ಹಕ್ಕು ಪತ್ರ ವಿತರಣೆಗೆ ಕೊಳಗೇರಿ ನಿವಾಸಿಗಳ ಆಗ್ರಹ

KannadaprabhaNewsNetwork |  
Published : Nov 13, 2024, 12:48 AM IST
ಚಿತ್ರದುರ್ಗ ಪೋಟೋ ಸುದ್ದಿ111 | Kannada Prabha

ಸಾರಾಂಶ

ಚಿತ್ರದುರ್ಗ: ವಿಜಯನಗರ ಬಡಾವಣೆಯನ್ನು ಕೊಳಗೇರಿ ಪ್ರದೇಶವೆಂದು ಘೋಷಿಸಿದ್ದರೂ, ಇದುವರೆವಿಗು ಹಕ್ಕುಪತ್ರ ನೀಡಿಲ್ಲ. ನಗರಸಭೆಯವರು ಪದೇ ಪದೇ ಅಲ್ಲಿಗೆ ತೆರಳಿ ಮನೆಗಳನ್ನು ತೆರವುಗೊಳಿಸುವುದಾಗಿ ಬೆದರಿಕೆ ಹಾಕುತ್ತಿದ್ದಾರೆಂದು ಆರೋಪಿಸಿ ಕರ್ನಾಟಕ ಕೊಳಗೇರಿ ನಿವಾಸಿಗಳ ಸಂಯುಕ್ತ ಸಂಘಟನೆಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.

ಚಿತ್ರದುರ್ಗ: ವಿಜಯನಗರ ಬಡಾವಣೆಯನ್ನು ಕೊಳಗೇರಿ ಪ್ರದೇಶವೆಂದು ಘೋಷಿಸಿದ್ದರೂ, ಇದುವರೆವಿಗು ಹಕ್ಕುಪತ್ರ ನೀಡಿಲ್ಲ. ನಗರಸಭೆಯವರು ಪದೇ ಪದೇ ಅಲ್ಲಿಗೆ ತೆರಳಿ ಮನೆಗಳನ್ನು ತೆರವುಗೊಳಿಸುವುದಾಗಿ ಬೆದರಿಕೆ ಹಾಕುತ್ತಿದ್ದಾರೆಂದು ಆರೋಪಿಸಿ ಕರ್ನಾಟಕ ಕೊಳಗೇರಿ ನಿವಾಸಿಗಳ ಸಂಯುಕ್ತ ಸಂಘಟನೆಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು. ನಗರದಲ್ಲಿರುವ ಕೆಲವು ಕೊಳಚೆ ಪ್ರದೇಶಗಳಲ್ಲಿ ಸರ್ವೆ ನಡೆಸಿ ಹಕ್ಕುಪತ್ರಗಳನ್ನು ನೀಡಲಾಗಿದೆ. ವಿಜಯನಗರ ಬಡಾವಣೆಯಲ್ಲಿ ದಲಿತರು, ಅಲ್ಪಸಂಖ್ಯಾತರು, ಹಿಂದುಳಿದವರು ಹಲವಾರು ವರ್ಷಗಳಿಂದಲೂ ವಾಸಿಸುತ್ತಿದ್ದರು ಇನ್ನು ಹಕ್ಕುಪತ್ರಗಳನ್ನು ನೀಡಿಲ್ಲ. ಮನೆಗಳನ್ನು ಖಾಲಿ ಮಾಡುವಂತೆ ನಗರಸಭೆಯವರು ಒತ್ತಡ ಹಾಕುತ್ತಿದ್ದಾರೆ. ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಸರ್ವೆ ಮಾಡಿ ಹಕ್ಕುಪತ್ರಗಳನ್ನು ವಿತರಿಸಬೇಕು. ಬದಲಿ ಜಾಗದ ವ್ಯವಸ್ಥೆ ಮಾಡುವವರೆಗೂ, ಕಿರುಕುಳ ನೀಡಬಾರದೆಂದು ನಗರಸಭೆ ಪೌರಾಯುಕ್ತರಿಗೆ ಸೂಚನೆ ನೀಡುವಂತೆ ಪ್ರತಿಭಟನಾಕಾರರು ಜಿಲ್ಲಾಡಳಿತವನ್ನು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಕರ್ನಾಟಕ ಕೊಳಗೇರಿ ನಿವಾಸಿಗಳ ಸಂಯುಕ್ತ ಸಂಘಟನೆ ಜಿಲ್ಲಾಧ್ಯಕ್ಷ ಗಣೇಶ್, ಇಮಾಂಸಾಬ್, ಮೈಲಾರಪ್ಪ, ವಜೀರ್, ರಜಿಯಾಬಿ, ಮಾರಕ್ಕ, ಅಸ್ಲಂ, ಮೆಹಬೂಬಿ ನೂರುಲ್ಲಾ, ಕುಮಾರ, ಕಿರಣ್, ಕರುನಾಡ ರಕ್ಷಣಾ ವೇದಿಕೆ ಅಧ್ಯಕ್ಷ ಸೈಯದ್ ಇಸ್ಮಾಯಿಲ್, ಮಂಜುನಾಥ್ ತಾಳಿಕೆರೆ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಾವೂರು ಶ್ರೀ ಗೋಪಾಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ ಸಂಪನ್ನ
ಸಚಿವ ತಿಮ್ಮಾಪುರ ಬೆಂಬಲಿಸಿ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ