ರವಿ ಹಂಜ್‌ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ

KannadaprabhaNewsNetwork |  
Published : Nov 21, 2026, 01:30 AM IST
20ಸಿಎಚ್‌ಎನ್51ಚಾಮರಾಜನಗರದಜಿಲ್ಲಾಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿಮುಖಂಡ ಕೆ. ವೀರಭದ್ರಸ್ವಾಮಿ ಮಾತನಾಡಿದರು. | Kannada Prabha

ಸಾರಾಂಶ

ಬಸವಣ್ಣ ಯಾವುದೇ ಮತ ಜಾತಿ, ಧರ್ಮಕ್ಕೆ ಸೀಮಿತರಾದವರಲ್ಲ. ಅವರೊಬ್ಬ ವಿಶ್ವನಾಯಕ. 12ನೇ ಶತಮಾನದಲ್ಲೇ ಅಸಮಾನತೆ, ಕಂದಾಚಾರ, ಮೂಢನಂಬಿಕೆ, ಸಾಮಾಜಿಕ ಶೋಷಣೆಗಳ ವಿರುದ್ಧ ಹೋರಾಡಿದವರು. ಸಮಾಜದ ಒಳಿತಿಗೆ ವಚನಗಳ ಮೂಲಕ ಉತ್ತಮ ಸಂದೇಶ ನೀಡಿದ್ದಾರೆ. ದಯೆಯೇ ಧರ್ಮದ ಮೂಲವಯ್ಯ, ಕಾಯಕವೇ ಕೈಲಾಸ’ ಕಳಬೇಡ, ಕೊಲಬೇಡ ಎಂಬ ವಚನಗಳ ಮೂಲಕ ಸಮಾಜವನ್ನುಎಚ್ಚರಿಸುವ ಕೆಲಸ ಮಾಡಿದರು.

ಕನ್ನಡಪ್ರಭವಾರ್ತೆ ಚಾಮರಾಜನಗರ

12ನೇ ಶತಮಾನದ ಮಹಾನ್ ಮಾನವತಾವಾದಿ, ಸಮಾನತೆ ಹರಿಕಾರ, ಕಾಯಕ ಮತ್ತು ದಾಸೋಹ ತತ್ವಗಳ ಮೂಲಕ ಸಾಮಾಜಿಕ ಕ್ರಾಂತಿಗೆ ನಾಂದಿ ಹಾಡಿದ ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಕುರಿತು ಬಸವ ಮಂಟಪ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಅನಿವಾಸಿ ಭಾರತೀಯ ರವಿ ಹಂಜ್‌ ಅವರು ಆಡಿದ್ದಾರೆ ಎನ್ನಲಾದ ಕುಚೋದ್ಯದ ಹಾಗೂ ಅವಹೇಳನಕಾರಿ ಮಾತುಗಳನ್ನು ಅಖಿಲ ಭಾರತ ವೀರಶೈವ ಮಹಾಸಭಾ, ಬಸವ ಕೇಂದ್ರ ಹಾಗೂ ಬಸವ ಸಂಸ್ಕೃತಿ ಅಭಿಯಾನ ಸಮಿತಿ ತೀವ್ರವಾಗಿ ಖಂಡಿಸಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದೆ.

ನಗರದ ಜಿಲ್ಲಾಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖಂಡ ಕೆ.ವೀರಭದ್ರಸ್ವಾಮಿ, ಬಸವಣ್ಣ ಯಾವುದೇ ಮತ ಜಾತಿ, ಧರ್ಮಕ್ಕೆ ಸೀಮಿತರಾದವರಲ್ಲ. ಅವರೊಬ್ಬ ವಿಶ್ವನಾಯಕ. 12ನೇ ಶತಮಾನದಲ್ಲೇ ಅಸಮಾನತೆ, ಕಂದಾಚಾರ, ಮೂಢನಂಬಿಕೆ, ಸಾಮಾಜಿಕ ಶೋಷಣೆಗಳ ವಿರುದ್ಧ ಹೋರಾಡಿದವರು. ಸಮಾಜದ ಒಳಿತಿಗೆ ವಚನಗಳ ಮೂಲಕ ಉತ್ತಮ ಸಂದೇಶ ನೀಡಿದ್ದಾರೆ. ದಯೆಯೇ ಧರ್ಮದ ಮೂಲವಯ್ಯ, ಕಾಯಕವೇ ಕೈಲಾಸ’ ಕಳಬೇಡ, ಕೊಲಬೇಡ ಎಂಬ ವಚನಗಳ ಮೂಲಕ ಸಮಾಜವನ್ನುಎಚ್ಚರಿಸುವ ಕೆಲಸ ಮಾಡಿದರು. ಅವರ ಸಂದೇಶಗಳನ್ನು ಸಮಾಜಕ್ಕೆ ತಿಳಿಸಬೇಕಿದ್ದ ಲೇಖಕ ರವಿ ಹಂಜ್ ಬರೆದು ಪ್ರಕಟಿಸಿದ ಬಸವಮಂಟಪ ಪುಸ್ತಕದಲ್ಲಿ ಬಿಜ್ಜಳನನ್ನು ಕೊಲ್ಲಿಸಿದವ ಬಸವಣ್ಣ. ಬಿಜ್ಜಳನ ಭಂಡಾರದ ಹಣವನ್ನು ದಾಸೋಹಕ್ಕೆ ಬಳಸಿದ, ಲಿಂಗಾಯತರು ಲಿಂಗಾಹತರು ಎಂದು ಸಮುದಾಯವನ್ನು ಕೆರಳಿಸುವ ಪದಗಳನ್ನು ಬರೆದು ಪ್ರಕಟಿಸಿದ್ದಾರೆ.

ಬಸವಣ್ಣನವರ ಬಗ್ಗೆ ಅವಹೇಳನಕಾರಿ ಪದಬಳಸಿರುವ ಲೇಖಕ ರವಿಹಂಜ್ ನನ್ನು ಬಂಧಿಸಿ, ಆತನ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ವೇದಿಕೆ ಕಾರ್ಯಕ್ರಮಗಳಿಗೆ ಇಂತಹ ವಿಕೃತ ಮನಸ್ಸಿನ ವ್ಯಕ್ತಿಗಳಿಗೆ ಭಾಷಣ ಮಾಡಲು ಅವಕಾಶ ಮಾಡಿಕೊಡಬಾರದು. ನಿರ್ಲಕ್ಷ್ಯ ವಹಿಸಿದರೆ ಬಸವಾಭಿಮಾನಿಗಳು, ಸಂಘಸಂಸ್ಥೆಗಳ ಒಕ್ಕೂಟದಿಂದ ಬೃಹತ್ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಸಿದರು.

ಜಿಲ್ಲಾ ಬಸವಕೇಂದ್ರದ ಅಧ್ಯಕ್ಷ ಎನ್‌ರಿಚ್ ಮಹದೇವಸ್ವಾಮಿ ಮಾತನಾಡಿ, ಬಸವಣ್ಣನವರು ಯಾವುದೇ ಒಂದು ಜಾತಿ, ಧರ್ಮ ಅಥವಾ ಸಮುದಾಯಕ್ಕೆ ಸೀಮಿತವಾದವರಲ್ಲ. ಅವರು ಇಡೀ ಮನುಕುಲಕ್ಕೆ ಸಮಾನತೆ, ಮಾನವೀಯತೆ, ಕಾಯಕ, ದಾಸೋಹ, ಸಾಮಾಜಿಕ ನ್ಯಾಯ ಮತ್ತು ಸ್ವಾಭಿಮಾನದ ಸಂದೇಶ ನೀಡಿದ ಮಹಾನ್ ವಿಶ್ವಗುರು. ಇಂತಹ ಮಹಾನ್‌ ಚೇತನದ ಕುರಿತು ಅಪಹಾಸ್ಯ ಮತ್ತು ಅವಹೇಳನ ಮಾಡುವುದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ವಿಶ್ವಗುರು ಬಸವಣ್ಣನವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎನ್ನಲಾದ ರವಿ ಹಂಚ್ ವಿರುದ್ಧ ರಾಜ್ಯ ಸರ್ಕಾರ ಮತ್ತು ಪೊಲೀಸ್ ಇಲಾಖೆ ಈ ಕೂಡಲೇಎಚ್ಚೆತ್ತುಕೊಂಡು ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಕಾನೂನಿನ ಅಡಿಯಲ್ಲಿ ಬಂಧನಕ್ಕೆ ಅಗತ್ಯವಾದ ಆಧಾರಗಳು ಕಂಡುಬಂದಲ್ಲಿ ಯಾವುದೇ ವಿಳಂಬವಿಲ್ಲದೆ ಅವರನ್ನು ಬಂಧಿಸಿ, ಸಮಗ್ರತನಿಖೆ ನಡೆಸಿ, ತಪ್ಪಿತಸ್ಥರೆಂದು ಸಾಬೀತಾದಲ್ಲಿ ಕಾನೂನು ಬದ್ಧ ಶಿಕ್ಷೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕಾನೂನು ಸಲಹೆಗಾರ ಗಟ್ಟವಾಡಿ ಮಹದೇವಸ್ವಾಮಿ, ವಕೀಲ ನಾಗಾರ್ಜುನ ಪೃಥ್ವಿ. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಯಳಂದೂರು ತಾಲೂಕು ಅಧ್ಯಕ್ಷ ಮಹದೇವಪ್ಪ, ಮರಿಯಾಲ ಸ್ವಾಮಿ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಸವಣ್ಣನ ವ್ಯಕ್ತಿತ್ವಕ್ಕೆ ಧಕ್ಕೆ: ಶೆಟ್ಟರ್ ಖಂಡನೆ
ವ್ಯಕ್ತಿಯ ಪರಿಪೂರ್ಣತೆಗೆ ಮಾತೃಭಾಷೆ ಅಗತ್ಯ: ಹಲಗತ್ತಿ