ಕೊಪ್ಪಳ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕೈಬಿಡುವಂತೆ ಸಿಪಿಐಎಂ ರಾಜ್ಯ ಕಾರ್ಯದರ್ಶಿ ಡಾ. ಕೆ. ಪ್ರಕಾಶ ಹೇಳಿದ್ದಾರೆ.
ಹಿಂದಿನ ವರ್ಷಗಳಲ್ಲಿ ಮಾಡಲಾಗಿರುವ ಮತದಾನ ಪಟ್ಟಿಯ ಪರಿಷ್ಕರಣೆಯ ಮಾನದಂಡಗಳಲ್ಲಿ ಬದಲಾವಣೆ ಮಾಡಿದ್ದು , ತೀವ್ರ ವಿರೋಧಕ್ಕೆ ಕಾರಣವಾಗಿದೆ. ಈ ವಿಷಯವನ್ನು ತಿಳಿದುಕೊಂಡು ಎಲ್ಲರೂ ಜಾಗ್ರತರಾಗಿ ವಿರೋಧಿಸಬೇಕಾಗಿದೆ ಎಂದರು.
ಸಭೆಯಲ್ಲಿ ಬಂಡಾಯ ಸಾಹಿತಿ ಅಲ್ಲಮಪ್ರಭು ಬೆಟ್ಟದೂರು, ಪ್ರಗತಿಪರ ಸಂಘಟನೆಗಳ ಒಕ್ಕೂಟದ ಬಸವರಾಜ ಶೀಲವಂತರ, ಶಿವಪ್ಪ ಹಡಪದ, ಕರ್ನಾಟಕ ರಾಜ್ಯ ರೈತ ಸಂಘ, ಹಸಿರುಸೇನೆಯ ನಜೀರ್ ಸಾಬ್ ಮೂಲಿಮನಿ, ಜನಪರ ಸಂಘಟನೆಗಳ ಒಕ್ಕೂಟದ ಎಸ್.ಎ. ಗಫಾರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಉಪಾಧ್ಯಕ್ಷ ಮಂಜುನಾಥ ಗೊಂಡಬಾಳ, ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ನಿರುಪಾದಿ ಬೆಣಕಲ್, ತಾಲೂಕು ಕಾರ್ಯದರ್ಶಿ ಸುಂಕಪ್ಪ ಗದಗ, ಕಿರ್ಲೋಸ್ಕರ್ ಕಾರ್ಮಿಕ ಸಂಘದ ವಿಜಯಭಾಸ್ಕರ್ ರೆಡ್ಡಿ, ಕಂಠಿ ಬಸವರಾಜ, ರಮೇಶ್, ಶೇಖಪ್ಪ ಚವಡಕಿ, ಸಿಐಟಿಯು ಜಿಲ್ಲಾಧ್ಯಕ್ಷ ಎಚ್.ಬಿ. ಕಲ್ಮಂಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಜುನಾಥ ಡಗ್ಗಿ, ಹಸಿರು ಸೇನೆ ಜಿಲ್ಲಾ ಉಪಾಧ್ಯಕ್ಷ ಶರಣಯ್ಯ ಮುಳ್ಳೂರಮಠ, ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಆರ್.ಕೆ. ದೇಸಾಯಿ ಭಾಗವಹಿಸಿದ್ದರು.