ರಾಣಿಬೆನ್ನೂರು ತಾಲೂಕು ಬರಗಾಲ ಪೀಡಿತ ಎಂದು ಘೋಷಣೆಗೆ ಆಗ್ರಹ

KannadaprabhaNewsNetwork |  
Published : Jul 07, 2026, 02:45 AM IST
ರಾಣಿಬೆನ್ನೂರು ನಗರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ತಾಲೂಕನ್ನು ಬರಗಾಲ ಪೀಡಿತ ಎಂದು ಘೊಷಣೆ ಮಾಡುವಂತೆ ಆಗ್ರಹಿಸಿ ತಹಸೀಲ್ದಾರ ಆರ್.ಎಚ್.ಭಾಗವಾನ್ ಮೂಲಕ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರಿಗೆ ಮನವಿ ಸಲ್ಲಿಸಿದರು.   | Kannada Prabha

ಸಾರಾಂಶ

ತಾಲೂಕನ್ನು ಬರಗಾಲ ಪೀಡಿತ ಎಂದು ಘೊಷಣೆ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಸೋಮವಾರ ತಹಸೀಲ್ದಾರ್ ಆರ್.ಎಚ್. ಭಾಗವಾನ್ ಮೂಲಕ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರಿಗೆ ಮನವಿ ಸಲ್ಲಿಸಿದರು.

ರಾಣಿಬೆನ್ನೂರು: ತಾಲೂಕನ್ನು ಬರಗಾಲ ಪೀಡಿತ ಎಂದು ಘೊಷಣೆ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಸೋಮವಾರ ತಹಸೀಲ್ದಾರ್ ಆರ್.ಎಚ್. ಭಾಗವಾನ್ ಮೂಲಕ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರಿಗೆ ಮನವಿ ಸಲ್ಲಿಸಿದರು.

ತಾಲೂಕಿನಾದ್ಯಂತ ಮುಂಗಾರು ಬಿತ್ತನೆಯಲ್ಲಿ ರೈತರು ಬೀಜ, ಗೊಬ್ಬರ ಮತ್ತು ಸಾಗುವಳಿ ಮಾಡಿ ಖರ್ಚು ಮಾಡಿಕೊಂಡು ಬಿತ್ತನೆ ಮಾಡಿದ್ದರೂ ಕೂಡ ಮುಂಗಾರು ಮಳೆ ಆಗದೆ ರೈತರು ಕಂಗಾಲಾಗಿದ್ದಾರೆ. ಇದರಿಂದ ರೈತರು ಸಾಲದ ಸುಳಿಯಲ್ಲಿ ಸಿಲುಕಿಕೊಂಡು ನಲುಗುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಸರ್ಕಾರ ಇದರ ಬಗ್ಗೆ ತಜ್ಞರೊಂದಿಗೆ ಚರ್ಚಿಸಿ ರೈತರಿಗೆ ಸೂಕ್ತ ಪರಿಹಾರದ ಜೊತೆಗೆ ರಾಣಿಬೆನ್ನೂರು ತಾಲೂಕನ್ನು ಬರಗಾಲ ಪೀಡಿತ ಎಂದು ಘೊಷಣೆ ಮಾಡಬೇಕು. ತಾಲೂಕಿನಾದ್ಯಂತ ಕುಡಿಯುವ ನೀರು, ದನಕರುಗಳಿಗೆ ಮೇವು ಸಂಗ್ರಹಿಸಿಟ್ಟುಕೊಳ್ಳಲಿಕ್ಕೆ ಸರ್ಕಾರ ತಕ್ಷಣವೇ ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೂ ಮತ್ತು ತಾಲೂಕು ಆಡಳಿತಾಧಿಕಾರಿಗಳಿಗೂ ಸೂಚನೆ ನೀಡಿ ಗ್ರಾಮೀಣ ಮಟ್ಟದಲ್ಲಿರತಕ್ಕಂತಹ ರೈತರಿಗೂ ಮತ್ತು ಸಾರ್ವಜನಿಕರಿಗೂ ಯಾವುದೇ ರೀತಿಯ ತೊಂದರೆ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು. ರೈತರಿಗೆ ಸಾಲ ಮನ್ನಾ ಮಾಡಿ ಮತ್ತು ಬಿತ್ತನೆ ಮಾಡಿದ ಬೀಜ ಗೊಬ್ಬರದ ಖರ್ಚನ್ನು ಸರ್ಕಾರದಿಂದ ಭರಿಸುವಂತಾಗಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಹನುಮಂತಪ್ಪ ಕಬ್ಬಾರ, ಮಲ್ಲಿಕಾರ್ಜುನ ತೆಗ್ಗಿನ, ಸೋಮರೆಡ್ಡಿ ಹಾದಿಮನಿ, ಕಿರಣ ಗುಳೇದ, ಮಹಮ್ಮದ್ ಹಿತ್ತಲಮನಿ, ಅಮಿದಾಬಾನು ಶಿಡೇನೂರ, ಶಿವಾಜಪ್ಪ ಚಳಗೇರಿ, ಮಾರುತೆಪ್ಪ ಮೆಡ್ಲೇರಿ, ಬೀರಪ್ಪ ತಳವಾರ, ನಾಗರಾಜ ಮೆಡ್ಲೇರಿ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೌಶಲ್ಯ ಅಭಿವೃದ್ಧಿ ಪಡಿಸುವುದೇ ಕಲಾ ಉತ್ಸವದ ಉದ್ದೇಶ: ತಹಸೀಲ್ದಾರ
ಮೂಲಭೂತ ಸೌಲಭ್ಯಕ್ಕೆ ಆಗ್ರಹ: ಎಸ್‌ಐಆರ್‌ ಜಾಗೃತಿ ಬೈಕ್‌ ರ್‍ಯಾಲಿಗೆ ತಡೆ