ಖಾಸಗಿ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿ ಬೇಡಿಕೆ ಈಡೇರಿಸಲು ಆಗ್ರಹ

KannadaprabhaNewsNetwork |  
Published : Nov 12, 2026, 02:00 AM IST
ಸಭೆಯಲ್ಲಿ ಹೋರಾಟದ ಕರಪತ್ರಗಳನ್ನು ಬಿಡುಗಡೆ ಮಾಡಲಾಯಿತು. | Kannada Prabha

ಸಾರಾಂಶ

ಉತ್ತರ ಕನ್ನಡ ಜಿಲ್ಲಾ ಸಂಚಾಲಕ ಎಂ.ಟಿ. ಗೌಡ ಮಾತನಾಡಿ, ಅನುದಾನಿತ ಶಾಲೆಗಳ ವಿದ್ಯಾರ್ಥಿಗಳು ಮತ್ತು ನೌಕರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸದೆ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿರುವುದು ಖಂಡನೀಯ ಎಂದರು.

ಹೊನ್ನಾವರ: ಅನುದಾನಿತ ಶಿಕ್ಷಣ ಸಂಸ್ಥೆಗಳ ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿಯ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘವು ಹಮ್ಮಿಕೊಂಡಿರುವ ಹೋರಾಟಕ್ಕೆ ಹೊನ್ನಾವರ ಖಾಸಗಿ ಶಾಲಾ ಸಂಸ್ಥೆಗಳ ಒಕ್ಕೂಟ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ.

ಪಟ್ಟಣದ ನ್ಯೂ ಇಂಗ್ಲಿಷ್ ಶಾಲೆಯಲ್ಲಿ ನಡೆದ ತಾಲೂಕಿನ ಖಾಸಗಿ ಶಾಲಾ ಸಂಸ್ಥೆಗಳ ಒಕ್ಕೂಟ ನಡೆಸಿದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.

01-04-2006ರ ನಂತರ ನೇಮಕಗೊಂಡ ನೌಕರರಿಗೆ ಹಳೆಯ ಪಿಂಚಣಿ ಯೋಜನೆ ಜಾರಿ, ಖಾಲಿ ಹುದ್ದೆಗಳ ಭರ್ತಿಗೆ ಅನುಮತಿ, 2015ರಿಂದ ಬಾಕಿ ಇರುವ ನೇಮಕಾತಿಗಳ ಅನುಮೋದನೆ, ದ್ವಿಭಾಷಾ ಪದ್ಧತಿ ವಿಸ್ತರಣೆ, ಆರೋಗ್ಯ ಸಂಜೀವಿನಿ ಯೋಜನೆ, ಸೇವಾ ಭದ್ರತೆ, ಮುಂಬಡ್ತಿ ಹಾಗೂ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವಿದ್ಯಾರ್ಥಿ- ಶಿಕ್ಷಕರ ಅನುಪಾತ ಕಡಿತ ಸೇರಿದಂತೆ ವಿವಿಧ ಬೇಡಿಕೆಗಳನ್ನು ಸರ್ಕಾರ ತಕ್ಷಣ ಈಡೇರಿಸಬೇಕೆಂದು ಒಕ್ಕೂಟದ ಅಧ್ಯಕ್ಷ ಕೃಷ್ಣಮೂರ್ತಿ ಭಟ್ಟ ಶಿವಾನಿ ಆಗ್ರಹಿಸಿದರು.

ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಸಂಘದ ಕಾರವಾರ ಶೈಕ್ಷಣಿಕ ಜಿಲ್ಲಾ ಕಾರ್ಯದರ್ಶಿ ಎಲ್.ಎಂ. ಹೆಗಡೆ, ನ. 17ರಂದು ಧಾರವಾಡದಲ್ಲಿ ನಡೆಯುವ ಬೃಹತ್ ಪ್ರತಿಭಟನೆ ಹಾಗೂ ನ. 18ರಿಂದ ಆರಂಭವಾಗುವ ಅನಿರ್ದಿಷ್ಟಾವಧಿ ಶಾಲಾ ಬಂದ್‌ಗೆ ಜಿಲ್ಲೆಯ ಎಲ್ಲ ಆಡಳಿತ ಮಂಡಳಿಗಳು, ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂದಿ ಬೆಂಬಲ ನೀಡುವಂತೆ ಕರೆ ನೀಡಿದರು.

ಉತ್ತರ ಕನ್ನಡ ಜಿಲ್ಲಾ ಸಂಚಾಲಕ ಎಂ.ಟಿ. ಗೌಡ ಮಾತನಾಡಿ, ಅನುದಾನಿತ ಶಾಲೆಗಳ ವಿದ್ಯಾರ್ಥಿಗಳು ಮತ್ತು ನೌಕರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸದೆ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿರುವುದು ಖಂಡನೀಯ. ಅನುದಾನಿತ ಶಿಕ್ಷಣ ಸಂಸ್ಥೆಗಳ ಅಸ್ತಿತ್ವ ಹಾಗೂ ನೌಕರರ ಹಿತದೃಷ್ಟಿಯಿಂದ ಬಸವರಾಜ ಹೊರಟ್ಟಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಎಲ್ಲರೂ ಕಡ್ಡಾಯವಾಗಿ ಬೆಂಬಲ ನೀಡಬೇಕು ಎಂದು ಕರೆ ನೀಡಿದರು.

ಒಕ್ಕೂಟದ ಪ್ರವರ್ತಕ ಕೃಷ್ಣಮೂರ್ತಿ ಹೆಬ್ಬಾರ, ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಮತ್ತು ನೌಕರರಿಗೆ ದೊರೆಯುವ ಸೌಲಭ್ಯಗಳನ್ನು ಅನುದಾನಿತ ಶಾಲೆಗಳಿಗೂ ಒಂದೇ ಆದೇಶದ ಮೂಲಕ ವಿಸ್ತರಿಸಬೇಕೆಂದು ಒತ್ತಾಯಿಸಿದರು.

ರಾಜೀವ್ ಶ್ಯಾನುಭಾಗ, ಯೋಗೀಶ್ ರಾಯ್ಕರ್, ಜೈವಂತ ಶೇಟ್, ಮಹೇಶ ಶೆಟ್ಟಿ, ಸೋಮೇಶ ಪೂಜಾರಿ ಮತ್ತಿತರರು ಉಪಸ್ಥಿತರಿದ್ದು ಬೆಂಬಲ ಸೂಚಿಸಿದರು. ತಾಲೂಕು ಅಧ್ಯಕ್ಷ ಸಂತೋಷಕುಮಾರ ನಾಯ್ಕ ಸ್ವಾಗತಿಸಿದರು. ಸಿ.ಆರ್. ಹೆಗಡೆ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದೀಪಾವಳಿಲೀ ರಾಕೆಟ್‌ನಂತೆ ಹಾರಿದ ವಾಯು ಮಾಲಿನ್ಯ!
ಕೌಟುಂಬಿಕ ಕೇಸಲ್ಲಿ ಕುಟುಂಬ ಸಿಲುಕಿಸುವುದು ತರವಲ್ಲ: ಕೋರ್ಟ್‌