ಕಂದಾಯ ಭೂಮಿ ಅರಣ್ಯ ಇಲಾಖೆಗೆ ವರ್ಗಾಯಿಸದಿರಲು ಒತ್ತಾಯ

KannadaprabhaNewsNetwork |  
Published : May 24, 2025, 12:25 AM IST
ಮೂಡಿಗೆರೆ ತಾಲ್ಲೂಕಿನ ಕಂದಾಯ ಭೂಮಿಯನ್ನು ಅರಣ್ಯ ಇಲಾಖೆಗೆ ವರ್ಗಾಯಿಸದಂತೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರು ಶುಕ್ರವಾರ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಅವರಿಗೆ ಮನವಿ ಸಲ್ಲಿಸಿದರು. | Kannada Prabha

ಸಾರಾಂಶ

ಚಿಕ್ಕಮಗಳೂರುಮೂಡಿಗೆರೆ ತಾಲೂಕಿನ ಕಂದಾಯ ಭೂಮಿಯನ್ನು ಅರಣ್ಯ ಇಲಾಖೆಗೆ ವರ್ಗಾಯಿಸದಂತೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ, ಶುಕ್ರವಾರ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಗೆ ಮನವಿ ಸಲ್ಲಿಸಿದರು.

ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಗೆ ಮನವಿ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಮೂಡಿಗೆರೆ ತಾಲೂಕಿನ ಕಂದಾಯ ಭೂಮಿಯನ್ನು ಅರಣ್ಯ ಇಲಾಖೆಗೆ ವರ್ಗಾಯಿಸದಂತೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ, ಶುಕ್ರವಾರ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಗೆ ಮನವಿ ಸಲ್ಲಿಸಿದರು.

ಬಳಿಕ ಮಾತನಾಡಿದ ಎಂ.ಪಿ.ಕುಮಾರಸ್ವಾಮಿ, ಮುಂದಿನ ಪೀಳಿಗೆಯ ಮೂಲಭೂತ ಸೌಲಭ್ಯ ಗಮನದಲ್ಲಿಟ್ಟುಕೊಂಡು ಕಂದಾಯ ಭೂಮಿಯನ್ನು ಅರಣ್ಯಕ್ಕೆ ಸೇರಿಸಬಾರದು. ಪ್ರಸ್ತುತ 4/1 ಆಗಿರುವ ಅನೇಕ ಗ್ರಾಮಗಳ ನೋಟಿಫಿಕೇಷನ್‌ ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.ಇದೀಗ ಕಳಸ ತಾಲೂಕಿನ ಎಸ್.ಕೆ.ಮೇಗಲ್, ಮಾವಿನಕೆರೆ, ಕಗ್ಗನಹಳ್ಳ, ಹೊರನಾಡು, ಬಾಳೂರು ಹೋಬಳಿಯ ಕಲ್ಮನೆ, ಹಾದಿಓಣಿ, ಕೂವೆ, ತೆಲಗೂರು, ಆಲ್ದೂರು ಹೋಬಳಿಯ ಹಳಿಯೂರು, ಬನ್ನೂರು, ಆವ್ವಳ್ಳಿ, ಇಳೇಖಾನ್, ಬೆಳಗೋಡು, ವಸ್ತಾರೆ, ಬಾಚಿನಗಹಳ್ಳಿ, ಹಲಸುಮನೆ, ಕದ್ರಿಮಿದ್ರಿ ಗ್ರಾಮಗಳಲ್ಲಿ 4/1 ನೋಟಿಫಿಕೇಷನ್ ಪರಿವರ್ತನೆ ಮಾಡಲು ಅರಣ್ಯ ಇಲಾಖೆ ಸಿದ್ಧತೆ ಮಾಡಿಕೊಂಡಿದೆ ಎಂದರು.ಈ ಹಿಂದೆ ಅನೇಕ ಕಂದಾಯ ಭೂಮಿಯನ್ನು ಅರಣ್ಯ ಭೂಮಿಯಾಗಿ ಪರಿವರ್ತನೆ ಮಾಡಲಾಗಿದೆ. ಅಂತ ಕಡೆಗಳಲ್ಲಿ ಕೂಡ ರೈತರು ಬೀದಿ ಪಾಲಾಗಿದ್ದಾರೆ. ಬಹುತೇಕ ಗ್ರಾಮದ ಭೂಮಿಗಳಲ್ಲಿ ಕೃಷಿಕರು, ನಿವೇಶನ ರಹಿತರು ವಾಸವಾಗಿದ್ದು ಜೊತೆಗೆ ಸಾವಿರಾರು ಮಂದಿ ನಿವೇಶನಕ್ಕಾಗಿ ಕಾದು ಕುಳಿತುಕೊಂಡಿದ್ದಾರೆ ಎಂದು ಹೇಳಿದರು.ಇನ್ನೂ ಕೆಲವೆಡೆ ಸಾವಿರಾರು ಕುಟುಂಬಗಳು, ಬೆಳೆಗಾರರು ಕೂಲಿ ಲೈನ್‌ಗಳಲ್ಲಿ ನಿವೇಶನಕ್ಕಾಗಿ, ಸ್ವಂತ ಮನೆ ನಿರ್ಮಿಸಿ ಕೊಳ್ಳಲು ಕನಸು ಕಾಣುತ್ತಿದ್ದಾರೆ. ಅಂಗನವಾಡಿ ಶಾಲೆ, ಆಟದ ಮೈದಾನ, ಸಮುದಾಯ ಭವನ, ಸ್ಮಶಾನಕ್ಕೆ ಜಾಗವಿಲ್ಲದೇ ತೊಂದರೆ ಅನುಭವಿಸುತ್ತಿದ್ದಾರೆ ಎಂದರು.ಆದ್ದರಿಂದ ಜಿಲ್ಲೆಯ ಯಾವುದೇ ಗ್ರಾಮದ ಕಂದಾಯ ಭೂಮಿಯನ್ನು ಅರಣ್ಯ ಎಂದು ಪರಿವರ್ತನೆ ಮಾಡಬೇಕಾದರೆ ಎಲ್ಲಾ ಮೂಲಭೂತ ಸೌಲಭ್ಯದ ಕೊರತೆ ನೀಗಿಸಬೇಕಾಗಿದೆ ಮತ್ತು ಅರಣ್ಯಕ್ಕೆ ವರ್ಗಾಯಿಸುವ ವೇಳೆ ಮುಂದಿನ ಪೀಳಿಗೆಗೆಯನ್ನು ಗಮನದಲ್ಲಿಟ್ಟುಕೊಂಡು ನಿರ್ಧಾರ ಕೈ ಗೊಳ್ಳಬೇಕು ಎಂದು ಒತ್ತಾಯಿಸಿದರು.ಈ ಸಂದರ್ಭದಲ್ಲಿ ಎಸ್ಸಿಎಸ್ಟಿ ದೌರ್ಜನ್ಯ ನಿಯಂತ್ರಣ ಸಮಿತಿ ಸದಸ್ಯ ಹುಣಸೇಮಕ್ಕಿ ಲಕ್ಷ್ಮಣ್, ಮುಖಂಡರಾದ ಹರೀಶ್ ಮಿತ್ರ, ಕಬ್ಬಿಕೆರೆ ಮೋಹನ್‌ಕುಮಾರ್, ಭಾರತಿ, ದಿವಾಕರ್ ಹಾಜರಿದ್ದರು.

23 ಕೆಸಿಕೆಎಂ 2ಮೂಡಿಗೆರೆ ತಾಲೂಕಿನ ಕಂದಾಯ ಭೂಮಿಯನ್ನು ಅರಣ್ಯ ಇಲಾಖೆಗೆ ವರ್ಗಾಯಿಸದಂತೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ಶುಕ್ರವಾರ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಗೆ ಮನವಿ ಸಲ್ಲಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗುಂಡ್ಲುಪೇಟೆಯಲ್ಲಿ ಸಿದ್ಧಗಂಗಾ ಶ್ರೀಗಳ ದಾಸೋಹ ದಿನಾಚರಣೆ
ಸಮ್ಮೇಳನಾಧ್ಯಕ್ಷರಾಗಿ ದಯಾನಂದ್‌ ಆಯ್ಕೆ ಕಸಾಪಗೆ ಗೌರವ: ಪೂರ್ಣೇಶ್