ವಾರದಲ್ಲಿ 2 ದಿನ ರಜೆ ಘೋಷಣೆ ಮಾಡಲು ಆಗ್ರಹ

KannadaprabhaNewsNetwork |  
Published : Jan 28, 2026, 02:00 AM IST
ಪೊಟೋ: 27ಎಸ್‌ಎಂಜಿಕೆಪಿ02ಶಿವಮೊಗ್ಗ ನಗರದ ಬಿ.ಎಚ್. ರಸ್ತೆಯ ಎಸ್.ಬಿ.ಐ. ಕಚೇರಿಯಿಂದ ಸೀನಪ್ಪ ಶೆಟ್ಟಿ ವೃತ್ತದವರೆಗೆ ವಿವಿಧ  ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್ ಅಧಿಕಾರಿಗಳ ಮತ್ತು ನೌಕರರ ಸಂಘಟನೆಯ ಒಕ್ಕೂಟವಾದ ಯು.ಎಫ್.ಬಿ.ಯು ವತಿಯಿಂದ ಮಂಗಳವಾರ ಬೃಹತ್ ಪ್ರತಿಭಟನೆ ನಡೆಯಿತು. | Kannada Prabha

ಸಾರಾಂಶ

ವಾರದಲ್ಲಿ 5 ದಿನ ಮಾತ್ರ ಕೆಲಸ ಉಳಿದ ಎರಡು ದಿನ ರಜೆ ಘೋಷಣೆ ಮಾಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್ ಅಧಿಕಾರಿಗಳ ಮತ್ತು ನೌಕರರ ಸಂಘಟನೆಯ ಒಕ್ಕೂಟವಾದ ಯು.ಎಫ್.ಬಿ.ಯು ನಗರದ ಬಿ.ಎಚ್.ರಸ್ತೆಯ ಎಸ್‌ಬಿಐ ಕಚೇರಿಯಿಂದ ಸೀನಪ್ಪ ಶೆಟ್ಟಿ ವೃತ್ತದವರೆಗೆ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.

ಶಿವಮೊಗ್ಗ: ವಾರದಲ್ಲಿ 5 ದಿನ ಮಾತ್ರ ಕೆಲಸ ಉಳಿದ ಎರಡು ದಿನ ರಜೆ ಘೋಷಣೆ ಮಾಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್ ಅಧಿಕಾರಿಗಳ ಮತ್ತು ನೌಕರರ ಸಂಘಟನೆಯ ಒಕ್ಕೂಟವಾದ ಯು.ಎಫ್.ಬಿ.ಯು ನಗರದ ಬಿ.ಎಚ್.ರಸ್ತೆಯ ಎಸ್‌ಬಿಐ ಕಚೇರಿಯಿಂದ ಸೀನಪ್ಪ ಶೆಟ್ಟಿ ವೃತ್ತದವರೆಗೆ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.

ದೇಶಾದ್ಯಂತ 10 ಲಕ್ಷಕ್ಕೂ ಹೆಚ್ಚು ಬ್ಯಾಂಕ್ ನೌಕರರು ತಮ್ಮ ಕೆಲಸವನ್ನು ಬಹಿಷ್ಕರಿಸಿ ತಮ್ಮ ನ್ಯಾಯಸಮ್ಮತ ಬೇಡಿಕೆಯಾದ ವಾರದಲ್ಲಿ 5 ದಿನಗಳು ಮಾತ್ರ ಕೆಲಸದಲ್ಲಿ ತೊಡಗಿಸಿಕೊಂಡು ಉಳಿದ 2 ದಿನಗಳ ರಜೆ ಜಾರಿ ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರಲ್ಲದೆ, ಸರ್ಕಾರದ ಬ್ಯಾಂಕಿಂಗ್ ವಿರೋಧಿ ನೀತಿಯನ್ನು ಖಂಡಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಸಮನ್ವಯಕಾರ ನೆಲ್ಸನ್‌, ವಾರದಲ್ಲಿ 5 ದಿನಗಳು ಮಾತ್ರ ಕೆಲಸದಲ್ಲಿ ತೊಡಗಿಸಿಕೊಂಡು ಉಳಿದ 2 ದಿನಗಳ ರಜೆ ಜಾರಿ ಮಾಡಬೇಕು. ಈ ಬಗ್ಗೆ ಹಲವು ಸುತ್ತಿನ ಮಾತುಕತೆಗಳು ನಡೆದಿದ್ದರೂ ಸಹ ಕೇಂದ್ರ ಸರ್ಕಾರದಿಂದ ಇನ್ನೂ ಅಂತಿಮ ಅನುಮೋದನೆ ದೊರೆತ್ತಿಲ್ಲ. ಈ ವಿಷಯವನ್ನು ಸೌಹಾರ್ಧಯುತವಾಗಿ ಬಗೆಹರಿಸುವ ಉದ್ದೇಶದಿಂದ ಯುಎಫ್‌ಬಿಯು ಹಲವಾರು ಬಾರಿ ರಾಜೀ ಸಂಧಾನ ಸಭೆಗಳಲ್ಲಿ ಭಾಗವಹಿಸಿ ಚರ್ಚೆ ನಡೆಸಿದೆ. ಆದರೆ, ಕೇಂದ್ರ ಸರ್ಕಾರದಿಂದ ಯಾವುದೇ ಸ್ಪಷ್ಟ ಭರವಸೆ ಲಭ್ಯವಾಗದ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಈ ಮುಷ್ಕರ ನಡೆಸುತ್ತಿದ್ದೇವೆ ಎಂದರು.ಪ್ರಸ್ತುತ ಬ್ಯಾಂಕ್‌ಗಳು ಸಿಬ್ಬಂದಿಗಳ ಕೊರತೆ ನಡುವೆಯೂ ಬಹುತೇಕ ಎಲ್ಲಾ ಕೆಲಸಗಳನ್ನು ನಿರ್ವಹಿಸುತ್ತಿದ್ದಾರೆ. ಆಧುನಿಕ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಹಣಕಟ್ಟಲು, ಹಿಂಪಡೆಯುವ ಸೌಲಭ್ಯಗಳನ್ನು ಎಟಿಎಂನಲ್ಲಿ ಕಲ್ಪಿಸಲಾಗಿದೆ. ಆನ್‌ಲೈನ್ ಬ್ಯಾಂಕಿಂಗ್ ಉಪಯೋಗಿಸಬಹುದಾಗಿದೆ. ಈಗಾಗಲೇ ಕೇಂದ್ರ ಸರ್ಕಾರದ ನೌಕರರು ಇನ್ಸುರೆನ್ಸ್, ಆರ್.ಬಿ.ಐ. ಸೇರಿದಂತೆ ಹಲವು ಸಂಸ್ಥೆಗಳಲ್ಲಿ ವಾರಕ್ಕೆ 5 ದಿನ ಮಾತ್ರ ಕೆಲಸವಿದೆ. ಆದರೆ, ಸರ್ಕಾರದ ಎಲ್ಲಾ ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಮತ್ತು ಸಾರ್ವಜನಿಕ ಸೇವೆಯಲ್ಲಿ ನಿರತರಾಗಿರುವ ಬ್ಯಾಂಕ್ ನೌಕರರಿಗೆ ಮಾತ್ರ ವಾರಪೂರ್ತಿ ಕೆಲಸ ಒತ್ತಡಕ್ಕೆ ಕಾರಣವಾಗುತ್ತಿದೆ ಎಂದು ದೂರಿದರು.

ಬ್ಯಾಂಕುಗಳು 5 ದಿನ ಕೆಲಸ ನಿರ್ವಹಿಸಿದರೆ, ಗ್ರಾಹಕರಿಗೂ ಯಾವುದೇ ಸಮಸ್ಯೆ ಇರುವುದಿಲ್ಲ. ಇದು ಉತ್ತಮ ಬ್ಯಾಂಕಿಂಗ್ ವ್ಯವಸ್ಥೆಗೂ ಕಾರಣವಾಗುತ್ತದೆ. ಕೇವಲ ನೌಕರರಿಗೆ ಮಾತ್ರವಲ್ಲ ಆದ್ದರಿಂದ ಕೂಡಲೇ ಕೇಂದ್ರ ಸರ್ಕಾರ ಬ್ಯಾಂಕ್ ನೌಕರರ ಈ ಬೇಡಿಕೆಯನ್ನು ಈಡೇರಿಸಬೇಕು ಎಂದು ಅವರು ಆಗ್ರಹಿಸಿದರು.ಈ ಸಂದರ್ಭದಲ್ಲಿ ವಿವಿಧ ಸಂಘಟನೆಗಳ ಮುಖಂಡರಾದ ಪುನೀತ್‌ಕುಮಾರ್, ಕೆ.ಆರ್.ವಿಶ್ವನಾಥ್, ಹೊನ್ನಪ್ಪ, ಮಿಥುನ್‌ಕುಮಾರ್, ಸಾಗರ್ ಜೋಶಿ, ಬಿ.ಎಂ.ಮಂಜುನಾಥ್, ಮುರಳೀಧರ್, ಎಂ.ಎ.ಸಂತೋಷ್‌ಕುಮಾರ್, ಬಿ.ಎಸ್.ವಲ್ಲಭ , ಶಶಿಧರ್, ಧೀರಜ್ ಸೇರಿದಂತೆ ವಿವಿಧ ಬ್ಯಾಂಕ್ ಸಂಘಟನೆಗಳ ಪದಾಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್ ಉಳಿಸಿದವನೇ ನಾನು: ಚಲುವರಾಯಸ್ವಾಮಿ
ಬೌದ್ಧಿಕ ಬೆಳವಣಿಗೆಗೆ ಸಾಹಿತ್ಯವೇ ದಾರಿ ದೀಪ