ಕನ್ನಡಪ್ರಭ ವಾರ್ತೆ ಬೀದರ್
ಸೇನೆಯ ಜಿಲ್ಲಾಧ್ಯಕ್ಷ ಗಣೇಶ ಪಾಟೀಲ ಜ್ಯಾಂತಿ ನೇತೃತ್ವದಲ್ಲಿ ಸೇನೆಯ ಜಿಲ್ಲಾ ಘಟಕದ ಪದಾಧಿಕಾರಿಗಳು ನಗರದಲ್ಲಿ ಮಂಗಳವಾರ ಈ ಕುರಿತು ಮಹಾನಗರ ಪಾಲಿಕೆಯ ಆಯುಕ್ತರಿಗೆ ಬರೆದ ಮನವಿ ಪತ್ರವನ್ನು ಪಾಲಿಕೆಯ ಅಧಿಕಾರಿಗೆ ಸಲ್ಲಿಸಿ, ನಾಮಫಲಕಗಳಲ್ಲಿ ಕನ್ನಡ ಕಡ್ಡಾಯವಾಗಿ ಬಳಸಬೇಕು ಎಂಬ ರಾಜ್ಯ ಸರ್ಕಾರದ ಆದೇಶ ನಗರದಲ್ಲಿ ಪಾಲನೆಯಾಗುತ್ತಿಲ್ಲ. ಅನ್ಯ ಭಾಷೆ ನಾಮಫಲಕಗಳೇ ಹೆಚ್ಚಾಗಿ ವಿಜೃಂಭಿಸುತ್ತಿವೆ ಎಂದು ದೂರಿದರು.
ನಾಮಫಲಕಗಳಲ್ಲಿ ಕಡ್ಡಾಯ ಕನ್ನಡ ಬಳಕೆಗೆ ಸಂಬಂಧಿಸಿದಂತೆ ಹಿಂದೆ ಎರಡು ಬಾರಿ ಮಹಾನಗರ ಪಾಲಿಕೆಗೆ ಮನವಿ ಪತ್ರ ಸಲ್ಲಿಸಿದರೂ, ಯಾವುದೇ ಪ್ರಯೋಜನವಾಗಿಲ್ಲ. ಮಹಾನಗರ ಪಾಲಿಕೆ ಕನ್ನಡ ಭಾಷೆ ಅನುಷ್ಠಾನದ ಕುರಿತು ಉದಾಸೀನ ತೋರುತ್ತಿರುವುದು ಸರಿಯಲ್ಲ ಎಂದು ತೀವ್ರ ಅಸಮಾಧಾನ ಹೊರ ಹಾಕಿದರು.ನಗರದ ಸೌಂದರ್ಯ ಹೆಚ್ಚಿಸಲು ಅಳವಡಿಸಲಾದ ಆಕರ್ಷಕ ವಿದ್ಯುತ್ ಕಂಬಗಳಿಗೆ ಆಂಗ್ಲ ಭಾಷೆಯ ಪೋಸ್ಟರ್‌ಗಳನ್ನು ಅಳವಡಿಸಲಾಗುತ್ತಿದೆ. ಇದಕ್ಕೆ ಮಹಾನಗರ ಪಾಲಿಕೆ ಅಧಿಕಾರಿಗಳು ಹೇಗೆ ಪರವಾನಗಿ ನೀಡಿದರು, ಸರ್ಕಾರದ ಆದೇಶಕ್ಕೆ ಬೆಲೆ ಇಲ್ಲವೇ ಎಂದು ಪ್ರಶ್ನಿಸಿದರು.
ಸೇನೆಯ ಜಿಲ್ಲಾ ಉಪಾಧ್ಯಕ್ಷರಾದ ದತ್ತು ಅಲ್ಲಂಕೇರೆ, ಉದಯ ಅಷ್ಟೂರೆ, ಶಿವತೀರ್ಥ ಸ್ವಾಮಿ, ಬೀದರ್ ಉತ್ತರ ಘಟಕದ ಅಧ್ಯಕ್ಷ ಅನಿಲ್ ರಾಜಗೀರಾ, ನಗರ ಘಟಕದ ಅಧ್ಯಕ್ಷ ಸಂತೋಷ್ ಪಾಟೀಲ, ಪದಾಧಿಕಾರಿಗಳಾದ ಗಿರೀಶ್ ಬಿರಾದಾರ, ಮಹಾರುದ್ರ ಅಮದಲಪಾಡೆ, ರವಿ ಪಾಟೀಲ, ಅನಿಲ್ ರೆಡ್ಡಿ ಮತ್ತಿತರರು ಇದ್ದರು.