ಬೆಂಗಳೂರು ಹುಬ್ಬಳ್ಳಿ ಸೂಪರ್‌ ಫಾಸ್ಟ್‌ ರೈಲು ಕುಷ್ಟಗಿ ವರೆಗೆ ವಿಸ್ತರಿಸಲು ಒತ್ತಾಯ

KannadaprabhaNewsNetwork |  
Published : May 12, 2026, 02:45 AM IST
ಬೆಂಗಳೂರು ಹುಬ್ಬಳ್ಳಿ ನಡುವೆ ಸಂಚರಿಸುವ ಸೂಪರ್ ಫಾಸ್ಟ್ ರೈಲ್ವೆಯನ್ನು ಕುಷ್ಟಗಿ ವರೆಗೆ ವಿಸ್ತರಿಸಬೇಕು ಎಂದು ಕುಷ್ಟಗಿ ರೈಲ್ವೆ ಹೋರಾಟ ಸಮಿತಿಯವರು ಹಿಟ್ನಾಳ ಗ್ರಾಮದಲ್ಲಿ ಸಂಸದ ರಾಜಶೇಖರ ಹಿಟ್ನಾಳ ಅವರಿಗೆ ಮನವಿ ಸಲ್ಲಿಸಿದರು. | Kannada Prabha

ಸಾರಾಂಶ

ಬೆಂಗಳೂರು ಹುಬ್ಬಳ್ಳಿ ನಡುವೆ ಸಂಚರಿಸುವ ಸೂಪರ್ ಫಾಸ್ಟ್‌ ರೈಲ್ವೆಯನ್ನು ಗದಗ, ತಳಕಲ್ ಜಂಕ್ಷನ್ ಮೂಲಕ ಕುಷ್ಟಗಿ ವರೆಗೆ ವಿಸ್ತರಿಸಬೇಕು ಎಂದು ಕುಷ್ಟಗಿ ರೈಲ್ವೆ ಹೋರಾಟ ಸಮಿತಿಯವರು ಸಂಸದ ರಾಜಶೇಖರ ಹಿಟ್ನಾಳ ಅವರಿಗೆ ಮನವಿ ಸಲ್ಲಿಸಿದರು.

ಕುಷ್ಟಗಿ: ಬೆಂಗಳೂರು ಹುಬ್ಬಳ್ಳಿ ನಡುವೆ ಸಂಚರಿಸುವ ಸೂಪರ್ ಫಾಸ್ಟ್‌ ರೈಲ್ವೆಯನ್ನು ಗದಗ, ತಳಕಲ್ ಜಂಕ್ಷನ್ ಮೂಲಕ ಕುಷ್ಟಗಿ ವರೆಗೆ ವಿಸ್ತರಿಸಬೇಕು ಎಂದು ಕುಷ್ಟಗಿ ರೈಲ್ವೆ ಹೋರಾಟ ಸಮಿತಿಯವರು ಸಂಸದ ರಾಜಶೇಖರ ಹಿಟ್ನಾಳ ಅವರಿಗೆ ಮನವಿ ಸಲ್ಲಿಸಿದರು.

ರೈಲ್ವೆ ಹೋರಾಟ ಸಮಿತಿಯ ಪ್ರಧಾನ ಕಾರ್ಯದರ್ಶಿ ವೀರೇಶ ಬಂಗಾರಶೆಟ್ಟರ ಮಾತನಾಡಿ, ಬೆಂಗಳೂರು ಹುಬ್ಬಳ್ಳಿ ನಡುವೆ ಸಂಚರಿಸುವ ಸೂಪರ್ ಫಾಸ್ಟ್ ರೈಲನ್ನು ಗದಗ, ತಳಕಲ್ ಜಂಕ್ಷನ್ ಮೂಲಕ ಕುಷ್ಟಗಿ ವರೆಗೆ ಓಡಿಸಬೇಕು. ಇದೇ ರೈಲನ್ನು ಗದಗ ವರೆಗೆ ವಿಸ್ತರಿಸಲು ಗದಗ ರೈಲ್ವೆ ಹೋರಾಟ ಸಮಿತಿಯವರು ಹೋರಾಟ ಆರಂಭಿಸಿ ಮನವಿಯನ್ನು ಸಲ್ಲಿಸಿದ್ದಾರೆ. ಮುಂದುವರಿದ ಭಾಗವಾಗಿ ಈ ರೈಲನ್ನು ತಳಕಲ್ ಜಂಕ್ಷನ್ ಮೂಲಕ ಕುಷ್ಟಗಿ ವರೆಗೆ ವಿಸ್ತರಿಸಬೇಕು ಎಂಬುದು ನಮ್ಮ ಬೇಡಿಕೆಯಾಗಿದೆ. ಈ ಸೌಲಭ್ಯದಿಂದ ಕುಷ್ಟಗಿ ಮಾತ್ರವಲ್ಲದೆ ಸುತ್ತಮುತ್ತಲಿನ ನಗರ ಹಾಗೂ ಗ್ರಾಮಗಳಿಗೆ ಅನುಕೂಲವಾಗಲಿದೆ ಎಂದರು.

ಕುಷ್ಟಗಿಯಲ್ಲಿ ರೈಲು ಚಾಲನೆಯಿಂದ ಇಂದಿನವರೆಗೂ ಕುಷ್ಟಗಿ ಬೆಂಗಳೂರು ರೈಲ್ವೆ ಸಂಚಾರಕ್ಕೆ ಬೇಡಿಕೆ ವ್ಯಕ್ತವಾಗಿದೆ. ಸಂಬಂಧಿಸಿದ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಸಾಕಷ್ಟು ಸಲ ಮನವಿ ಸಲ್ಲಿಸಲಾಗಿದೆ ಎಂದರು.

ಕುಷ್ಟಗಿಯಿಂದ ಹುಬ್ಬಳ್ಳಿಗೆ ಇನ್ನೊಂದು ರೈಲು ಹಾಗೂ ಕುಷ್ಟಗಿಯಿಂದ ಬೆಂಗಳೂರಿಗೆ ರೈಲಿನ ಸಂಪರ್ಕ ಕಲ್ಪಿಸುವ ಬಗ್ಗೆ ಸಂಬಂಧಿಸಿದ ಇಲಾಖೆಗಳಿಗೆ, ಸಂಸದರಿಗೆ ಸಚಿವರಿಗೆ, ಸಾಕಷ್ಟು ಸಲ ಕುಷ್ಟಗಿ ರೈಲ್ವೆ ಹೋರಾಟ ಸಮಿತಿಯಿಂದ ಮನವಿ ಸಲ್ಲಿಸಲಾಗಿದೆ. ಕುಷ್ಟಗಿಯಿಂದ ಬೆಂಗಳೂರಿಗೆ ಆದಷ್ಟು ಶೀಘ್ರದಲ್ಲಿ ಒಂದು ರೈಲು ಆರಂಭಿಸಬೇಕು, ಕುಷ್ಟಗಿ ಹುಬ್ಬಳ್ಳಿ ನಡುವೆ ಇನ್ನೊಂದು ರೈಲು ಬಿಡಬೇಕು ಎಂದು ಕೋರಿದರು.

ಮನವಿ ಸ್ವೀಕರಿಸಿದ ಸಂಸದ ರಾಜಶೇಖರ ಹಿಟ್ನಾಳ ಅವರು ಹುಬ್ಬಳ್ಳಿ ರೈಲ್ವೆ ವಿಭಾಗೀಯ ವ್ಯವಸ್ಥಾಪಕರೊಂದಿಗೆ ಚರ್ಚಿಸುವುದಾಗಿ ಹೇಳಿದರು.

ಹೋರಾಟ ಸಮಿತಿಯ ಪ್ರಮುಖರಾದ ಶ್ರೀಧರ ಘೋರ್ಪಡೆ, ವೀರೇಶ ಕರಡಿ, ಆಂಜನೇಯ ಕಂದಕೂರ, ನಜೀರಸಾಬ್, ಬಸಯ್ಯ ಸಾಲಿಮಠ, ಮಂಜುನಾಥ ಮಹಾಲಿಂಗಪುರ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿಲ್ಲಾ ಸಮ್ಮೇಳನಾಧ್ಯಕ್ಷ ಅಬ್ದುಲ್ ರಶೀದ್‌ಗೆ ಕಸಾಪ ಆಹ್ವಾ‌ನ
ಕುಡಿವ ನೀರಿನ ಸಮಸ್ಯೆ ಉದ್ಭವಿಸದಂತೆ ನೋಡಿಕೊಳ್ಳಿ: ದೇಶಪಾಂಡೆ