ಕೊಪ್ಪಳ: ಜನರಲ್ಲಿರುವ ಮೌಢ್ಯದ ವಿರುದ್ಧ ಜಾಗೃತಿ ಮೂಡಿಸಿ ವೈಜ್ಞಾನಿಕ ಮನೋಭಾವ ಬೆಳೆಸುವ ಉದ್ದೇಶದಿಂದ ವೈಜ್ಞಾನಿಕ ಅಕಾಡೆಮಿ ಸ್ಥಾಪನೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಕೊಪ್ಪಳ ಜಿಲ್ಲಾ ಘಟಕ ಒತ್ತಾಯಿಸಿದೆ.
ಪರಿಷತ್ತಿನ ಜಿಲ್ಲಾಧ್ಯಕ್ಷ ಸಿದ್ದಲಿಂಗೇಶ್ವರ ಪೂಲಬಾವಿ ಮಾತನಾಡಿ, ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ಹುಲಿಕಲ್ ನಟರಾಜ್ ನೇತೃತ್ವದಲ್ಲಿ ಹಲವು ವರ್ಷಗಳಿಂದ ಮೌಢ್ಯದ ಕುರಿತು ರಾಜ್ಯದ ಜನರಲ್ಲಿ ಜಾಗೃತಿ ಮೂಡಿ ಸುತ್ತ ಬಂದಿದೆ. ಹಲವಾರು ಕಾರ್ಯಕ್ರಮ ಹಮ್ಮಿಕೊಂಡು ಮೌಢ್ಯದಲ್ಲಿರುವ ಜನರನ್ನು ಮುಖ್ಯ ವಾಹಿನಿಯ ತರುವಲ್ಲಿ ಪರಿಷತ್ತು ಶ್ರಮಿಸುತ್ತಿದೆ. ಇದಕ್ಕೆ ಪೂರಕವಾಗಿ ಸರ್ಕಾರದ ವತಿಯಿಂದ ವೈಜ್ಞಾನಿಕ ಅಕಾಡೆಮಿ ಸ್ಥಾಪಿಸುವ ಮೂಲಕ ಪರಿಷತ್ತಿನ ಕಾರ್ಯಕ್ಕೆ ಶಕ್ತಿ ತುಂಬಬೇಕು ಎಂದು ಒತ್ತಾಯಿಸಲಾಯಿತು.
ಈ ಕುರಿತು ಸರ್ಕಾರ ಆಸಕ್ತಿ ವಹಿಸಿ ಆದಷ್ಟು ಶೀಘ್ರ ಅಕಾಡೆಮಿ ಸ್ಥಾಪಿಸಬೇಕು. ಕಲ್ಯಾಣ ಕರ್ನಾಟಕ ಭಾಗದಲ್ಲಿ ವೈಜ್ಞಾನಿಕ ವಿಶ್ವವಿದ್ಯಾಲಯ ಸ್ಥಾಪನೆ ಮಾಡಬೇಕು ಎಂದು ಒತ್ತಾಯಿಸಿದರು.ಮನವಿ ಸ್ವೀಕರಿಸಿದ ಅಪರ ಜಿಲ್ಲಾಧಿಕಾರಿ ಸಾವಿತ್ರಿ ಕಡಿ ಸರ್ಕಾರಕ್ಕೆ ಕಳಿಸಲಾಗುವುದು ಎಂದು ಭರವಸೆ ನೀಡಿದರು.