ಕನ್ನಡಪ್ರಭ ವಾರ್ತೆ ಕೊಪ್ಪಳ
ಸರ್ಕಾರಿ ಶಾಲೆಯಲ್ಲಿ ಸ್ವಯಂ ಆತ್ಮ ರಕ್ಷಣೆಗೆ ಕರಾಟೆ ತರಬೇತಿ ಯೋಜನೆಯು ಮುಂದುವರೆಸುವಂತೆ ಆಗ್ರಹಿಸಿ ರಾಜ್ಯ ಕರಾಟೆ ಶಿಕ್ಷಕರ ಸಂಘದಿಂದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಬೆಂಗಳೂರಿನಲ್ಲಿ ಮನವಿ ಸಲ್ಲಿಸಲಾಯಿತು.ರಾಜ್ಯದಲ್ಲಿ ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ, ಮಾನಭಂಗ ಮುಂತಾದ ಅಮಾನವಿಯ ದೌರ್ಜನ್ಯಗಳನ್ನು ತಡೆಗಟ್ಟಲು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ವಿದ್ಯಾರ್ಥಿನಿಯರಿಗೆ ಸೂಕ್ತ ತರಬೇತಿ ನಿಡಬೇಕೆಂದು ತಿರ್ಮಾನಿಸಿ ರಾಜ್ಯದಲ್ಲಿನ ಆರ್‌ಎಂಎಸ್‌ಎ ಶಾಲೆಗಳಲ್ಲಿನ ವಿದ್ಯಾರ್ಥಿನಿಯರಿಗೆ ಮಾತ್ರ ಕರಾಟೆ ತರಬೇತಿ ಆರಂಭಿಸಿ ವಿದ್ಯಾರ್ಥಿನಿಯರಿಗೆ ಧೈರ್ಯ ತುಂಬಿದರು. ಸಮಾಜ ಕಲ್ಯಾಣ ಹಾಗೂ ಹಿಂದುವಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ರಾಜ್ಯದ ಕಿತ್ತೂರು ರಾಣಿ ಚನ್ನಮ್ಮ, ಮೂರಾರ್ಜಿ ದೇಸಾಯಿ ವಸತಿ ಶಾಲೆಗಳ ಮತ್ತು ಮೆಟ್ರಿಕ್ ನಂತರ, ಪೂರ್ವದ ವಸತಿ ಶಾಲೆಗಳಿಗೂ ಅದನ್ನು ವಿಸ್ತರಿಸಿ ಹೆಣ್ಣು ಮಕ್ಕಳಲ್ಲಿ ಧೈರ್ಯ ಮತ್ತು ಆತ್ಮ ವಿಶ್ವಾಸ ತುಂಬಿದರು.ಗಣರಾಜ್ಯೋತ್ಸವ ಮತ್ತು ಸ್ವಾತಂತ್ರ್ಯ ದಿನಾಚರಣೆಯ ವೇಳೆ ಹೆಣ್ಣು ಮಕ್ಕಳ ಕರಾಟೆ ಪ್ರದರ್ಶನವನ್ನು ಏರ್ಪಡಿಸಿದ್ದು ಎಲ್ಲರೂ ಮೆಚ್ಚಿಕೊಂಡರು. ಆದರೆ ತರಬೇತಿ ಕಾರಾಣಂತರಗಳಿಂದ ಸ್ಥಗಿತಗೊಂಡಿದ್ದು, ಈ ಯೋಜನೆಯನ್ನು ಪುನಃ ತಮ್ಮಿಂದಲೇ ಪುನರ್ ಆರಂಭಿಸಿ ಹೆಣ್ಣು ಮಕ್ಕಳಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕು. ನಿರುದ್ಯೋಗಿ ಕರಾಟೆ ತರಬೇತಿದಾರರ ಜೀವನ ಮತ್ತು ಕುಟುಂಬಕ್ಕೆ ನೆರವಾಗಬೇಕು. ರಾಜ್ಯದ ಎಲ್ಲ ವಸತಿ ಶಾಲೆಗಳಲ್ಲಿನ ಹಣ್ಣು ಮಕ್ಕಳಿಗೆ ಸ್ವಯಂ ರಕ್ಷಣಾ ಕೌಶಲ್ಯ ಕರಾಟೆ ತರಬೇತಿ ಪುನಾರಂಭಿಸುವ ಮೂಲಕ ಕರಾಟೆ ಶಿಕ್ಷಕರ ಜೀವನ್ನಕೆ ಅನುಕೂಲ ಮಾಡಿಕೊಡಬೇಕು ಎಂದು ಮನವಿ ಮಾಡಲಾಯಿತು.
ಕರಾಟೆ ತರಬೇತಿಯನ್ನು ಮುಂದುವರೆಸುವ ಅಗತ್ಯವನ್ನು ಮನವರಿಕೆ ಮಾಡಿಕೊಡಲಾಗಿದ್ದು, ಸಚಿವರು ಸಕರಾತ್ಮಕವಾಗಿ ಸ್ಪಂದಿಸಿ, ಶೀಘ್ರದಲ್ಲಿಯೇ ಈ ಕುರಿತು ಕ್ರವಹಿಸುವ ಭರವಸೆ ನೀಡಿದರು.ಕರಾಟೆ ಶಿಕ್ಷಕರ ಸಂಘದ ಕೊಪ್ಪಳ ಜಿಲ್ಲಾಧ್ಯಕ್ಷ ಹಾಗೂ ರಾಜ್ಯ ವಕ್ತಾರ ಮೌನೇಶ ಎಸ್. ವಡ್ಡಟ್ಟಿ, ಶಿವಕುಮಾರ ಶಾರದಳ್ಳಿ ಸೇರಿ ಇತರರಿದ್ದರು.