ಕನ್ನಡಪ್ರಭ ವಾರ್ತೆ ಹಿರಿಯೂರು
ಪ್ರತಿಭಟನೆ ಉದ್ದೇಶಿಸಿ ರೈತ ಸಂಘದ ಜಿಲ್ಲಾಧ್ಯಕ್ಷ ಕೆ.ಟಿ.ತಿಪ್ಪೇಸ್ವಾಮಿ ಮಾತನಾಡಿ, ಹಿರಿಯೂರು ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳು ಕೆಟ್ಟು ಹೋಗಿದ್ದು ಮೂರ್ನಾಲ್ಕು ವರ್ಷವಾದರೂ ಅವುಗಳನ್ನು ರಿಪೇರಿ ಮಾಡಿಲ್ಲ. ಗ್ರಾಮದ ಜನರಿಗೆ ಶುದ್ಧ ಕುಡಿಯುವ ನೀರು ಕೊಡಲು ಅಧಿಕಾರಿಗಳು ವಿಫಲವಾಗಿದ್ದಾರೆ. ಜಲಜೀವನ್ ಯೋಜನೆ ಅಡಿಯಲ್ಲಿ ಅನೇಕ ಗ್ರಾಮಗಳಲ್ಲಿ ಕಳಪೆ ಕಾಮಗಾರಿ ನಡೆಸಲಾಗಿದೆ. ಆದ್ದರಿಂದ ಪ್ರತಿ ಗ್ರಾಮದಲ್ಲೂ ರೈತರ ಸಮ್ಮುಖದಲ್ಲಿ ಕಾಮಗಾರಿ ತನಿಖೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಮತ್ತು ಗುತ್ತಿಗೆದಾರರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು ಮಾಡಬೇಕು ಎಂದು ಒತ್ತಾಯಿಸಿದರು.
ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಡಾ.ಪ್ರಮೋದ್ ಮಾತನಾಡಿ, ಇನ್ನೂ ಎರಡ್ಮೂರು ದಿನದ ಒಳಗಾಗಿ ತಾಲೂಕಿನ ಎಲ್ಲಾ ಘಟಕಗಳ ಸಂಪೂರ್ಣ ಮಾಹಿತಿ ಪಡೆದು ಕೆಟ್ಟಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ರಿಪೇರಿ ಮಾಡಿಸಲಾಗುವುದು ಎಂದರು.ರೈತ ಸಂಘದ ತಾಲೂಕು ಅಧ್ಯಕ್ಷ ಬಳಗಟ್ಟೆ ವೆಂಕಟೇಶ್ ಮಾತನಾಡಿ, ಒಂದು ವಾರದ ಒಳಗಾಗಿ ಕುಡಿಯುವ ನೀರಿನ ಘಟಕಗಳನ್ನು ರಿಪೇರಿ ಮಾಡಿಸದಿದ್ದರೆ ಜಿಲ್ಲಾ ಪಂಚಾಯಿತಿ ಮುಂಭಾಗದಲ್ಲಿ ಚಳುವಳಿ ಹಮ್ಮಿಕೊಳ್ಳಲಾಗುವುದು ಎಂದರು.