ಮೊಳಕಾಲ್ಮುರು: ಸಂಸದ ಪ್ರಜ್ವಲ್ ರೇವಣ್ಣ ನಡೆಸಿರುವ ಲೈಂಗಿಕ ದೌರ್ಜನ್ಯವನ್ನು ಖಂಡಿಸಿರುವ ರಾಜ್ಯ ರೈತ ಸಂಘ ಹಾಗೂ ಪ್ರಾಂತ್ಯ ರೈತ ಸಂಘದ ಕಾರ್ಯಕರ್ತರು ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣನನ್ನು ಕೂಡಲೇ ಬಂಧಿಸಿ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ಆಗ್ರಹಿಸಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು.
ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಸಾವಿರಾರು ಯುವತಿಯರನ್ನು ಲೈಂಗಿಕವಾಗಿ ಬಳಸಿಕೊಂಡು ಅವರ ಬದುಕನ್ನು ಹಾಳು ಮಾಡಿರುವ ಪ್ರಜ್ವಲ್ ಹಾಗೂ ಎಚ್.ಡಿ.ರೇವಣ್ಣ ಅವರನ್ನು ಕೂಡಲೇ ಬಂಧಿಸಬೇಕು. ಸಾಕ್ಷ ನಾಶ ಮಾಡುವ ಸಂಭವವಿದ್ದು ಕಾರಾಗೃಹದಲ್ಲಿಯೇ ಅವರ ವಿಚಾರಣೆ ನಡೆಸಿ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು.
ಈ ವೇಳೆ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಬೇಡರೆಡ್ಡಿ ಹಳ್ಳಿ ಬಸವರೆಡ್ಡಿ, ತಾಲೂಕು ಅಧ್ಯಕ್ಷ ಮಂಜುನಾಥ, ಪ್ರಾಂತ್ಯ ರೈತ ಸಂಘದ ಉಪಾಧ್ಯಕ್ಷ ದಾನಸೂರ ನಾಯಕ, ತಿಪ್ಪೀರನ ಹಟ್ಟಿ ಚಂದ್ರಣ್ಣ, ಕನಕ ಶಿವಮೂರ್ತಿ, ಕುರಾಕಲ ಹಟ್ಟಿ ನಾಗರಾಜ, ಗೌತಮ್, ಕೆ.ಟಿ.ನಾಗರಾಜ, ರವಿ, ನಾಗರಾಜ, ತಿಪ್ಪೇಸ್ವಾಮಿ ಇದ್ದರು.