ಖಾಸಗಿ ಶಿಕ್ಷಣ ಸಂಸ್ಥೆಗಳ ಡೊನೇಷನ್‌ ಹಾವಳಿಗೆ ಕಡಿವಾಣ ಹಾಕಲು ಆಗ್ರಹ

KannadaprabhaNewsNetwork |  
Published : Jul 10, 2025, 01:46 AM IST
ಫೋಟೊ ಶೀರ್ಷಿಕೆ: 9ಆರ್‌ಎನ್‌ಆರ್6ರಾಣಿಬೆನ್ನೂರು ನಗರದಲ್ಲಿರುವ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಡೊನೇಶನ್ ಹಾವಳಿ ಹೆಚ್ಚಾಗಿದೆ ಎಂದು ಆರೋಪಿಸಿ ರೈತ ಮುಖಂಡ ರವೀಂದ್ರಗೌಡ ಪಾಟೀಲ ಲೋಕಾಯುಕ್ತರಿಗೆ ದೂರು ಸಲ್ಲಿಸಿದರು.  | Kannada Prabha

ಸಾರಾಂಶ

ನಾಯಿಕೊಡೆಗಳಂತೆ ತಲೆ ಎತ್ತಿರುವ ಖಾಸಗಿ ಶಾಲಾ ಶಿಕ್ಷಣ ಸಂಸ್ಥೆಗಳು ಬಡವರ ರಕ್ತ ಹೀರುತ್ತಿವೆ. ಶಿಕ್ಷಣ ಇಲಾಖೆಯ ಜಿಲ್ಲಾಮಟ್ಟದ ಶಿಕ್ಷಣ ಇಲಾಖೆಯ ಉಪನಿರ್ದೇಶಕರೇ ಇದಕ್ಕೆ ಕಡಿವಾಣ ಹಾಕಬೇಕು.

ರಾಣಿಬೆನ್ನೂರು: ನಗರದಲ್ಲಿರುವ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಡೊನೇಶನ್ ಹಾವಳಿ ಹೆಚ್ಚಾಗಿದೆ ಎಂದು ಆರೋಪಿಸಿ ರೈತ ಮುಖಂಡ ರವೀಂದ್ರಗೌಡ ಪಾಟೀಲ ಅವರು ಲೋಕಾಯುಕ್ತರಿಗೆ ದೂರು ಸಲ್ಲಿಸಿದರು. ನಗರದ ತಹಸೀಲ್ದಾರ್ ಕಚೇರಿಯಲ್ಲಿ ಬುಧವಾರ ಲೋಕಾಯುಕ್ತರು ದೂರು ಆಲಿಸಲು ಆಗಮಿಸಿದ್ದ ವೇಳೆ ದೂರು ಸಲ್ಲಿಸಿ ಮಾತನಾಡಿ, ನಗರದಲ್ಲಿ ನಾಯಿಕೊಡೆಗಳಂತೆ ತಲೆ ಎತ್ತಿರುವ ಖಾಸಗಿ ಶಾಲಾ ಶಿಕ್ಷಣ ಸಂಸ್ಥೆಗಳು ಬಡವರ ರಕ್ತ ಹೀರುತ್ತಿವೆ. ಶಿಕ್ಷಣ ಇಲಾಖೆಯ ಜಿಲ್ಲಾಮಟ್ಟದ ಶಿಕ್ಷಣ ಇಲಾಖೆಯ ಉಪನಿರ್ದೇಶಕರೇ ಇದಕ್ಕೆ ಕಡಿವಾಣ ಹಾಕಬೇಕು. ಕೂಡಲೆ ಇದಕ್ಕೆ ಕಡಿವಾಣ ಹಾಕದಿದ್ದರೆ ಶಿಕ್ಷಣ ಇಲಾಖೆಯ ಪ್ರಿನ್ಸಿಪಲ್ ಸೆಕ್ರೆಟರಿಯವರು ಖುದ್ದು ರಾಣಿಬೆನ್ನೂರಿಗೆ ಬಂದು ಕ್ರಮ ತೆಗೆದುಕೊಳ್ಳುವ ತನಕ ಹೋರಾಟ ಮುಂದುವರಿಸುತ್ತೇವೆಂದು ತಿಳಿಸಿದರು. ರೈತ ಮುಖಂಡ ಈರಣ್ಣ ಹಲಗೇರಿ, ಸಾಮಾಜಿಕ ಕಾರ್ಯಕರ್ತ ಸುರೇಂದ್ರ ಜ್ಯೋತಿ, ನಾಗರಾಜ ತಳವಾರ, ಮತ್ತು ಲೋಕಾಯುಕ್ತ ಅಧಿಕಾರಿಗಳಾದ ಪೊಲೀಸ್ ನಿರೀಕ್ಷಕ ದಾದಾವಲಿ ಕೆ.ಎಚ್., ಮಂಜುನಾಥ ಪಂಡಿತ, ಬಸವರಾಜ ಹಳಬಣ್ಣನವರ, ತಹಸೀಲ್ದಾರ್ ಆರ್.ಎಚ್. ಭಗವಾನ, ನಗರಸಭೆ ಪೌರಾಯುಕ್ತ ಎಫ್.ಐ. ಇಂಗಳಗಿ, ಪೊಲೀಸ್ ಇಲಾಖೆ ಸೇರಿದಂತೆ ತಾಲೂಕಾ ಮಟ್ಟದ ಎಲ್ಲ ಇಲಾಖೆಯ ಅಧಿಕಾರಿಗಳು ಇದ್ದರು.ಗುತ್ತಲದಲ್ಲಿ ಇಂದಿರಾ ಕ್ಯಾಂಟಿನ್‌ ಉದ್ಘಾಟನೆ

ಗುತ್ತಲ: ಇಂದಿರಾ ಕ್ಯಾಂಟಿನ್ ಬಡವರಿಗೆ ಹಾಗೂ ಶ್ರಮಿಕ ವರ್ಗದವರಿಗೆ ನಿತ್ಯ ಕಡಿಮೆ ದರದಲ್ಲಿ ಗುಣಮಟ್ಟದ ಆಹಾರ ನೀಡಲು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ ಎಂದು ವಿಧಾನಸಭೆ ಉಪ ಸಭಾಧ್ಯಕ್ಷ ಹಾಗೂ ಶಾಸಕ ರುದ್ರಪ್ಪ ಲಮಾಣಿ ತಿಳಿಸಿದರು.ಪಟ್ಟಣದ ಪೊಲೀಸ್ ಠಾಣೆ ಹತ್ತಿರ ನೂತನವಾಗಿ ನಿರ್ಮಿಸಿರುವ ಇಂದಿರಾ ಕ್ಯಾಂಟಿನ್‌ಅನ್ನು ಸೋಮವಾರ ಸಂಜೆ ಉದ್ಘಾಟಿಸಿ ಮಾತನಾಡಿ, ಉಪಹಾರ ಹಾಗೂ ಊಟವನ್ನು ಕಡಿಮೆ ಬೆಲೆಯಲ್ಲಿ ನೀಡಲಾಗುವುದೆಂದರು.

ಇದೇ ವೇಳೆ 6 ಕಸ ವಿಲೇವಾರಿ ವಾಹನಗಳು(ಅಟೋ ಟಿಪ್ಪರ್) ಹಾಗೂ ಸಕ್ಕಿಂಗ್ ಯಂತ್ರವನ್ನು ಪಟ್ಟಣದಲ್ಲಿ ಕಾರ್ಯ ನಿರ್ವಹಣೆಗೆ ಚಾಲನೆ ನೀಡಲಾಯಿತು.ಕಾರ್ಯಕ್ರಮದಲ್ಲಿ ಪಪಂ ಅಧ್ಯಕ್ಷ ಮಾಳವ್ವ ಗೊರವರ, ಉಪಾಧ್ಯಕ್ಷ ಪರಶುರಾಮ ಯಲಗಚ್ಚ, ಸ್ಥಾಯಿ ಸಮಿತಿ ಅಧ್ಯಕ್ಷ ಪ್ರದೀಪ ಸಾಲಗೇರಿ, ಜಿಪಂ ಮಾಜಿ ಅಧ್ಯಕ್ಷ ಕೊಟ್ರೇಶಪ್ಪ ಬಸೇಗಣ್ಣಿ, ಜಿಪಂ ಮಾಜಿ ಸದಸ್ಯ ಸಿ.ಬಿ. ಕುರವತ್ತಿಗೌಡರ, ಪಪಂ ಮಾಜಿ ಉಪಾಧ್ಯಕ್ಷ ನಾಗರಾಜ ಎರಿಮನಿ, ಪಪಂ ಸದಸ್ಯರಾದ ಸಾವಿತ್ರಾ ಘಂಟಿ, ಶಕುಂತಲಾ ಗುತ್ತಲ, ನಾಗರತ್ನಾ ಬಡಿಗೇರ, ಮಾಲತೇಶ ಶೀತಾಳ, ಎಸ್.ಜಿ. ಹೊನ್ನಪ್ಪನವರ, ಬಸಣ್ಣ ನೆಗಳೂರ, ಮಹ್ಮದಹನೀಫ ರಿತ್ತಿ, ಖಲೀಲಅಹ್ಮದ ಖಾಜಿ, ಗಣೇಶ ಅರೇಮಲ್ಲಾಪುರ, ದೀಪಾ ಭರಡಿ, ಪಾರವ್ವ ಲಮಾಣಿ, ರೇಖಾ ಲಮಾಣಿ, ನಾಮನಿರ್ದೇಶಿತ ಸದಸ್ಯರಾದ ಚನ್ನಪ್ಪ ಕಲಾಲ, ನಿಂಗರಾಜ ನಾಯಕ, ಪಿ.ಎನ್. ಹೇಮಗಿರಿಮಠ, ಆಶ್ರಯ ಸಮಿತಿ ಸದಸ್ಯರಾದ ಶಹಜಾನಸಾಬ ಅಗಡಿ, ಮಾಲತೇಶ ಬನ್ನಿಮಟ್ಟಿ, ವಿಜಯ ಚಲವಾದಿ ಇತರರು ಇದ್ದರು.

PREV