ಏಳನೇ ವೇತನ ಆಯೊಗದ ವರದಿ ಯಥಾವತ್‌ ಜಾರಿಗೆ ಆಗ್ರಹ

KannadaprabhaNewsNetwork |  
Published : Jul 14, 2024, 01:32 AM IST
ಚಿತ್ತಾಪುರ ಪಟ್ಟಣದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಸವರಾಜ ಬಳೂಂಡಗಿ ನೇತೃತ್ವದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು. | Kannada Prabha

ಸಾರಾಂಶ

ಏಳನೇ ವೇತನ ಆಯೊಗದ ವರದಿ ಯಥಾವತ್ತಾಗಿ ಜಾರಿ ಮಾಡುವುದು ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಸವರಾಜ ಬಳೂಂಡಗಿ ಒತ್ತಾಯಿಸಿದರು.

ಕನ್ನಡಪ್ರಭ ವಾರ್ತೆ ಚಿತ್ತಾಪುರ

ಏಳನೇ ವೇತನ ಆಯೊಗದ ವರದಿ ಯಥಾವತ್ತಾಗಿ ಜಾರಿ ಮಾಡುವುದು ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಸವರಾಜ ಬಳೂಂಡಗಿ ಒತ್ತಾಯಿಸಿದರು.

ಪಟ್ಟಣದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಹಕ್ಕೋತ್ತಾಯದ ಮನವಿ ಸಲ್ಲಿಸಿ ಮಾತನಾಡಿದ ಅವರು, ರಾಜ್ಯದ ಎಲ್ಲಾ ಕಂದಾಯ ಜಿಲ್ಲೆ ೩ ಶೈಕ್ಷಣಿಕ ಜಿಲ್ಲೆ ಹಾಗೂ ೧೮೩ ತಾಲೂಕುಗಳಲ್ಲಿ ಸಂಘದ ಶಾಖೆಗಳನ್ನು ಹೊಂದಿದ್ದು ಸಮಸ್ತ ೬ ಲಕ್ಷ ರಾಜ್ಯ ಸರ್ಕಾರಿ ನೌಕರರನ್ನು ಪ್ರತಿನಿಧಿಸುವ ಏಕೈಕ ಬೃಹತ್ ಸಂಘಟನೆಯಾಗಿರುತ್ತದೆ. ಸಂಘವು ರಾಷ್ಟ್ರ ಹಾಗೂ ರಾಜ್ಯದಲ್ಲಿ ಸಂಭವಿಸುವ ಪ್ರಕೃತಿ ವಿಕೊಪ, ಉತ್ತರ ಕರ್ನಾಟಕದ ಪ್ರವಾಸ ಕೋವಿಡ್ ಸಂಕಷ್ಟದಲ್ಲಿ ಸರ್ಕಾರಕ್ಕೆ ಅರ್ಥಿಕ ಸಹಕಾರ ನೀಡಿ ಸೇವಾ ಕಾರ್ಯ ನಿರ್ವಹಿಸುವ ಮೂಲಕ ದೇಶದಲ್ಲಿಯೇ ಮಾದರಿ ಸಂಘಟನೆಯಾಗಿದೆ.

ರಾಜ್ಯದಲ್ಲಿ ೨.೬೦ ಲಕ್ಷ ಹುದ್ದೆಗಳು ಖಾಲಿ ಇದ್ದರೂ ಸಹ ಸರ್ಕಾರವು ಜನ ಸಾಮಾನ್ಯರ ಕಲ್ಯಾಣ ಹಾಗೂ ರಾಜ್ಯದ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸುವ ಯೊಜನೆಗಳನ್ನು ಶ್ರೀಸಾಮಾನ್ಯರಿಗೆ ತಲುಪಿಸುವ ಕಾರ್ಯದ ಜೊತೆ ರಾಜ್ಯದ ಅಭಿವೃದ್ಧಿ ಸೂಚ್ಯಂಕದ ಬೆಳವಣೆಗೆಯಲ್ಲಿ ಹಾಗೂ ಜಿ.ಎಸ್.ಟಿ ತೆರಿಗೆ ಸಂಗ್ರಹಣೆಯಲ್ಲಿ ಇಡೀ ದೇಶಕ್ಕೆ ಮಾದರಿಯಾಗಲು ಸರ್ಕಾರಿ ನೌಕರರ ಪಾತ್ರ ಪ್ರಮುಖವಾಗಿದೆ. ಇಂತಹ ಕಾರ್ಯಾಂಗದ ನೌಕರರ ಬೇಡಿಕೆಗಳನ್ನು ಈಡೇರಿಸುವದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಒತ್ತಾಯಿಸಿದರು.

ರಾಜ್ಯ ೭ನೇ ವೇತನ ಆಯೊಗವು ಸರ್ಕಾರಕ್ಕೆ ಸಲ್ಲಿಸಿರುವ ವರದಿಯನ್ನು ಯಥಾವತ್ತಾಗಿ ಅನುಷ್ಟಾನಗೊಳಿಸಿ ಆದೇಶ ಹೊರಡಿಸುವುದು.

ರಾಜ್ಯ ೭ನೇ ವೇತನ ಆಯೊಗವು ರಾಜ್ಯ ಸರ್ಕಾರಕ್ಕೆ ಸಲ್ಲಿಸಿರುವ ಶಿಫಾರಸ್ಸು ವರದಿಯಲ್ಲಿನ ಫಿಟ್‌ಮೆಂಟ್ ಸೌಲಭ್ವನ್ನು ಕನಿಷ್ಟ ೨೭.೫೦ಕ್ಕೆ ಹೆಚ್ಚಿಸಿ ಕಾಲ್ಪನಿಕವಾಗಿ ೧-೭-೨೨ರಿಂದ ಅನ್ವಯವಾಗುವಂತೆ ವೇತನ ನಿಗದಿಪಡಿಸಿ ೧-೪-೨೦೨೪ ರಿಂದ ಆರ್ಥಿಕ ಸೌಲಭ್ಯವನ್ನು ನೀಡಿ ಸರ್ಕಾರಿ ಆದೇಶ ಹೊರಡಿಸುವದು. ಎನ್.ಪಿ.ಎಸ್ ರದ್ದುಪಡಿಸಿ ಹಳೆ ಪಿಂಚಣಿ ಯೊಜನೆಯನ್ನು ಮರು ಜಾರಿಗೊಳಿಸುವದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ತಹಸೀಲ್ದಾರ ರವರಿಗೆ ಜನವಿ ಪತ್ರವನ್ನು ಸಲ್ಲಿಸಿದರು.

ಸಂಘದ ಪದಾಧಿಕಾರಿಗಳಾದ ಬಸಪ್ಪ ಯಂಬತ್ನಾಳ, ಉಸ್ಮಾನ ಗಣಿ, ಉದಯಶಂಕರ ಮೊದಿ, ಶಿವರಾಜಕುಮಾರ, ರಾಜೇಂದ್ರ ಪ್ರಸಾದ, ಶಿವಾನಂದ ನಾಲವಾರ, ಕಾಶಿರಾಯ ಕಲಾಲ, ರಮೇಶ ಪತ್ತಾರ, ವಿಜಯಕುಮಾರ ಲೊಡ್ಡನೊರ, ರಾಜಕುಮಾರ ದುಮ್ಮನಸೂರ, ಹೀರಾಲಾಲ್, ಗಂಗಮ್ಮ ಹಿರೆಮಠ, ಮಧುಸೂಧನ ಘಾಳೆ, ಸಿದ್ರಾಮ ವಾಲಿ, ಸೊಲದಪ್ಪ ಬಬಲಾದ, ಸುನಿಲ್ ಯನಗುಂಟಿಕ್, ಚಂದ್ರಶ್ಯಾ, ಶರಣಬಸಪ್ಪ ಬಮ್ಮನಳ್ಳಿಕರ್, ಪ್ರಕಾಶ ಬಜಂತ್ರಿ ಸೇರಿದಂತೆ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ