ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ರಂಗನಾಥ್ ಒತ್ತಾಯ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಬಾಂಗ್ಲಾ ದೇಶದಲ್ಲಿ ಹಿಂದೂ ಅಲ್ಪಸಂಖ್ಯಾತ ಸಮುದಾಯಕ್ಕೆ ರಕ್ಷಣೆ ಕೊಡುವ ಜೊತೆಗೆ ನಾಶಗೊಂಡ ಹಿಂದೂಗಳ ಮನೆ, ದೇವಾಲಯಗಳನ್ನು ಪುನರ್ ನಿರ್ಮಾಣ ಮಾಡಲು ನೂತನ ಸರ್ಕಾರ ಕ್ರಮ ವಹಿಸಬೇಕು ಎಂದು ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ರಂಗನಾಥ್ ಒತ್ತಾಯಿಸಿದರು.
ಈ ಭೀಕರ ಪರಿಸ್ಥಿತಿ ಲಾಭ ಪಡೆದು ಗಡಿಯಾಚೆಯ ಜಿಹಾದಿಗಳು ಒಳ ನುಸುಳುವ ಪ್ರಯತ್ನ ನಡೆಸುತ್ತಿದ್ದು, ಕೇಂದ್ರ ಸರ್ಕಾರ ಜಾಗರೂಕತೆ ವಹಿಸಬೇಕು. ಭದ್ರತಾ ಪಡೆಗಳು ಭಾರತ, ಬಾಂಗ್ಲಾ ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.ಬಾಂಗ್ಲಾದಲ್ಲಿ ಹಿಂಸಾಚಾರ ನಡೆಯುತ್ತಿದ್ದು, ಈ ಗೊಂದಲದ ಪರಿಸ್ಥಿತಿಯಲ್ಲಿ ತೀವ್ರಗಾಮಿ ಜಿಹಾದಿ ಶಕ್ತಿಗಳು ಹಿಂದೂ ಸಮಾಜದ ಮೇಲೆ ದೊಡ್ಡ ಪ್ರಮಾಣದ ದಾಳಿ ಪ್ರಾರಂಭಿಸಿವೆ. ಬಾಂಗ್ಲಾದಲ್ಲಿ ಕಳೆದ ಹಲವಾರು ದಿನಗಳಿಂದ ಹಿಂದೂ ಧಾರ್ಮಿಕ ಸ್ಥಳಗಳು, ಹಿಂದೂ ವ್ಯಾಪಾರ ಸಂಸ್ಥೆ ಮತ್ತು ಮನೆಗಳನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಯುತ್ತಿವೆ ಎಂದು ಆರೋಪಿಸಿದರು.
ಬಾಂಗ್ಲಾ ದೇಶಾದ್ಯಂತ ಪ್ರತಿ ಜಿಲ್ಲೆಯಲ್ಲಿ ಹಿಂದೂ ರುದ್ರಭೂಮಿ, ನೂರಕ್ಕೂ ಹೆಚ್ಚು ದೇವಾಲಯ ಭಾರಿ ಪ್ರಮಾಣದಲ್ಲಿ ಹಾನಿ ಯಾಗಿದ್ದು, ಹಿಂಸಾಚಾರ ಮತ್ತು ಭಯೋತ್ಪಾದನೆಗೆ ಗುರಿಯಾಗದ ಯಾವುದೇ ಜಿಲ್ಲೆ ಬಾಂಗ್ಲಾದಲ್ಲಿ ಉಳಿದಿಲ್ಲ ಎಂದರು.ಕಾಲ ಕಾಲಕ್ಕೆ ಸಂಭವಿಸುವ ಇಂತಹ ಗಲಭೆಗಳ ಪರಿಣಾಮ ವಿಭಜನೆ ಸಮಯದಲ್ಲಿ ಬಾಂಗ್ಲಾ ದೇಶದಲ್ಲಿ ಶೇ.32 ರಷ್ಟಿದ್ದ ಹಿಂದೂಗಳು ಈಗ ಶೇ.8ಕ್ಕಿಂತ ಕಡಿಮೆ ಇದ್ದಾರೆ ಮತ್ತು ಅವರ ನಿರಂತರ ಜಿಹಾದಿಗಳ ಕಿರುಕುಳಕ್ಕೆ ಬಲಿಯಾಗುತ್ತಿದ್ದಾರೆ ಎಂದು ವಿಷಾಧಿಸಿದರು.
ಬಾಂಗ್ಲಾದಲ್ಲಿ ಹಿಂದೂಗಳ ಮನೆ, ಮಠ, ಅಂಗಡಿ, ಕಚೇರಿ, ವಾಣಿಜ್ಯ ಸಂಸ್ಥೆ, ಮಹಿಳೆಯರು ಮತ್ತು ಮಕ್ಕಳು, ಶ್ರದ್ಧಾ ಕೇಂದ್ರ ಗಳು ಸುರಕ್ಷಿತವಾಗಿಲ್ಲ. ಅಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಸ್ಥಿತಿ ಆತಂಕಕಾರಿಯಾಗಿದೆ. ಈ ನಿಟ್ಟಿನಲ್ಲಿ ನೂತನವಾಗಿ ಅಸ್ಥಿತ್ವಕ್ಕೆ ಬಂದ ಸರ್ಕಾರ ರಕ್ಷಣೆ ಒದಗಿಸುವಂತೆ ಒತ್ತಾಯಿಸಿದರು.ಸುದ್ದಿಗೋಷ್ಠಿಯಲ್ಲಿ ಹಿಂದೂ ಹಿತರಕ್ಷಣಾ ಸಮಿತಿ ಸಂಯೋಜಕ ರಾಕೇಶ್ ಮರಡಿ, ಅಕ್ಷಯ್, ನರೇಂದ್ರ ಉಪಸ್ಥಿತರಿದ್ದರು.
ಪೋಟೋ ಫೈಲ್ ನೇಮ್ 12 ಕೆಸಿಕೆಎಂ 5