ದುರ್ಗೋತ್ಸವ ಆಚರಿಸುವಂತೆ ಆಗ್ರಹ

KannadaprabhaNewsNetwork |  
Published : Sep 28, 2024, 01:26 AM IST
ಫೋಟೋ ವಿವರಣೆ : ಹಂಪಿ ಉತ್ಸವದಂತೆ ದುರ್ಗೋತ್ಸವ ಆಚರಿಸುವಂತೆ ಕರುನಾಡ ವಿಜಯಸೇನೆಯಿಂದ ಅಪರ ಜಿಲ್ಲಾಧಿಕಾರಿಗೆ ಮನವಿ | Kannada Prabha

ಸಾರಾಂಶ

ಐತಿಹಾಸಿಕ ಏಳು ಸುತ್ತಿನ ಕೋಟೆ ಇರುವ ಚಿತ್ರದುರ್ಗದಲ್ಲಿ ದುರ್ಗೋತ್ಸವ ಆಚರಿಸುವಂತೆ ಕರುನಾಡ ವಿಜಯಸೇನೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಐತಿಹಾಸಿಕ ಏಳು ಸುತ್ತಿನ ಕೋಟೆ ಇರುವ ಚಿತ್ರದುರ್ಗದಲ್ಲಿ ದುರ್ಗೋತ್ಸವ ಆಚರಿಸುವಂತೆ ಕರುನಾಡ ವಿಜಯಸೇನೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.ರಾಜಾವೀರ ಮದಕರಿನಾಯಕ, ವೀರವನಿತೆ ಒನಕೆ ಓಬವ್ವಳ ನಾಡು ಚಿತ್ರದುರ್ಗದಲ್ಲಿ ದುರ್ಗೋತ್ಸವ ಆಚರಿಸಿ ವರ್ಷಗಳೆ ಉರುಳಿದೆ. ಮೈಸೂರು ದಸರಾ, ಹಂಪಿ ಉತ್ಸವ, ಕೊಡಗು ಉತ್ಸವ, ಕಿತ್ತೂರು ಉತ್ಸವ ಆಚರಣೆಗೆ ಕೋಟಿಗಟ್ಟಲೆ ಹಣ ವ್ಯಯಿಸುತ್ತಿರುವ ಸರ್ಕಾರ ಚಿತ್ರದುರ್ಗ ಉತ್ಸವ ಏಕೆ ಆಚರಿಸುತ್ತಿಲ್ಲ. ಅನೇಕ ಬಾರಿ ಪ್ರತಿಭಟನೆ ನಡೆಸಿ ಒತ್ತಾಯಿಸಿದ್ದೇವೆ. ರಾಜಕಾರಣಿಗಳಿಗೆ ಆಸಕ್ತಿ ಇಲ್ಲದಿರುವುದೇ ದುರ್ಗೋತ್ಸವ ನಡೆಯದಿರಲು ಕಾರಣ ಎಂದು ಪ್ರತಿಭಟನಾನಿರತರು ಆಪಾದಿಸಿದರು.

ವಿಶ್ವಹಿಂದೂ ಪರಿಷತ್, ಭಜರಂಗದಳದವರು ಕಳೆದ ಹದಿನೆಂಟು ವರ್ಷಗಳಿಂದಲೂ ನಿರಂತರವಾಗಿ ಹಿಂದೂ ಮಹಾ ಗಣಪತಿ ಉತ್ಸವವನ್ನು ಆಚರಿಸಿಕೊಂಡು ಬರುತ್ತಿದ್ದಾರೆ. ದುರ್ಗೋತ್ಸವ ಆಚರಣೆಗೆ ಏಕೆ ಕರ್ನಾಟಕ ಸರ್ಕಾರ ಮನಸ್ಸು ಮಾಡುತ್ತಿಲ್ಲ. ಡಿಸೆಂಬರ್ ಒಳಗೆ ದುರ್ಗೋತ್ಸವ ಆಚರಿಸಬೇಕು ಎಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ. ಶಿವಕುಮಾರ್ ಒತ್ತಾಯಿಸಿದರು.ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವೀಣಗೌರಣ್ಣ, ಉಪಾಧ್ಯಕ್ಷೆ ರತ್ನಮ್ಮ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೋಪಿನಾಥ್ ಎಸ್., ಕಾರ್ಯದರ್ಶಿ ಜಗದೀಶ್ ಸಿ. ಉಪಾಧ್ಯಕ್ಷ ಮುಜಾಹಿದ್, ವಿದ್ಯಾರ್ಥಿ ಘಟಕದ ಅಖಿಲೇಶ್, ನಗರಾಧ್ಯಕ್ಷ ಅವಿನಾಶ್, ಯರ್ರಿಸ್ವಾಮಿ, ನಾಗರಾಜ್ ಮುತ್ತು, ಕಮಲ, ಸುರೇಶ್, ಹರೀಶ್‍ಕುಮಾರ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದಿಲ್ಲಿಯಲ್ಲಿ ಡಿಕೆಶಿ ರಾಜ್ಯ ನೀರಾವರಿ ಸಭೆ
ಗ್ಯಾಸ್ ಇಲ್ಲದೇ ಬೆಳಗಾವಿಯ 60 + ಕೈಗಾರಿಕೆ ಬಂದ್‌ ಹಂತಕ್ಕೆ