ಕನ್ನಡಪ್ರಭ ವಾರ್ತೆ ಮಡಿಕೇರಿ
ನಗರದ ಅರಣ್ಯ ಭವನ ಎದುರು ಜಮಾಯಿಸಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಅರಣ್ಯ ಇಲಾಖೆ , ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿ ಅಸಮಧಾನ ಹೊರಹಾಕಿದರು. ಮರಗಣತಿಗೆ ನೀಡಲಾದ ಆದೇಶವನ್ನು ಸರ್ಕಾರ ಕೂಡಲೇ ಹಿಂಪಡೆಯಬೇಕೆಂದು ಒತ್ತಾಯಿಸಿದರು.
ರಾಜ್ಯ ಸರ್ಕಾರ ಬೆಳೆಗಾರರ ವಿರೋಧಿಯಾಗಿದ್ದು, ರೈತ ವಿರೋಧಿ ನೀತಿ ಅನುಸರಿಸುತ್ತಿದೆ. ಅಲ್ಲದೆ, ಬೆಳೆಗಾರರಿಗೆ ವಿನಾಕಾರಣ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಮರಗಣತಿ ಆದೇಶವನ್ನು ಕೂಡಲೇ ಹಿಂಪಡೆದು ಮರ ಗಣತಿ ಕಾರ್ಯ ಸ್ಥಗಿತಗೊಳಿಸದಿದ್ದಲ್ಲಿ ಹೋರಾಟ ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು.ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಮಾಜಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಪಿ. ಸುನೀಲ್ ಸುಬ್ರಹ್ಮಣಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ವಕ್ತಾರ ಸುಬ್ರಹ್ಮಣ್ಯ ಉಪಾಧ್ಯಾಯ, ಅರುಣ್ ಕುಮಾರ್ ಬಿ.ಕೆ. ತಳೂರು ಕಿಶೋರ್ ಕುಮಾರ್, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷ ಅನಿತಾ ಪೂವಯ್ಯ, ಹಿಂದುಳಿದ ಮೋರ್ಚಾ ಜಿಲ್ಲಾಧ್ಯಕ್ಷ ಅಪ್ರು ರವೀಂದ್ರ ಸೇರಿದಂತೆ ಬಿಜೆಪಿ ಪ್ರಮುಖರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಗಳಾಗಿದ್ದರು.