ಎಸ್‌ಐಆರ್ ಪ್ರಕ್ರಿಯೆ ರದ್ದುಗೊಳಿಸುವಂತೆ ಆಗ್ರಹ

KannadaprabhaNewsNetwork |  
Published : Oct 08, 2026, 02:15 AM IST
ಗಜೇಂದ್ರಗಡ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೇಡರೇಶನ್ ವತಿಯಿಂದ ಎಸ್‌ಐಆರ್ ಪ್ರಕ್ರೀಯೆ ರದ್ದುಗೊಳಿಸುವಂತೆ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಇಲ್ಲಿನ ತಹಸೀಲ್ದಾರ್ ಅವರಿಗೆ ಮನವಿ ನೀಡಲಾಯಿತು. | Kannada Prabha

ಸಾರಾಂಶ

ಎಸ್ಐಆರ್ ಪ್ರಕ್ರಿಯೆ ಸಾರ್ವಜನಿಕರಲ್ಲಿ ಹಲವು ಆತಂಕ, ಅನುಮಾನ ಹುಟ್ಟಿಸಿದ್ದು, ಎಸ್‌ಐಆರ್ ರದ್ದುಗೊಳಿಸಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು.

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ ಮನವಿ

ಕನ್ನಡಪ್ರಭ ವಾರ್ತೆ ಗಜೇಂದ್ರಗಡ

ಎಸ್ಐಆರ್ ಪ್ರಕ್ರಿಯೆ ಸಾರ್ವಜನಿಕರಲ್ಲಿ ಹಲವು ಆತಂಕ, ಅನುಮಾನ ಹುಟ್ಟಿಸಿದ್ದು, ಎಸ್‌ಐಆರ್ ರದ್ದುಗೊಳಿಸಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಪೀರು ರಾಠೋಡ ಒತ್ತಾಯಿಸಿದರು.

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ ವತಿಯಿಂದ ಎಸ್‌ಐಆರ್ ಪ್ರಕ್ರಿಯೆ ರದ್ದುಗೊಳಿಸುವಂತೆ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಇಲ್ಲಿನ ತಹಸೀಲ್ದಾರ್ ಅವರಿಗೆ ಬುಧವಾರ ಮನವಿ ಸಲ್ಲಿಸಿದ ಬಳಿಕ ಮಾತನಾಡಿದರು.

ರೋಣ ಮತಕ್ಷೇತ್ರದಲ್ಲಿ ಅನಿವಾಸಿ ಭಾರತೀಯರು ೯೯೯ ಜನರಿದ್ದಾರೆಂದು ಮತದಾರರ ಯಾದಿ ಪಟ್ಟಿಯಲ್ಲಿ ನಮೋದಿಸಿದ್ದಾರೆ ಹಾಗೂ ಅನುಮಾನಾಸ್ಪದ ಮತದಾರರಿಗೆ ನೋಟಿಸ್ ನೀಡುವ ಮೂಲಕ ಮತದಾರರನ್ನು ಆತಂಕಕ್ಕೆ ದೂಡಿದ್ದಾರೆ. ಪರಿಣಾಮ ಕ್ಷೇತ್ರದ ಸಾವಿರಾರು ಮತದಾರರು ತಮ್ಮ ಮತದಾನದ ಹಕ್ಕನ್ನು ಕಳೆದುಕೊಳ್ಳುವ ದುಸ್ಥಿತಿ ಬಂದು, ಬದುಕಿದವರನ್ನು ಸಹ ಸತ್ತಿದ್ದಾರೆಂದು ನಮೋದು ಮಾಡಿರುತ್ತಾರೆ. ಬಡವರ, ಕಾರ್ಮಿಇದರಲ್ಲಿ ಅಡಗಿದೆ. ಪ್ರಕ್ರಿಯೆ ಕುರಿತು ಸಾರ್ವಜನಿಕರಲ್ಲಿ ಹಲವು ಆತಂಕ, ಅನುಮಾನ ಮತ್ತು ಆಕ್ಷೇಪಣೆಗಳು ವ್ಯಕ್ತವಾಗುತ್ತಿವೆ ಎಂದು ತಿಳಿಸಿದರು.

ಮುಖಂಡರಾದ ಬಾಲು ರಾಠೋಡ, ಚಂದ್ರು ರಾಠೋಡ ಮಾತನಾಡಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಕಾರ್ಯವೈಖರಿ ಕುರಿತು ಸಾರ್ವಜನಿಕವಾಗಿ ವ್ಯಕ್ತವಾಗಿರುವ ಆಕ್ಷೇಪಣೆಗಳು ಮತ್ತು ಆರೋಪಗಳ ಬಗ್ಗೆ ಸ್ವತಂತ್ರ ಹಾಗೂ ನಿಷ್ಪಕ್ಷಪಾತ ಪರಿಶೀಲನೆ ನಡೆಸಿ, ನಿಯಮಾನುಸಾರ ಕ್ರಮ ಕೈಗೊಳ್ಳಬೇಕಿದೆ. ಅಲ್ಲದೆ ಎಸ್‌ಐಆರ್ ಪ್ರಕ್ರಿಯೆಯನ್ನು ತಕ್ಷಣ ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು.

ಈ ವೇಳೆ ಅನಿಲ್ ಆರ್., ಮೆಹಬೂಬ ಹವಾಲ್ದಾರ, ಬಬ್ರುವಾನ ರಾಠೋಡ, ತುಕಾರಾಮ ಚವ್ಹಾಣ, ಸೇರಿ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸ್ವರ್ಣವಲ್ಲೀ ಮಠದ ನೂತನ ಆಡಳಿತ ಮಂಡಳಿಗೆ ಪದಾಧಿಕಾರಿಗಳ ಆಯ್ಕೆ
ಹಳಿಯಾಳದಲ್ಲಿ ರಾಜ್ಯಮಟ್ಟದ ಕುಸ್ತಿ ಸ್ಪರ್ಧೆಗೆ ತೆರೆ