ಲಿಂಗಾಯತ ಸಮಾಜಕ್ಕೆ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ನೀಡಲು ಆಗ್ರಹ

KannadaprabhaNewsNetwork |  
Published : May 31, 2026, 01:45 AM IST
ಅರಸೀಕೆರೆಯ ಗುರುಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ನಡೆದ ನೊಳಂಬ ಲಿಂಗಾಯತ ಸಮಾಜದ ಮುಖಂಡರ ಸಭೆಯಲ್ಲಿ ಶಾಸಕ ಕೆ.ಷಡಕ್ಷರಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಲಾಯಿತು | Kannada Prabha

ಸಾರಾಂಶ

ಗುರುಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ಶನಿವಾರ ನಡೆದ ಸಮಾಜದ ಮುಖಂಡರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಗಂಜೀಗೆರೆ ಚಂದ್ರಶೇಖರ್ ರಾಜ್ಯದ ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಗಮನಾರ್ಹ ಕೊಡುಗೆ ನೀಡುತ್ತಿರುವ ನೊಳಂಬ ಲಿಂಗಾಯತ ಸಮುದಾಯವನ್ನು ಹಲವು ವರ್ಷಗಳಿಂದ ಕಡೆಗಣಿಸಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ತಿಪಟೂರು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿರುವ ಶಾಸಕ ಕೆ. ಷಡಕ್ಷರಿ ಅವರು ಜನಪರ ಕಾರ್ಯಗಳ ಮೂಲಕ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಸಮುದಾಯದ ಆಶಯವನ್ನು ಈಡೇರಿಸಬೇಕು ಎಂದು ಮನವಿ ಮಾಡಿದರು.

ಕನ್ನಡಪ್ರಭ ವಾರ್ತೆ ಅರಸೀಕೆರೆರಾಜ್ಯ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ನೊಳಂಬ ಲಿಂಗಾಯತ ಸಮಾಜಕ್ಕೆ ಸಮರ್ಪಕ ಪ್ರಾತಿನಿಧ್ಯ ದೊರಕಬೇಕು ಹಾಗೂ ತಿಪಟೂರು ಶಾಸಕ ಕೆ.ಷಡಕ್ಷರಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ನೊಳಂಬ ಲಿಂಗಾಯತ ಸಮಾಜದ ಮುಖಂಡರು ಒತ್ತಾಯಿಸಿದರು.ನಗರದ ಗುರುಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ಶನಿವಾರ ನಡೆದ ಸಮಾಜದ ಮುಖಂಡರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಗಂಜೀಗೆರೆ ಚಂದ್ರಶೇಖರ್ ರಾಜ್ಯದ ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಗಮನಾರ್ಹ ಕೊಡುಗೆ ನೀಡುತ್ತಿರುವ ನೊಳಂಬ ಲಿಂಗಾಯತ ಸಮುದಾಯವನ್ನು ಹಲವು ವರ್ಷಗಳಿಂದ ಕಡೆಗಣಿಸಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ತಿಪಟೂರು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿರುವ ಶಾಸಕ ಕೆ. ಷಡಕ್ಷರಿ ಅವರು ಜನಪರ ಕಾರ್ಯಗಳ ಮೂಲಕ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಸಮುದಾಯದ ಆಶಯವನ್ನು ಈಡೇರಿಸಬೇಕು ಎಂದು ಮನವಿ ಮಾಡಿದರು.ಮುಖಂಡ ಜಾವಗಲ್ ರಾಜಶೇಖರ್‌ ಮಾತನಾಡಿ, ರಾಜ್ಯದಲ್ಲಿ ಲಕ್ಷಾಂತರ ಜನಸಂಖ್ಯೆ ಹೊಂದಿರುವ ನೊಳಂಬ ಲಿಂಗಾಯತ ಸಮಾಜಕ್ಕೆ ಸರ್ಕಾರದಲ್ಲಿ ಸೂಕ್ತ ಸ್ಥಾನಮಾನ ದೊರಕಬೇಕಿದೆ. ತುಮಕೂರು ಜಿಲ್ಲೆಯ ರಾಜಕೀಯ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸಿರುವ ಶಾಸಕ ಷಡಕ್ಷರಿ ಅವರಿಗೆ ಸಚಿವ ಸಂಪುಟದಲ್ಲಿ ಅವಕಾಶ ಕಲ್ಪಿಸುವ ಮೂಲಕ ಸಮಾಜಕ್ಕೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.ಸಭೆಯಲ್ಲಿ ಕೇಂದ್ರ ಸಮಿತಿ ನಿರ್ದೇಶಕ ಕಾಟೀಕೆರೆ ಉಮೇಶ್, ಬೇಲೂರು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ದೇಶಾಣಿ ಆನಂದ್, ತಾಪಂ ಮಾಜಿ ಉಪಾಧ್ಯಕ್ಷ ಶಿವಶಂಕರ್‌, ತೇಜಮೂರ್ತಿ, ಅಡವಿಸ್ವಾಮಿ, ಪಟೇಲ್ ಸಿದ್ದಪ್ಪ, ವಿರೂಪಾಕ್ಷಪ್ಪ, ಶಿವಕುಮಾರ್, ಬೆಳಗುಂಬ ಬಾಬು, ತೋಂಟಾರಾಧ್ಯ, ರಾಜು, ಅರವಿಂದ್ ಸೇರಿದಂತೆ ಹಲವರು ಭಾಗವಹಿಸಿದ್ದರು

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದಲಿತರಿಗೆ ಮುಖ್ಯಮಂತ್ರಿ ಸ್ಥಾನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಬಿರುಗಾಳಿ ಸಹಿತ ಭಾರೀ ಮಳೆಗೆ ನೆಲಕಚ್ಚಿದ ಬಾಳೆ