ದೇವನಹಳ್ಳಿ: ತಾಲೂಕಿನ ಸಿಂಗರಹಳ್ಳಿ ಗ್ರಾಮದಲ್ಲಿ ಸರ್ವೆ ನಂ- 6ರ ಗೋಮಾಳದಲ್ಲಿ 60ಕ್ಕೂ ಹೆಚ್ಚು ಬಲಾಢ್ಯರು ಅಕ್ರಮವಾಗಿ ಮನೆಗಳನ್ನು ನಿರ್ಮಿಸಿದ್ದು, ತೆರವುಗೊಳಿಸಬೇಕೆಂದು ಪ್ರಜಾ ವಿಮೋಚನಾ ಚಳವಳಿ ಸ್ವಾಭಿಮಾನ ರಾಜ್ಯಾಧ್ಯಕ್ಷ ಮುನಿಆಂಜಿನಪ್ಪ ಒತ್ತಾಯಿಸಿದ್ದಾರೆ.ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಕ್ರಮವಾಗಿ ಮನೆ ನಿರ್ಮಿಸಿರುವ ಬಲಾಢ್ಯರು ಸರ್ಕಾರಕ್ಕೆ ಸುಳ್ಳು ದಾಖಲೆಗಳನ್ನು ತೋರಿಸಿಕೊಂಡು ಯಲಹಂಕದಲ್ಲಿ ನಿವೇಶನಗಳನ್ನು ಹೊಂದಿದ್ದಾರೆ. ಸಿಂಗ್ರಹಳ್ಳಿ ಗ್ರಾಮದ ಸರ್ವೆ ನಂ. 6ರ ಸರ್ಕಾರಿ ಗೋಮಾಳ ಜಾಗದಲ್ಲಿ ಅಕ್ರಮ ಮನೆಗಳನ್ನು ಕಟ್ಟಿದ್ದು, ಸರ್ಕಾರದಿಂದ ಪ್ರಾಥಮಿಕವಾಗಿ ಹಕ್ಕುಪತ್ರ ಹೊಂದಿರುವ ಮೂಲ ಮಂಜೂರುದಾರರಿಗೆ ಮೊದಲ ಪ್ರಾಮುಖ್ಯತೆ ನೀಡಿ ಅವರಿಗೆ ಜಮೀನನ್ನು ನೀಡದೇ ಕೆಲವು ಸಂಬಂಧಪಟ್ಟ ಸರ್ವೆ ಮತ್ತು ಕಂದಾಯ ಅಧಿಕಾರಿಗಳು ಅಲ್ಲಿ ಜಾಗವಿಲ್ಲವೆಂದು ಹೇಳುತ್ತಿದ್ದಾರೆ.
ಅಕ್ರಮವಾಗಿ ಪಂಚಾಯಿತಿಯಿಂದ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿರುವುದು ಕಾನೂನು ಬಾಹಿರ ಮತ್ತು ವಿಷಾದನೀಯ. ಅಧಿಕಾರಿಗಳು ನಮ್ಮ ಮನವಿಯನ್ನು ಪರಿಗಣಿಸಿ ಸ್ಥಳ ಪರಿಶೀಲನೆ ಮಾಡಿ ಅಕ್ರವಾಗಿ ಮನೆ ನಿರ್ಮಾಣ ಮಾಡಿರುವವರನ್ನು ಖಾಲಿ ಮಾಡಿಸಿ ಸ್ಥಳೀಯ ನಿವೇಶನರಹಿತರಿಗೆ ನಿವೇಶನಗಳನ್ನು ಹಂಚಿಕೆ ಮಾಡಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಹಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.ಇದೇ ವೇಳೆ ಸಮತಾ ಸೈನಿಕದಳದ ರಾಜ್ಯ ಪ್ರಧಾನ ಕಾರ್ಯದರ್ಶಿ ವೆಂಕಟರಮಣ, ಬಹುಜನ ಸೇವಾಸಮಿತಿ, ಜನಧ್ವನಿ ವೇದಿಕೆ ಪದಾಧಿಕಾರಿಗಳು ಇದ್ದರು. ೩೧ ದೇವನಹಳ್ಳಿ ಚಿತ್ರಸುದ್ದಿ:೦೧ ಪತ್ರಿಕಾಗೋಷ್ಠಿಯಲ್ಲಿ ಪ್ರಜಾವಿಮೋಚನಾ ಚಳುವಳಿ ಸ್ವಾಭಿಮಾನ ಸಂಘಟನೆಯ ರಾಜ್ಯಾಧ್ಯಕ್ಷ ಮುನಿಆಂಜಿನಪ್ಪ ಮಾತನಾಡಿದರು.