧಾನ ಕಾರ್ಯದರ್ಶಿ ಶ್ರೀಧರ, ಸಹ ಕಾರ್ಯದರ್ಶಿ ಅಡಿವೇಶ ಪಾಟೀಲ, ಖಜಾಂಚಿ ಸಹದೇವ ಮಾನೆ, ಹಿರಿಯ ವರದಿಗಾರರಾದ ಅನಿಲ್ ಕಾಜಗಾರ, ಮೈಲಾರಿ ಪಟಾತ್, ಮಂಜುನಾಥ ರೆಡ್ಡಿ, ಮಂಜುನಾಥ ಹುಡೇದ್, ಸಿದ್ದನಗೌಡ, ರಾಜೇಶ್, ಸುಭಾನಿ ಮುಲ್ಲಾ, ಸುನಿಲ್, ಪ್ರವೀಣ, ರವಿ ನಾಗೇಶ, ಪ್ರಲ್ಹಾದ್, ಅಶೋಕ, ನಜೀಮ್, ಮಹಾಂತೇಶ, ಶಿವು ಹಾಗೂ ವಿನೋದ ಸೇರಿ ಅನೇಕರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈತರ ನೆರವಿಗೆ ಬಾರದೇ ಸಂಪುಟ ವಿಸ್ತರಣೆಯಲ್ಲಿ ಕಾಲಹರಣ: ನಿಖಿಲ್‌ ಕುಮಾರಸ್ವಾಮಿ
ಅಸ್ವಸ್ಥಗೊಂಡಿದ್ದ ಮಕ್ಕಳು ಗುಣಮುಖ