ಹಿರೇಕೆರೂರು: ತಾಲೂಕಿನ ಅರಳೀಕಟ್ಟಿ ಉನ್ನತೀಕರಿಸಿದ ಸರ್ಕಾರಿ ಪ್ರೌಢಶಾಲೆಗೆ ಕಾಯಂ ಶಿಕ್ಷಕರ ನೇಮಕಾತಿ, ಹೆಚ್ಚುವರಿಯಾಗಿ ವರ್ಗಾವಣೆಗೊಂಡ ಶಿಕ್ಷಕರನ್ನು ಮುಂದುವರೆಯುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ಹಾಗೂ ಎಸ್‌ಡಿಎಂಸಿ ಸದಸ್ಯರು ಪ್ರತಿಭಟಿಸಿದರು.ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿಂದ ಉನ್ನತೀಕರಿಸಿದ ಪ್ರೌಢಶಾಲೆಯಾಗಿ 2024-25ನೇ ಸಾಲಿನಲ್ಲಿ ಮಂಜೂರಾದ ಶಾಲೆಗೆ ಹೊಲಬಿಕೊಂಡ ಸರ್ಕಾರಿ ಶಾಲೆಯಿಂದ ರಘು ಎಮ್.ಎನ್. (ಟಿಜಿಟಿ) ನಿಯೋಜನೆ ಮೇರೆಗೆ ಜೂನ್ ತಿಂಗಳಿಂದ ಇಲ್ಲಿವರೆಗೂ ಕಾರ್ಯ ನಿರ್ವಹಿಸುತ್ತಿದ್ದಾರೆ.
ಮುಂದಿನ ದಿನಗಳಲ್ಲಿ ಪ್ರವೇಶಾತಿ ಮತ್ತು ಫಲಿತಾಂಶದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆಗಳು ಇರುವುದರಿಂದ ರಘು ಎಮ್. ಎನ್. ಶಿಕ್ಷಕರನ್ನು ವರ್ಗಾವಣೆ ಮಾಡಬಾರದು. ಮಕ್ಕಳ ಶೈಕ್ಷಣಿಕ ಮತ್ತು ಪರೀಕ್ಷಾ ದೃಷ್ಟಿಯಿಂದ ಅರಳಿಕಟ್ಟೆಯಲ್ಲಿ ಈ ಶೈಕ್ಷಣಿಕ ಅವಧಿ ಮುಗಿಯುವವರೆಗೂ ಮುಂದುವರಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದರು.ಶಿಕ್ಷಣ ಇಲಾಖೆಯ ತಂತ್ರಾಂಶದಲ್ಲಿ ನಮ್ಮ ಊರಿನ ಶಾಲೆಗೆ ಖಾಲಿ ಇರುವ ಹುದ್ದೆಗಳನ್ನು ತೋರಿಸುತ್ತಿಲ್ಲ. ಹುದ್ದೆಗಳು ಖಾಲಿರುವುದನ್ನು ಇತರೆ ಶಿಕ್ಷಕರ ನೋಡಿ ವರ್ಗಾವಣೆ ತೆಗೆದುಕೊಂಡು ಬರುತ್ತಿದ್ದರು. ಆದರೆ ಇಲಾಖೆಯ ನಿರ್ಲಕ್ಷ್ಯ ದಿಂದಾಗಿ ನಮ್ಮ ಶಾಲೆಗೆ ಖಾಲಿ ಇರುವ ಶಿಕ್ಷಕರ ಹುದ್ದೆಗಳು ಭರ್ತಿ ಮಾಡುತ್ತಿಲ್ಲ, ವಿದ್ಯಾರ್ಥಿಗಳ ಭವಿಷ್ಯ ಹಾಳಾಗುತ್ತಿದೆ. ಸರ್ಕಾರ ಹಾಗೂ ಅಧಿಕಾರಿಗಳು ಸ್ಪಂದಿಸದಿದ್ದರೆ ಜಿಲ್ಲಾಧಿಕಾರಿ ಕಚೇರಿ ಎದುರು ಊರಿನ ಗ್ರಾಮಸ್ಥರು ಬೃಹತ್ ಹೋರಾಟ ಮಾಡುತ್ತೇವೆ ಎಂದು ಕಾರ್ಮಿಕ ಮುಖಂಡ ಸಚಿನ್ ಬೂದಿಹಾಳ ಆಕ್ರೋಶ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಅಧ್ಯಕ್ಷರಾದ ಕಂತೇಶ್ ಮುದ್ದೆರ್, ರೈತ ಮುಖಂಡರಾದ ಫಕ್ಕೀರಪ್ಪ ಸಂಗೋಡ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸುಭಾಷ್ ಉಕ್ಕುಂದ್ರು, ಪೋಷಕರಾದ ಶಿವಾನಂದ ಮಾದರ್, ರಮೇಶ್ ಮಾಡ್ಲೆರ್, ನಾಗರಾಜ್ ಬಿದರಿ, ಹೇಗಪ್ಪಾ ಹದಗಲ್ , ಗುಡ್ಡಪ್ಪ ಕಾಸೆಂಬರ್, ವಿದ್ಯಾರ್ಥಿಗಳಾದ ದಿವ್ಯಾ ಕಡೆಮನಿ, ದೀಪಾ ಅರಳಕಟ್ಟಿ, ರಮ್ಯಾ ಮುಡೇರ್, ಸುಮನ್ ಬಾನು ಅಜೀಜ, ತಾಸಿನ ಬಾನು, ಶಿಲ್ಪಾ ಬೂದಿಹಾಳ, ಪವಿತ್ರಾ ಬಸೂರ್, ಕಾವ್ಯ ಗುಡ್ಡಪ್ಪ, ಅನು ರಟ್ಟಿಹಳ್ಳಿ, ವೇದ ಹುಚ್ಚಪ್ಪ, ನಿರ್ಮಲ, ರಾಘು ಎನ್., ಕಾರ್ತಿಕ್ ಬಿ., ಯಲ್ಲಪ್ಪ ಹೆಚ್ಚ, ಪೃಥ್ವಿ ಕಾಸಂಬಿ, ಪ್ರದೀಪ ಅರ್, ಶ್ರೀಧರ ಬಿ., ಸಿದ್ದು ಎಚ್., ಮನು ಸೇರಿದಂತೆ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.