ಭ್ರಷ್ಟ ಕಾಂಗ್ರೆಸ್ ಸರ್ಕಾರ ವಿಸರ್ಜಿಸಲು ಆಗ್ರಹ

KannadaprabhaNewsNetwork |  
Published : Aug 01, 2024, 12:18 AM IST
31ಎಚ್‌ವಿಆರ್‌1 | Kannada Prabha

ಸಾರಾಂಶ

ಅಹಿಂದ ಹೆಸರಲ್ಲಿ ಆಡಳಿತಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಎಸ್ಟಿ ನಿಗಮದಲ್ಲಿ ₹187 ಕೋಟಿ ಲೂಟಿ ಮಾಡಿದ್ದು, ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವನ್ನು ವಿಸರ್ಜಿಸಬೇಕು ಎಂದು ಜಿಲ್ಲಾ ಜೆಡಿಎಸ್ ಕಾರ್ಯಕರ್ತರು ಜಿಲ್ಲಾಡಳಿತದ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಹಾವೇರಿ: ಅಹಿಂದ ಹೆಸರಲ್ಲಿ ಆಡಳಿತಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಎಸ್ಟಿ ನಿಗಮದಲ್ಲಿ ₹187 ಕೋಟಿ ಲೂಟಿ ಮಾಡಿದ್ದು, ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವನ್ನು ವಿಸರ್ಜಿಸಬೇಕು ಎಂದು ಜಿಲ್ಲಾ ಜೆಡಿಎಸ್ ಕಾರ್ಯಕರ್ತರು ಜಿಲ್ಲಾಡಳಿತದ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಜೆಡಿಎಸ್ ಜಿಲ್ಲಾಧ್ಯಕ್ಷ ಮಂಜುನಾಥ ಗೌಡಶಿವಣ್ಣನವರ, ಎಸ್‌ಟಿ ಘಟಕದ ಅಧ್ಯಕ್ಷ ಮಂಜುನಾಥ ಕನ್ನಾಯ್ಕನವರ ನೇತೃತ್ವದಲ್ಲಿ ಬುಧವಾರ ಕಾರ್ಯಕರ್ತರು ಮನವಿ ಸಲ್ಲಿಸಿದರು.

ಮಹರ್ಷಿ ವಾಲ್ಮೀಕಿ ನಿಗಮದ ₹187 ಕೋಟಿ ಹಗರಣವನ್ನು ಸಿಬಿಐಗೆ ಒಪ್ಪಿಸಿ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ವಜಾ ಮಾಡಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಣಕಾಸು ಖಾತೆ ತಮ್ಮ ಕೈಯಲ್ಲಿ ಇಟ್ಟುಕೊಂಡಿದ್ದಾರೆ. ಎಸ್‌ಟಿ ನಿಗಮಕ್ಕೆ ಹಣ ಮಂಜೂರು ಮಾಡಿದ್ದಾರೆ. ಸಚಿವ ಸ್ಥಾನದಲ್ಲಿದ್ದ ನಾಗೇಂದ್ರ, ನಿಗಮದ ಅಧ್ಯಕ್ಷ ದದ್ದಲ್ ಇವರಷ್ಟೇ ರಾಜೀನಾಮೆ ನೀಡಿದರೆ ಸಾಲದು. ಹಗರಣದ ರೂವಾರಿಗಳಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಕ್ಷಣವೇ ರಾಜೀನಾಮೆ ನೀಡಬೇಕು. ರಾಜ್ಯಪಾಲರು ಹಗರಣದಲ್ಲಿ ಮುಳುಗಿರುವ ಕಾಂಗ್ರೆಸ್ ಸರ್ಕಾರವನ್ನು ವಜಾಗೊಳಿಸಿ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸಬೇಕು ಎಂದು ಒತ್ತಾಯಿಸಿದರು.

ಎಸ್‌ಟಿ ಘಟಕದ ಜಿಲ್ಲಾಧ್ಯಕ್ಷ ಮಂಜುನಾಥ ಕನ್ನಾಯ್ಕನವರ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಭ್ರಷ್ಟಾಚಾರ ರಹಿತ ಆಡಳಿತ ಕೊಡುವುದಾಗಿ ಹೇಳಿ ಆಡಳಿತಕ್ಕೆ ಬಂದು ಒಂದು ವರ್ಷ ಕಳೆಯುತ್ತಿದ್ದಂತೆ ಎಸ್‌ಟಿ ನಿಗಮದಲ್ಲಿ ₹187 ಕೋಟಿ ಲೂಟಿ ಮಾಡಿದೆ. ಇದನ್ನು ರಾಜ್ಯದ ಅಹಿಂದ ಜನತೆ ಎಂದೂ ಕ್ಷಮಿಸುವುದಿಲ್ಲ. ಹಗರಣ ಬೆಳಕಿಗೆ ಬಂದು ಒಂದು ತಿಂಗಳ ಕಳೆದರೂ ಇಲ್ಲಿವರೆಗೂ ಯಾರಿಗೂ ಶಿಕ್ಷೆಯಾಗಿಲ್ಲ. ಇನ್ನು ತನಿಖಾ ಹಂತದಲ್ಲಿ ಇಡಲಾಗಿದೆ. ಇದಲ್ಲದೇ ಅನೇಕ ಜನಾಂಗದ ನಿಗಮಗಳಲ್ಲಿಯೂ ಹಗರಣಗಳಾಗಿದೆ. ಇಂತಹ ಸರ್ಕಾರ ರಾಜ್ಯವನ್ನು ಆಳುವ ನೈತಿಕತೆಯನ್ನು ಕಳೆದುಕೊಂಡಿದೆ. ಭ್ರಷ್ಟಾಚಾರ ಮಾಡಿರುವವರೂ ಯಾರೆ ಆಗಿರಲಿ ಅವರಿಗೆ ತಕ್ಷ ಶಿಕ್ಷೆಯಾಗಬೇಕು. ಎಸ್‌ಟಿ ಜನಾಂಗದ ಹಣ ವಸೂಲಿ ಮಾಡಿ, ರಾಜ್ಯದ ಎಸ್‌ಟಿ ಜನಾಂಗ ಕಲ್ಯಾಣ ನಿಧಿಯನ್ನು ಆ ಸಮುದಾಯಕ್ಕೆ ನೀಡಬೇಕು ಎಂದು ಆಗ್ರಹಿಸಿದರು.

ಜೆಡಿಎಸ್‌ ರಾಜ್ಯ ಉಪಾಧ್ಯಕ್ಷ ಸಿದ್ದಬಸಪ್ಪ ಯಾದವ್, ಅಲ್ತಾಫ್‌ ನದಾಫ್‌, ರಾಮನಗೌಡ್ರ ಪಾಟೀಲ, ಸತೀಶ ಮಾಳದಕರ, ಈರಣ್ಣ ನವಲಗುಂದ, ರಮೇಶ ಮಾಕನೂರ, ಮೋಹನ ಬಿನ್ಹಾಳ, ರೀಠಾ ನಾಯ್ಕರ್, ಎಂ.ಎಸ್. ಹಣಗಿ, ಲಲಿತಾ ಉಜ್ಜನಗೌಡ್ರ, ಭರಮಣ್ಣ‌ಕೊಳಚಿ, ಬಿ.ಸಿ. ಗುದ್ದಿಶೆಟ್ಟರ್, ಸಿದ್ದಣ್ಣ ಗುಡಿಮುಂದ್ಲರ್, ಅಮೀರಜಾನ್ ಬೇಪಾರಿ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪುಸ್ತಕ ಸಂಸ್ಕೃತಿ ಸಂವೇದನೆಗೆ ಸಂಬಂಧಿಸಿದ್ದು: ಬರಗೂರು
ಜಿಬಿಎ ಚುನಾವಣೆಗೆ ಕಾಂಗ್ರೆಸ್‌ ಅರ್ಜಿಗೆ ₹50 ಸಾವಿರ!