ಸ್ವಾಮಿನಾಥನ್ ಆಯೋಗದ ವರದಿ ಜಾರಿಗೆ ಆಗ್ರಹ

KannadaprabhaNewsNetwork |  
Published : Feb 15, 2024, 01:32 AM IST
ಪೊಟೋ ಪೈಲ್ ನೇಮ್ ೧೪ಎಸ್‌ಜಿವಿ೨  ರೈತರ ಸಾಲ ಮನ್ನಾ, ಬೆಂಬಲ ಬೆಲೆ ಘೋಷಣೆ, ಸ್ವಾಮಿನಾಥನ್ ಆಯೋಗ ವರದಿ ಜಾರಿಗೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನ ಸೇನೆ ಶಿಗ್ಗಾವಿ ತಾಲೂಕಾ ಕಾರ್ಯಕರ್ತರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿ ತಹಶೀಲ್ದಾರ ಮೂಲಕ ಮನವಿ ಸಲ್ಲಿಸಿದರು. | Kannada Prabha

ಸಾರಾಂಶ

ದೇಶದ ಆರ್ಥಿಕತೆಗೆ ಬಹುದೊಡ್ಡ ಪಾಲು ಕೃಷಿ ಚಟುವಟಿಕೆಯೇ ಆಗಿರುವುದರಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರ ರೈತರ ಸಾಲ ಮನ್ನಾ, ಬೆಂಬಲ ಬೆಲೆ ಘೋಷಣೆ, ಸ್ವಾಮಿನಾಥನ್ ಆಯೋಗ ವರದಿ ಜಾರಿ ಮಾಡಬೇಕು.

ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನ ಸೇನೆ ವತಿಯಿಂದ ಪ್ರತಿಭಟನೆ, ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ

ಕನ್ನಡಪ್ರಭ ವಾರ್ತೆ ಶಿಗ್ಗಾಂವಿ

ರೈತರ ಸಾಲ ಮನ್ನಾ, ಬೆಂಬಲ ಬೆಲೆ ಘೋಷಣೆ, ಸ್ವಾಮಿನಾಥನ್ ಆಯೋಗ ವರದಿ ಜಾರಿಗೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನ ಸೇನೆಯ ತಾಲೂಕು ಕಾರ್ಯಕರ್ತರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ದಾರ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಜಿಲ್ಲಾ ಘಟಕದ ಅಧ್ಯಕ್ಷ ರಾಮು ತಳವಾರ ಮಾತನಾಡಿ, ರಾಜ್ಯದಲ್ಲಿ ಸತತವಾಗಿ ಅತಿವೃಷ್ಟಿ ಹಾಗೂ ಅನಾವೃಷ್ಟಿಯ ಪರಿಣಾಮವಾಗಿ ರೈತರು ಸಂಕಷ್ಟದಲ್ಲಿದ್ದಾರೆ. ಈ ವರ್ಷ ಬರಗಾಲದ ಪರಿಣಾಮವಾಗಿ ಜನರು ಉದ್ಯೋಗ ಅರಿಸಿಕೊಂಡು ಅನ್ಯ ರಾಜ್ಯಗಳಿಗೆ ಗುಳೆ ಹೊರಟ್ಟಿದ್ದಾರೆ. ಅಲ್ಲದೇ ಅನೇಕ ರೈತರು ಸಾಲಭಾದೆಯಿಂದ ಹೊರಬರಲು ಸಾಧ್ಯವಾಗದೆ ತಮ್ಮ ಕೃಷಿ ಜಮೀನು ಮಾರಾಟ ಮಾಡುತ್ತಿದ್ದಾರೆ. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ರೈತರ ಸಮಸ್ಯೆಗಳಿಗೆ ಪರಿಹಾರ ನೀಡಲು ವಿಫಲವಾಗಿವೆ. ದೇಶದ ಆರ್ಥಿಕತೆಗೆ ಬಹುದೊಡ್ಡ ಪಾಲು ಕೃಷಿ ಚಟುವಟಿಕೆಯೇ ಆಗಿರುವುದರಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರ ರೈತರ ಸಾಲ ಮನ್ನಾ, ಬೆಂಬಲ ಬೆಲೆ ಘೋಷಣೆ, ಸ್ವಾಮಿನಾಥನ್ ಆಯೋಗ ವರದಿ ಜಾರಿ ಮಾಡಬೇಕು ಎಂದು ಆಗ್ರಹಿಸಿದರು

ಸೇನೆ ಜಿಲ್ಲಾ ರೈತ ಘಟಕದ ಅಧ್ಯಕ್ಷ ಶರಣಪ್ಪ ಶಾಂತಗೇರಿ ಮಾತನಾಡಿದರು.

ಈ ಸಂದರ್ಭದಲ್ಲಿ ತಾಲೂಕಾ ರೈತ ಘಟಕದ ಅಧ್ಯಕ್ಷ ವೀರಭದ್ರಗೌಡ್ರು ಪೋಲಿಸಗೌಡ್ರು, ಬಂಕಾಪೂರ ಹೋಬಳಿ ಘಟಕದ ಅಧ್ಯಕ್ಷ ಮಲ್ಲಪ್ಪ ಮಾಕಾಪುರ ಹಾಗೂ ಮುಖಂಡರಾದ ರಮೇಶ ಈಟಿ, ಗದಿಗೆಪ್ಪಗೌಡ ಪೋಲಿಸಗೌಡ್ರ, ತಮ್ಮಣಗೌಡ ಹಿರೇಗೌಡ್ರ, ನೀಲಕಂಠಪ್ಪ ಹುಬ್ಬಳ್ಳಿ, ಫಕ್ಕೀರಪ್ಪ ಹೂಗಾರ, ವಿಶ್ವನಾಥಗೌಡ ಪಾಟೀಲ, ಯಲ್ಲಪ್ಪರೆಡ್ಡಿ ಹೊರಕೇರಿ, ರಾಜು ಲಮಾಣಿ ಸೇರಿದಂತೆ ಅನೇಕರಿದ್ದರು.

PREV

Recommended Stories

ರಾಹುಲ್‌ ಗಾಂಧಿ ಧರಣಿಗೆ 4500 ಪೊಲೀಸರ ಭದ್ರತೆ
ಹಳಿತಪ್ಪಿದ ಬೆಂಗಳೂರು ಉಪನಗರ ರೈಲು ಯೋಜನೆ : ಕೆ-ರೈಡ್ ಜತೆಗಿನ ಎಲ್‌ ಆ್ಯಂಡ್‌ ಟಿ ಗುತ್ತಿಗೆ ರದ್ದು