ಕೊಪ್ಪಳ:
ಈ ವೇಳೆ ಕರವೇ ಜಿಲ್ಲಾಧ್ಯಕ್ಷ ಗಿರೀಶಾನಂದ ಜ್ಞಾನಸುಂದರ ಮಾತನಾಡಿ, ಏ. 21ರಂದು ಭಾಗ್ಯನಗರದ ಮಹ್ಮದ್ ಭಾಷಾ ಅತ್ತಾರ ಮೈಸೂರಿನಿಂದ ಕೊಪ್ಪಳಕ್ಕೆ ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಆಗಮಿಸುತ್ತಿದ್ದರು. ಈ ವೇಳೆ ಟಿಸಿ ಟಿಕೆಟ್ ಚೆಕ್ ಮಾಡುವ ವೇಳೆ ಹಿಂದಿಯಲ್ಲಿ ಮಾತನಾಡಿದ್ದಾರೆ. ಆಗ ಮಹ್ಮದ್‌ಭಾಷಾ ಕನ್ನಡ ಮಾತನಾಡಿ ಎಂದು ಹೇಳಿದ್ದಾರೆ. ಇದರಿಂದ ಕುಪಿತಗೊಂಡ ಟಿಸಿ ಮೊಬೈಲ್ ಕಿತ್ತುಕೊಂಡು ದರ್ಪ ಮೆರೆದಿದ್ದಾನೆ. ಜತೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ದೌರ್ಜನ್ಯವೆಸಗಿದ್ದು ಬೇಸರದ ಸಂಗತಿ ಎಂದರು.
ಇತ್ತೀಚೆಗೆ ಬೆಂಗಳೂರಿನಲ್ಲಿ ವಾಯುಪಡೆಯ ಅಧಿಕಾರಿಯೊಬ್ಬರು ಕನ್ನಡಿಗನ ಮೇಲೆ ಹಲ್ಲೆ ನಡೆಸಿರುವ ಘಟನೆ ಮಾಸುವ ಮುನ್ನವೇ ಈ ಪ್ರಕರಣ ಬೆಳಕಿಗೆ ಬಂದಿರುವುದು ಖೇದಕರ ಸಂಗತಿ. ಪ್ರಯಾಣಿಕರಿಗೆ ಸುರಕ್ಷತೆ ಒದಗಿಸುವ ಅಧಿಕಾರಿಗಳೇ ದೌರ್ಜನ್ಯವೆಸಗಿದರೆ ರೈಲ್ವೆ ಇಲಾಖೆ ಮೇಲಿರುವ ನಂಬಿಕೆ ಹೋಗುತ್ತದೆ ಎಂದಿರುವ ಅವರು, ರಾಜ್ಯದಲ್ಲಿ ಕನ್ನಡ ಮಾತನಾಡಿ ಎಂದಿದ್ದಕ್ಕೆ ಹಲ್ಲೆ ಮಾಡಿದರೆ ನಾವು ಕರ್ನಾಟಕದಲ್ಲಿ ಬದುಕುತ್ತಿದ್ದೇವೆಯೇ ಎಂಬ ಪ್ರಶ್ನೆ ನಮ್ಮನ್ನು ಕಾಡುತ್ತಿದೆ ಎಂದು ಬೇಸರ ವ್ಯಕ್ತಡಿಸಿದರು.ಅವಾಚ್ಯ ಶಬ್ದಗಳಿಂದ ನಿಂದಿಸಿ ದೌಜ್ಯನ್ಯವೆಸಗಿದ ಟಿಕೆಟ್ ಕಲೆಕ್ಟರ್ ಮೇಲೆ ಸೂಕ್ತ ಕ್ರಮಕೈಗೊಂಡು ಕರ್ತವ್ಯದಿಂದ ಅಮಾನತು ಮಾಡಬೇಕೆಂದು ಇದೇ ವೇಳೆ ಒತ್ತಾಯಿಸಲಾಯಿತು.