ಸಕಲೇಶಪುರದಿಂದ ಮುರುಳಿ ಮೋಹನ್‌ ಉಚ್ಛಾಟನೆಗೆ ಆಗ್ರಹ

KannadaprabhaNewsNetwork |  
Published : Jan 20, 2026, 02:00 AM IST
19ಎಚ್ಎಸ್ಎನ್16:  | Kannada Prabha

ಸಾರಾಂಶ

ಜನವರಿ 16ರಂದು ಸಕಲೇಶಪುರದಲ್ಲಿ ನಡೆದ ಜಿಲ್ಲಾ ಉಸ್ತುವಾರಿ ಸಚಿವರ ಜನಸ್ಪಂದನ ಕಾರ್ಯಕ್ರಮದಲ್ಲಿ ಮುರುಳಿಮೋಹನ್ ಅವರು ಸ್ಥಳೀಯ ಮುಖಂಡ ಡಿ.ಸಿ.ಸಣ್ಣಸ್ವಾಮಿ ಅವರ ಮೇಲೆ ಹಲ್ಲೆ ಮಾಡಿದ್ದು, ಕೂಡಲೇ ಅವರ ಮೇಲೆ ಕ್ರಮ ಕೈಗೊಳ್ಳಬೇಕು. ಇಲ್ಲವಾದರೇ ಹೋರಾಟ ಮಾಡುವುದಾಗಿ ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ನಿಡುಗರನಹಳ್ಳಿ ಸಿದ್ದಪ್ಪ ಆಗ್ರಹಿಸಿದರು. ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಡಿ.ಸಿ. ಸಣ್ಣಸ್ವಾಮಿ ಅವರ ಮೇಲೆ ಮುರಳಿ ಮೋಹನ್ ಎಂಬವರು ಏಕಾಏಕಿ ಕೊರಳಪಟ್ಟಿ ಹಿಡಿದು ತಳ್ಳಿ ಹಲ್ಲೆ ನಡೆಸಿದ್ದಾರೆ. ಸಾರ್ವಜನಿಕರ ಎದುರಲ್ಲೇ ನಡೆದ ಈ ಘಟನೆ ಕ್ಷೇತ್ರದಲ್ಲಿ ಆತಂಕ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ ಎಂದು ನಿಡುಗರಹಳ್ಳಿ ಸಿದ್ದಪ್ಪ ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಹಾಸನ

ಜನವರಿ 16ರಂದು ಸಕಲೇಶಪುರದಲ್ಲಿ ನಡೆದ ಜಿಲ್ಲಾ ಉಸ್ತುವಾರಿ ಸಚಿವರ ಜನಸ್ಪಂದನ ಕಾರ್ಯಕ್ರಮದಲ್ಲಿ ಮುರುಳಿಮೋಹನ್ ಅವರು ಸ್ಥಳೀಯ ಮುಖಂಡ ಡಿ.ಸಿ.ಸಣ್ಣಸ್ವಾಮಿ ಅವರ ಮೇಲೆ ಹಲ್ಲೆ ಮಾಡಿದ್ದು, ಕೂಡಲೇ ಅವರ ಮೇಲೆ ಕ್ರಮ ಕೈಗೊಳ್ಳಬೇಕು. ಇಲ್ಲವಾದರೇ ಹೋರಾಟ ಮಾಡುವುದಾಗಿ ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ನಿಡುಗರನಹಳ್ಳಿ ಸಿದ್ದಪ್ಪ ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿ, ಕರ್ನಾಟಕ ಸರ್ಕಾರದ ಕಂದಾಯ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡರವರ ಸಮ್ಮುಖದಲ್ಲಿ, ಕ್ಷೇತ್ರದ ಶಾಸಕ ಸಿಮೆಂಟ್ ಮಂಜುರವರ ಅಧ್ಯಕ್ಷತೆಯಲ್ಲಿ ಈ ಜನಸ್ಪಂದನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಬೆಳಿಗ್ಗೆ ೧೨ ಗಂಟೆಯಿಂದ ಸಂಜೆ ೭ ಗಂಟೆಯವರೆಗೆ ನಡೆದ ಸಭೆಯಲ್ಲಿ ಸಾರ್ವಜನಿಕರಿಂದ ಕುಂದುಕೊರತೆಗಳ ಅರ್ಜಿಗಳನ್ನು ಸ್ವೀಕರಿಸಿ, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸ್ಥಳದಲ್ಲಿಯೇ ಪರಿಹಾರ ಒದಗಿಸುವ ಕಾರ್ಯ ನಡೆದಿದೆ. ಕಾರ್ಯಕ್ರಮದ ಯಶಸ್ಸಿಗೆ ಸಂಘಟನೆಯ ರಾಜ್ಯಾಧ್ಯಕ್ಷ ನಿಡುಗರಹಳ್ಳಿ ಸಿದ್ದಪ್ಪ ಸೇರಿದಂತೆ ಕಾಂಗ್ರೆಸ್ ಮುಖಂಡರು, ಶಾಸಕರು ಹಾಗೂ ಜಿಲ್ಲಾಡಳಿತದ ಕಾರ್ಯವೈಖರಿಯನ್ನು ಶ್ಲಾಘಿಸಿದ್ದಾರೆ. ಆದರೆ ಕಾರ್ಯಕ್ರಮ ಮುಕ್ತಾಯವಾದ ಬಳಿಕ ಸಂಜೆ ೭ ಗಂಟೆ ಸುಮಾರಿನಲ್ಲಿ, ಸಚಿವರು ಹಾಗೂ ಅಧಿಕಾರಿಗಳು ಸಕಲೇಶಪುರ ತಾಲೂಕು ಕಚೇರಿಗೆ ತೆರಳುತ್ತಿದ್ದ ವೇಳೆ, ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಡಿ.ಸಿ. ಸಣ್ಣಸ್ವಾಮಿ ಅವರ ಮೇಲೆ ಮುರಳಿ ಮೋಹನ್ ಎಂಬವರು ಏಕಾಏಕಿ ಕೊರಳಪಟ್ಟಿ ಹಿಡಿದು ತಳ್ಳಿ ಹಲ್ಲೆ ನಡೆಸಿದ್ದಾರೆ. ಸಾರ್ವಜನಿಕರ ಎದುರಲ್ಲೇ ನಡೆದ ಈ ಘಟನೆ ಕ್ಷೇತ್ರದಲ್ಲಿ ಆತಂಕ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ ಎಂದು ನಿಡುಗರಹಳ್ಳಿ ಸಿದ್ದಪ್ಪ ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಈ ರೌಡಿ ಸಂಸ್ಕೃತಿಯ ಕೃತ್ಯವನ್ನು ಸಂಘಟನೆ ಹಾಗೂ ಕಾಂಗ್ರೆಸ್ ಪಕ್ಷ ತೀವ್ರವಾಗಿ ಖಂಡಿಸಿದ್ದು, ಆರೋಪಿತ ವ್ಯಕ್ತಿಯನ್ನು ಕ್ಷೇತ್ರದಿಂದ ವಜಾಗೊಳಿಸುವುದರ ಜೊತೆಗೆ ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸಬೇಕೆಂದು ಆಗ್ರಹಿಸಿದೆ. ಅಲ್ಲದೆ, ದಲಿತರ ಸ್ವಾಭಿಮಾನಕ್ಕೆ ಧಕ್ಕೆ ತಂದಿರುವ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಕಾನೂನು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಗೃಹ ಸಚಿವ ಡಾ. ಜಿ. ಪರಮೇಶ್ವರ, ಸಮಾಜ ಕಲ್ಯಾಣ ಸಚಿವ ಹೆಚ್.ಸಿ. ಮಹದೇವಪ್ಪ ಮತ್ತು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ. ಆರೋಪಿತನ ವಿರುದ್ಧ ಕಠಿಣ ಕ್ರಮ ಜರುಗಿಸುವವರೆಗೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ಹಾಗೂ ಹೋರಾಟ ಮುಂದುವರಿಸಲಾಗುವುದು ಎಂದು ಸಂಘಟನೆ ಹಾಗೂ ಕಾಂಗ್ರೆಸ್ ಪಕ್ಷದ ನಾಯಕರು ಎಚ್ಚರಿಕೆ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಫೆಬ್ರವರಿಯಿಂದ ರಾಜ್ಯದಲ್ಲಿ ಎಸ್‌ಐಆರ್‌?
ಇವಿಎಂ ಬೇಡ ಎನ್ನುತ್ತಿದ್ದ ಕಾಂಗ್ರೆಸ್ಸಿಗೆ ಗುಡ್‌ನ್ಯೂಸ್‌