ಶಿಕಾರಿಪುರ: ಗ್ರಾಮ ಆಡಳಿತಾಧಿಕಾರಿಗಳ ಬೇಡಿಕೆಗಳು ನ್ಯಾಯಬದ್ಧವಾಗಿದ್ದು ಶೀಘ್ರದಲ್ಲಿಯೇ ಮುಖ್ಯಮಂತ್ರಿಗಳ ಗಮನ ಸೆಳೆದು ಬೇಡಿಕೆ ಈಡೇರಿಕೆಗೆ ಪ್ರಯತ್ನಿಸುವುದಾಗಿ ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.
ಕಂದಾಯ ಇಲಾಖೆ ಆಧಿಕಾರಿಗಳು ಗ್ರಾಮೀಣ ಭಾಗದ ಜನರ ಬೆನ್ನೇಲುಬು ಎಂದರು ತಪ್ಪಾಗಲಾರದು. ಆದರೆ ನೀವು ಅನಿರ್ದಿಷ್ಟಾವಧಿ ಮುಷ್ಕರ ಮಾಡುತ್ತಿರುವುದರಿಂದ ಆಡಳಿತ ವ್ಯವಸ್ಥೆ ಹಾಳಾಗಲಿದೆ. ಜನರ ಅನುಕೂಲಕ್ಕಾಗಿ ನೀವು ಅನಿರ್ದಿಷ್ಟಾವಧಿ ಮುಷ್ಕರ ಕೈ ಬಿಟ್ಟು ಆಡಳಿತ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.ನಂತರದಲ್ಲಿ ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಕೆ.ಎಸ್.ಗುರುಮೂರ್ತಿ, ಪುರಸಭೆ ಸದಸ್ಯ ಪಾಲಾಕ್ಷಪ್ಪ ಭದ್ರಾಪುರ, ರೇಣುಕಸ್ವಾಮಿ, ತಾ.ಬಿಜೆಪಿ ಅಧ್ಯಕ್ಷ ಸಂಕ್ಲಾಪುರ ಹನುಮಂತಪ್ಪ, ಗ್ರಾಮ ಆಡಳಿತ ಅಧಿಕಾರಿಗಳ ನೌಕರರ ಸಂಘದ ತಾಲೂಕು ಘಟಕ ಅಧ್ಯಕ್ಷ ಎಂ.ಎಚ್.ಹರ್ಷ, ಗೌರವಾಧ್ಯಕ್ಷ ಗಿರೀಶ್ ಗೌಡ, ಮಿಥುನ್ ಕುಮಾರ್, ಮಹಾರುದ್ರಪ್ಪ, ಪ್ರವೀಣ್, ನಾಗರಾಜ್, ಗಣೇಶ್, ಯಲ್ಲಾಲಿಂಗ, ಅವಿನಾಶ್, ಅಸ್ಪಾಕ್ ಆಹಮದ್, ಮಂಜುನಾಥ ನಾಯ್ಕ, ರಾಹುಲ್ ರಾಥೋಡ್, ದುಗ್ಗತಿ ನಾಗರಾಜ್ ಮತ್ತಿತರರಿದ್ದರು.|