ಕಬ್ಬು ಬೆಳೆಗಾರರಿಗೆ ಎಸ್‌ಎಪಿ ನಿಗದಿಪಡಿಸುವಂತೆ ಆಗ್ರಹ

KannadaprabhaNewsNetwork |  
Published : Oct 09, 2026, 02:00 AM IST
ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ ಅವರಿಗೆ ಮನವಿ ಸಲ್ಲಿಸಲಾಯಿತು. | Kannada Prabha

ಸಾರಾಂಶ

ಬೇರೆ ರಾಜ್ಯಗಳ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಕಬ್ಬು ಬೆಳೆಗಾರರಿಗೆ ರಾಜ್ಯ ಸಲಹಾ ಬೆಲೆ (ಎಸ್‌ಎಪಿ) ನಿಗದಿಪಡಿಸಿ, ಪ್ರತಿ ಟನ್ ಕಬ್ಬಿಗೆ 1 ಸಾವಿರ ರು. ಹೆಚ್ಚುವರಿ ದರ ನೀಡಬೇಕು ಎಂದು ಆಗ್ರಹಿಸಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ನಗರದಲ್ಲಿ ಗುರುವಾರ ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ ಅವರಿಗೆ ಮನವಿ ಸಲ್ಲಿಸಲಾಯಿತು.

ಹಾವೇರಿ: ಬೇರೆ ರಾಜ್ಯಗಳ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಕಬ್ಬು ಬೆಳೆಗಾರರಿಗೆ ರಾಜ್ಯ ಸಲಹಾ ಬೆಲೆ (ಎಸ್‌ಎಪಿ) ನಿಗದಿಪಡಿಸಿ, ಪ್ರತಿ ಟನ್ ಕಬ್ಬಿಗೆ 1 ಸಾವಿರ ರು. ಹೆಚ್ಚುವರಿ ದರ ನೀಡಬೇಕು ಎಂದು ಆಗ್ರಹಿಸಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ನಗರದಲ್ಲಿ ಗುರುವಾರ ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ ಅವರಿಗೆ ಮನವಿ ಸಲ್ಲಿಸಲಾಯಿತು.

ಸಂಘದ ಜಿಲ್ಲಾಧ್ಯಕ್ಷ ಭುವನೇಶ್ವರ ಶಿಡ್ಲಾಪುರ ಮಾತನಾಡಿ, ಜಿಲ್ಲೆಯ ಎಲ್ಲ ಸಕ್ಕರೆ ಕಾರ್ಖಾನೆಗಳು ಕಬ್ಬಿನ ರಿಕವರಿ ಪ್ರಮಾಣದ ವಿಚಾರದಲ್ಲಿ ರೈತರಿಗೆ ಅನ್ಯಾಯ ಮಾಡುತ್ತಿವೆ. ರಿಕವರಿ ಎಂಬ ಅಸ್ತ್ರ ಬಳಸಿಕೊಂಡು ರೈತರಿಗೆ ಕಡಿಮೆ ದರ ನೀಡುವುದನ್ನು ತಡೆಯಬೇಕು ಎಂದು ಒತ್ತಾಯಿಸಿದರು.

ಬೇರೆ ರಾಜ್ಯಗಳಲ್ಲಿ ಅಲ್ಲಿನ ಸರ್ಕಾರಗಳು ಕಬ್ಬು ಬೆಳೆಗಾರರಿಗೆ 1 ಟನ್‌ಗೆ 800 ರು.ನಿಂದ 1 ಸಾವಿರ ರು.ವರೆಗೆ ಹೆಚ್ಚುವರಿ ದರ ನೀಡುತ್ತಿವೆ. ಅದೇ ಮಾದರಿಯಲ್ಲಿ ಕರ್ನಾಟಕ ಸರ್ಕಾರವೂ ರೈತರಿಗೆ 1 ಸಾವಿರ ರು. ಎಸ್‌ಎಪಿ ನೀಡಬೇಕು. ಉತ್ತರ ಕರ್ನಾಟಕಕ್ಕೆ ಕಬ್ಬಿಗೆ ಏಕರೂಪದ ದರ ನಿಗದಿಪಡಿಸಬೇಕು. ಜಿಲ್ಲೆಯ ಸಂಗೂರು ಸಕ್ಕರೆ ಕಾರ್ಖಾನೆ ವ್ಯಾಪ್ತಿಯಲ್ಲಿ ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯ ಮಾದರಿಯಲ್ಲಿ ಸರ್ಕಾರದ ವತಿಯಿಂದ ಸಕ್ಕರೆ ರಿಕವರಿ ಲ್ಯಾಬ್ ಸ್ಥಾಪಿಸಬೇಕು. ಜಿಲ್ಲೆಯ ಎಲ್ಲ ಸಕ್ಕರೆ ಕಾರ್ಖಾನೆಗಳ ಎದುರು ಸರ್ಕಾರದ ವತಿಯಿಂದಲೇ ತೂಕದ ಯಂತ್ರ ಅಳವಡಿಸಬೇಕು ಎಂದು ಆಗ್ರಹಿಸಿದರು.

ಈ ಹಿಂದೆ ಮನವಿ ಸಲ್ಲಿಸಿದಾಗ ಅಂದಿನ ಸಕ್ಕರೆ ಸಚಿವ ಶಿವಾನಂದ ಪಾಟೀಲ ಅವರು ಹಾವೇರಿ ಜಿಲ್ಲೆಯಲ್ಲಿ ಸರ್ಕಾರದಿಂದಲೇ ರಿಕವರಿ ಲ್ಯಾಬ್ ಹಾಗೂ ಕಾರ್ಖಾನೆಗಳ ಎದುರು ತೂಕದ ಯಂತ್ರ ಸ್ಥಾಪಿಸುವುದಾಗಿ ಭರವಸೆ ನೀಡಿದ್ದರು. ಆದರೆ, ಈವರೆಗೆ ಬೇಡಿಕೆ ಈಡೇರಿಲ್ಲ. ಜಿಲ್ಲೆಯಲ್ಲಿ ಸಕ್ಕರೆ ಸಚಿವರೇ ಇರುವುದರಿಂದ ಕೂಡಲೇ ಈ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು. ಜಿಲ್ಲೆಯಲ್ಲಿ ಶೇ.11.30ಕ್ಕಿಂತ ಹೆಚ್ಚಿನ ರಿಕವರಿ ಬರುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕದ ಇತರ ಭಾಗಗಳಿಗೆ ನಿಗದಿಪಡಿಸುವ ದರವನ್ನೇ ಹಾವೇರಿ ಜಿಲ್ಲೆಯ ರೈತರಿಗೂ ನೀಡಬೇಕು. ರಿಕವರಿ ಪ್ರಮಾಣದ ನೆಪದಲ್ಲಿ ರೈತರಿಗೆ ಅನ್ಯಾಯವಾಗದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದರು.

ಜಿಲ್ಲೆಯನ್ನು ಸಂರ್ಪೂಣ ಬರಪೀಡಿತ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ ಪ್ರತಿ ಎಕರೆಗೆ 30 ಸಾವಿರ ರು. ಪರಿಹಾರ ನೀಡಬೇಕು. ರಾಜ್ಯದ ಎಲ್ಲ ರೈತರ ಬೆಳೆ ಸಾಲವನ್ನು ಸಂರ್ಪೂಣ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.

ಈ ವೇಳೆ ರೈತ ಮುಖಂಡರಾದ ಸಿದ್ದಲಿಂಗಪ್ಪ ಕಲಕೋಟಿ, ಫಕೀರಪ್ಪ ಮರೋಳ, ರಾಮನಗೌಡ ನಾಗನಗೌಡ, ಗಂಗಪ್ಪ ಕಟ್ಟೆಣ್ಣನವರ, ದಿಳ್ಳೆಪ್ಪ ಕುದರಿಹಾಳ, ಮಹಾಂತೇಶ ದುರ್ಗದ, ರಾಜಣ್ಣ ಕಲ್ಲೇದೇವರ, ಸುರೇಶ ಬೆಲೆಣ್ಣನವರ, ಶಾಂತಪ್ಪ ಮುಗದೂರ, ಹರೀಶ, ಸಂಜೀವ, ವರುಣ, ನಿಂಗನಗೌಡ, ನಾಗರಾಜ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿಪಂ-ತಾಪಂ ಚುನಾವಣೆ ಮೀಸಲಾತಿ ಪ್ರಕಟ, ಆಕಾಂಕ್ಷಿಗಳಲ್ಲಿ ಹುರುಪು
ಬಿಜೆಪಿ ಮುಖಂಡರ ಮೇಲೆ ಹಲ್ಲೆ ನಡೆದಿಲ್ಲ: ಎಸ್ಪಿ ಸ್ಪಷ್ಟನೆ