ರೈತರ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹ

KannadaprabhaNewsNetwork | Published : Mar 18, 2025 12:36 AM

ಸಾರಾಂಶ

ಸಿದ್ರಾಮಪ್ಪ ಅಣದೂರೆ ನೇತೃತ್ವದಲ್ಲಿ ರೈತ ಸಂಘದ ಪ್ರತಿಭಟನೆ, ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಯತ್ನ ನಡೆಸಿದರು. ರೈತರಿಂದ ಡಿಸಿ ಕಚೇರಿವರೆಗೆ ಮೆರವಣಿಗೆ ನಡೆಯಿತು.

ಕನ್ನಡಪ್ರಭ ವಾರ್ತೆ ಬೀದರ್‌

ರೈತರ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಸೋಮವಾರ ನಗರದಲ್ಲಿ ರೈತ ಸಂಘದಿಂದ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿಗೆ ಬರೆದ ಮನವಿಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಾಯಿತು.ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಹಾಗೂ ಜಿಲ್ಲಾಧ್ಯಕ್ಷ ಸಿದ್ರಾಮಪ್ಪ ಆಣದೂರೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಸಲ್ಲಿಸಿದ ಮನವಿಯಲ್ಲಿ ರೈತರು ಪ್ರತಿ ವರ್ಷ ಹಲವಾರು ಸಮಸ್ಯೆಗಳಿಗೆ ಸಿಲುಕಿ ನರಳಾಡುತ್ತಿದ್ದು, ಆ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಿ, ಅತೀ ಶೀಘ್ರದಲ್ಲಿ ಬಗೆಹರಿಸಬೇಕು. ರಾಜ್ಯದಲ್ಲಿ ರೈತರು ಹೊಸದಾಗಿ ಕೃಷಿ ಪಂಪಸೆಟ್‌ಗಳು ಅಳವಡಿಕೆ ಮಾಡಲು ವಿದ್ಯುತ್ ನೋಂದಣಿ ಸಲುವಾಗಿ ಸುಮಾರು 50ರಿಂದ 60 ಸಾವಿರ ರು. ಖರ್ಚು ಬರುತ್ತಿದ್ದು, ಅದನ್ನು ಮೊದಲಿನಂತೆ ಜಾರಿ ಮಾಡಬೇಕು ಮತ್ತು ನೋಂದಣಿ ಪ್ರಕ್ರಿಯೆ ಶೀಘ್ರದಲ್ಲಿ ಜಾರಿ ಮಾಡಬೇಕು ಎಂದು ಆಗ್ರಹಿಸಲಾಗಿದೆ.ಬೀದರ್‌ ಸಹಕಾರ ಸಕ್ಕರೆ ಕಾರ್ಖಾನೆಯನ್ನು ಪ್ರಾರಂಭ ಮಾಡಿಸಬೇಕು. ಜಿಲ್ಲಾ ಸಹಕಾರ ಬ್ಯಾಂಕ್‌ನಿಂದ ರೈತರಿಗೆ ಸಾಲ ಕೊಡಿಸುವ ವ್ಯವಸ್ಥೆ ಮಾಡಿಸಬೇಕು. ಬೆಳೆ ವಿಮೆ ಮಾಡಿಸಿದ ರೈತರಿಗೆ ಇಲ್ಲಿಯ ವರೆಗೆ ಬೆಳೆ ಹಾಳಾದರೂ ಕೂಡ ಬೆಳೆ ವಿಮೆ ಪರಿಹಾರ ಖಾತೆಗೆ ಜಮೆ ಆಗಿರುವುದಿಲ್ಲ. ಸಾಲಿನಲ್ಲಿ ಮಂಜಿನಿಂದ ತೊಗರಿ ಬೆಳೆ ಸಂಪೂರ್ಣ ಹಾಳಾಗಿದ್ದು, ಅದಕ್ಕೆ ಅತೀ ಶೀಘ್ರದಲ್ಲಿ ಎಕರೆಗೆ 25000 ರು. ರಂತೆ ಬೆಳೆ ಹಾನಿ ಪರಿಹಾರ ಕೊಡಿಸಬೇಕು.ಸಕ್ಕರೆ ಕಾರ್ಖಾನೆಗಳಿಗೆ ರೈತರು ಕಬ್ಬು ಸರಬರಾಜು ಮಾಡಿ, 3 ತಿಂಗಳು ಕಳೆದರೂ ಕೂಡ ಇಲ್ಲಿಯವರೆಗೆ ಯಾವ ರೈತರ ಖಾತೆಗೂ ಬಾಕಿ ಹಣ ಜಮೆ ಆಗಿರುವುದಿಲ್ಲ. ಅದನ್ನು ಶೀಘ್ರದಲ್ಲಿ ಎಲ್ಲಾ ರೈತರ ಖಾತೆಗೆ ಜಮೆ ಮಾಡಿಸಬೇಕು. ಪ್ರಸಕ್ತ ಸಾಲಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಜಿಲ್ಲೆಯ ಎಲ್ಲಾ ಸಕ್ಕರೆ ಕರ‍್ಖಾನೆಯ ಅಧ್ಯಕ್ಷರು ಹಾಗೂ ರೈತ ಮುಖಂಡರ ಸಮ್ಮುಖದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸಭೆ ನಡೆಸಿ, ಪ್ರತಿ ಟನ್ ಕಬ್ಬಿಗೆ 2700 ರು. ನಿಗದಿಪಡಿಸಲಾಗಿತ್ತು. ಆದರೆ ಇಲ್ಲಿಯವರೆಗೆ ಕರ‍್ಖಾನೆಯವರು ಅದನ್ನು ಪಾವತಿಸಿಲ್ಲ ಇತ್ತ ಕ್ರಮವಹಿಸಬೇಕು ಎಂದು ಆಗ್ರಹಿಸಲಾಯಿತು.ಈ ಬೇಡಿಕೆಗಳು ಈಡೇರದಿದ್ದಲ್ಲಿ ಮುಂಬರುವ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಮುಖ್ಯಮಂತ್ರಿಗಳಿಗೆ ಬರೆದ ಮನವಿಯಲ್ಲಿ ಎಚ್ಚರಿಸಲಾಯಿತು.ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ, ಜಿಲ್ಲಾ ಕಾರ್ಯಾಧ್ಯಕ್ಷ ಶ್ರೀಮಂತ ಬಿರಾದಾರ, ಶೇಷರಾವ್‌ ಕಣಜಿ, ಚಂದ್ರಶೇಖರ ಜಮಖಂಡಿ, ದಯಾನಂದ ಸ್ವಾಮಿ ಸಿರ್ಸಿ, ಶಂಕ್ರೆಪ್ಪ ಪಾರಾ, ಗೂಡಿಹಾಳ ಬಸವರಾಜ, ಮಲ್ಲನಗೌಡ ಪಾಟೀಲ್‌, ಪ್ರವೀಣ ಕುಲಕರ್ಣಿ, ಬಾಬುರಾವ್‌ ಜೋಳದಾಬಕಾ, ಶೋಭಾವತಿ ಕಾರಭಾರಿ, ಮಹಾನಂದಾ ದೇಶಮುಖ, ಸುವರ್ಣ ಬಳತೆ, ಸುಭಾಷ ರಗಟೆ, . ಭಾಗ್ಯಶ್ರೀ ದೇಶಮುಖ, ನಾಗಯ್ಯ ಸ್ವಾಮಿ, ಪ್ರಕಾಶ ಬಾವಗೆ, ಮಲ್ಲಿಕಾರ್ಜುನ ಬಿರಾದಾರ, ವಿಠಲರಾವ್‌ ಪಾಟೀಲ್‌, ರೇವಣಸಿದ್ದಪ್ಪ ಯರಬಾಗ, ಸುಮಂತ ಗ್ರಾಮಲೆ, ವಿಶ್ವನಾಥ ಧರಣೆ, ಮಲ್ಲಿಕರ‍್ಜುನ ಚಕ್ಕಿ, ರಾಜಕುಮಾರ ಪಾಟೀಲ್‌, ಧೂಳಪ್ಪ ಆಣದೂರ, ಬಸಪ್ಪಾ ಆಲೂರೆ, ಮೋಹನರಾವ ಮರಖಲ್ ಸೇರಿದಂತೆ ಅನೇಕ ರೈತ ಮುಖಂಡರು ಉಪಸ್ಥಿತರಿದ್ದರು.

----

Share this article