ಬೀದರ್ ‘ಬರಪೀಡಿತ ಜಿಲ್ಲೆ’ ಎಂದು ಘೋಷಿಸಲು ಆಗ್ರಹ

KannadaprabhaNewsNetwork |  
Published : Jul 22, 2026, 01:30 AM IST
ಚಿತ್ರ 21ಬಿಡಿಆರ್50 | Kannada Prabha

ಸಾರಾಂಶ

ಬೀದರ್ ಜಿಲ್ಲೆಯನ್ನು ಕೂಡಲೇ ಬರಪೀಡಿತ ಜಿಲ್ಲೆ ಎಂದು ಘೋಷಿಸಿ ರೈತರಿಗೆ ಪ್ರತಿ ಎಕರೆಗೆ 50 ಸಾವಿರ ರು. ಪರಿಹಾರ ನೀಡುವಂತೆ ರೈತಸಂಘದಿಂದ ಆಗ್ರಹಿಸಲಾಯಿತು.

ಕನ್ನಡಪ್ರಭ ವಾರ್ತೆ ಬೀದರ್

ರೈತರ ಹುತಾತ್ಮ ದಿನಾಚರಣೆ ಅಂಗವಾಗಿ ನಗರದ ಡಾ.ಅಂಬೇಡ್ಕರ್ ವೃತ್ತದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಸಿದರು.

ಬೀದರ್ ಜಿಲ್ಲೆಯನ್ನು ಕೂಡಲೇ ಬರಪೀಡಿತ ಜಿಲ್ಲೆ ಎಂದು ಘೋಷಿಸಿ ರೈತರಿಗೆ ಪ್ರತಿ ಎಕರೆಗೆ 50 ಸಾವಿರ ರು. ಪರಿಹಾರ ನೀಡುವಂತೆ ಆಗ್ರಹಿಸಲಾಯಿತು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಶ್ರೀಮಂತ ಬಿರಾದಾರ ಮಾತನಾಡಿ, ಡಾ. ಬಿ.ಆರ್.ಅಂಬೇಡ್ಕರ್ ಅವರ ‘ಶಿಕ್ಷಣ, ಸಂಘಟನೆ ಮತ್ತು ಹೋರಾಟ’ ಸಂದೇಶದಂತೆ ರೈತರು ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸಿದ್ದು, ಆ ಹೋರಾಟದ ನೆನಪಿಗಾಗಿ ಪ್ರತಿವರ್ಷ ಜುಲೈ 21ರಂದು ರೈತರ ಹುತಾತ್ಮ ದಿನಾಚರಣೆ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಬರೆದ ಮನವಿ ಸಲ್ಲಿಸಿ, ಜಿಲ್ಲೆಯ ರೈತರ ಸಮಸ್ಯೆಗಳನ್ನು ತುರ್ತಾಗಿ ಬಗೆಹರಿಸುವಂತೆ ಒತ್ತಾಯಿಸಿದರು.

ರೈತರ ಸಂಪೂರ್ಣ ಕೃಷಿ ಸಾಲ ಮನ್ನಾ ಮಾಡಬೇಕು. ಬೆಳೆ ವಿಮೆ ಪರಿಹಾರ ಅರ್ಹ ರೈತರಿಗೆ ಶೀಘ್ರ ಬಿಡುಗಡೆ ಮಾಡಬೇಕು. ಕಬ್ಬು ಬೆಳೆಗಾರರಿಗೆ ಬಾಕಿ ಇರುವ ಸುಮಾರು 10 ಕೋಟಿ ರು. ಹಣವನ್ನು ತಕ್ಷಣ ಪಾವತಿಸಬೇಕು. ಬಿ.ಎಸ್.ಎಸ್.ಕೆ. ಸಕ್ಕರೆ ಕಾರ್ಖಾನೆ ಪುನರಾರಂಭಿಸಬೇಕು. ಕೃಷಿ ಪಂಪ್‌ಸೆಟ್‌ಗಳಿಗೆ ಹಗಲಿನಲ್ಲಿ ನಿರಂತರ 7 ಗಂಟೆ ಗುಣಮಟ್ಟದ ವಿದ್ಯುತ್ ಪೂರೈಕೆ ಮಾಡಬೇಕು. ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಗೌರವಾಧ್ಯಕ್ಷ ಸಿದ್ರಾಮಪ್ಪ ಆಣದೂರೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಯಾನಂದ ಸ್ವಾಮಿ ಸಿರ್ಸಿ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಮಹಾನಂದಾ ದೇಶಮುಖ, ರಾಜ್ಯ ಪ್ರತಿನಿಧಿ ಶೇಷರಾವ ಕಣಜಿ, ರಾಜ್ಯ ಉಪಾಧ್ಯಕ್ಷ ಚಂದ್ರಶೇಖರ ಜಮಖಂಡಿ, ಹಸಿರು ಸೇನೆ ಸಂಚಾಲಕ ನೀಲಕಂಠ ಬುಯ್ಯಾ, ಜಿಲ್ಲಾ ಉಪಾಧ್ಯಕ್ಷ ಶಂಕರೆಪ್ಪ ಪಾರಾ, ಸಿದ್ದಣ್ಣ ಭೂಶೆಟ್ಟಿ, ತಾಲ್ಲೂಕು ಅಧ್ಯಕ್ಷ ಬಾಬುರಾವ ಜೋಳದಾಬಕಾ (ಭಾಲ್ಕಿ), ನಾಗಯ್ಯ ಸ್ವಾಮಿ (ಬೀದರ್), ಪ್ರವೀಣ ಕುಲಕರ್ಣಿ (ಕಮಲನಗರ), ಪ್ರಕಾಶ ಬಾವಗೆ (ಔರಾದ), ಸುಭಾಷ ರಗಟೆ (ಬಸವಕಲ್ಯಾಣ), ಸತೀಶ ನನ್ನೂರೆ (ಹುಮನಾಬಾದ), ಅನೀಲಕುಮಾರ ಕಣಜಿ (ಭಾಲ್ಕಿ ಕಾರ್ಯಾಧ್ಯಕ್ಷ) ಸೇರಿದಂತೆ ರೈತ ಮುಖಂಡರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮನೆ ಮನೆಗೆ ತೆರಳಿ ಎಸ್‌ಐಆರ್ ಅಭಿಯಾನ: ಶಾಸಕ ಎಚ್. ಕೆ. ಸುರೇಶ್
ಮಾಸಾಶನ ಸ್ಥಗಿತ ಸರಿಯಲ್ಲ: ಮಾಡಾಳು ಮಲ್ಲಿಕಾರ್ಜುನ್