ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಈ ಸಂದರ್ಭದಲ್ಲಿ ಮಾತನಾಡಿದ ಸೂಡಾ ಮಾಜಿ ಅಧ್ಯಕ್ಷ ನಾಗರಾಜ್, ಇದೊಂದು ಕೊಲೆಗಡುಕ ಸರ್ಕಾರವಾಗಿದೆ. ಪ್ರಾಮಾಣಿಕ ಐಪಿಎಸ್ ಅಧಿಕಾರಿಗಳನ್ನು ಅಮಾನತು ಮಾಡಿರುವುದು ರಾಜ್ಯ ಸರ್ಕಾರದ ನಿರ್ಲಜ್ಜತನದ ವರ್ತನೆಯಾಗಿದೆ . ಎರಡು ದಿನದ ಹಿಂದಷ್ಟೇ ಉಪಮುಖ್ಯಮಂತ್ರಿಗಳು ಪೊಲೀಸರನ್ನು ಹೊಗಳಿದ್ದರು. ಆದರೆ, ಈಗ ಅವರ ಸರ್ಕಾರದ ತಪ್ಪುಗಳನ್ನು ಮುಚ್ಚಿಡಲು ಜನರ ಆಕ್ರೋಶವನ್ನು ತಣ್ಣಗಾಗಿಸಲು ನಿಷ್ಠಾವಂತ ಅಧಿಕಾರಿಗಳನ್ನು ಬಲಿಪಶು ಮಾಡಲಾಗಿದೆ ಎಂದು ಆರೋಪಿಸಿದರು.
ಸಂಜೆ 4 ಗಂಟೆಯ ಸಮಯದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತಕ್ಕೆ ಇಬ್ಬರು ಬಲಿಯಾಗಿದ್ದಾರೆ ಎಂಬ ಮಾಹಿತಿ ಸಿಎಂ ಮತ್ತು ಡಿಸಿಎಂಗೆ ಗೊತ್ತಿದ್ದರೂ ಸಹ ತಮ್ಮ ಪ್ರಚಾರದ ತೆವಲಿಗಾಗಿ ವಿಧಾನಸೌಧದ ಮುಂಭಾಗ ಕಾರ್ಯಕ್ರಮ ಮುಂದುವರಿಸಿದ್ದಾರೆ. ಇದು ಸರ್ಕಾರದ ಹೊಣೆಗೇಡಿತನದ ವರ್ತನೆಯಾಗಿದೆ. ರಾಜ್ಯದ ಜನತೆ ಇದನ್ನು ಕ್ಷಮಿಸುವುದಿಲ್ಲ. ಕೂಡಲೇ ಸಿಎಂ ಮತ್ತು ಡಿಸಿಎಂ ಹಾಗೂ ಗೃಹಸಚಿವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.ಜಿಲ್ಲಾ ಬಿಜೆಪಿ ಕಾರ್ಯದರ್ಶಿ ದೀನ್‌ದಯಾಳ್ ಮಾತನಾಡಿ, ಇಡೀ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಒಂದು ಕಡೆ ಹಿಂದೂಗಳ ಮೇಲೆ ದೌರ್ಜನ್ಯ, ಇನ್ನೊಂದೆಡೆ ಮುಸ್ಲಿಮರ ತುಷ್ಟೀಕರಣ, ಈಗ ಆರ್‌ಸಿಬಿ ಆಟಗಾರರ ಜೊತೆ ಪ್ರಚಾರದ ತೆವಲಿನಿಂದ ಅಮಾಯಕ ಕ್ರೀಡಾ ಅಭಿಮಾನಿಗಳ ಮಾರಣ ಹೋಮ ಇವೆಲ್ಲವೂ ಕೂಡ ರಾಜ್ಯ ಸರ್ಕಾರದ ದುರಾಡಳಿತಕ್ಕೆ ಸಾಕ್ಷಿಯಾಗಿದೆ ಎಂದರು.
ಈ ಸಂದರ್ಭದಲ್ಲಿ ಪ್ರಮುಖರಾದ ಶಿವಾನಂದ್, ಪ್ರದೀಪ್ ಹೊನ್ನಪ್ಪ, ಮಂಜುನಾಥ್, ಜಗನ್ನಾಥ್ ಸೇರಿದಂತೆ ಬಿಜೆಪಿ ಮಹಿಳಾ ಮೋರ್ಚಾದ ಪದಾಧಿಕಾರಿಗಳು ಇದ್ದರು.