ದೈಹಿಕ ಶಿಕ್ಷಕರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹ

KannadaprabhaNewsNetwork |  
Published : Jun 22, 2024, 12:48 AM IST
ಪೋಟೊ-೨೧ಬಿವೈಡಿ೧ | Kannada Prabha

ಸಾರಾಂಶ

ದೈಹಿಕ ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ದೈಹಿಕ ಶಿಕ್ಷಕರ ಸಂಘ, ತಾಲೂಕು ಘಟಕದ ಸದಸ್ಯರು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಜಿ. ಕೋಟಿ ಮೂಲಕ ಶಿಕ್ಷ ಣ ಇಲಾಖೆ ಆಯುಕ್ತರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಬ್ಯಾಡಗಿ:ದೈಹಿಕ ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ದೈಹಿಕ ಶಿಕ್ಷಕರ ಸಂಘ, ತಾಲೂಕು ಘಟಕದ ಸದಸ್ಯರು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಜಿ. ಕೋಟಿ ಮೂಲಕ ಶಿಕ್ಷ ಣ ಇಲಾಖೆ ಆಯುಕ್ತರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.ಪಟ್ಟಣದ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಮನವಿ ಸಲ್ಲಿಸಿ ನಂತರ ಮಾತನಾಡಿದ ಪ್ರಾಥಮಿಕ ಶಾಲೆಗಳ ದೈಹಿಕ ಶಿಕ್ಷಕದ ಸಂಘದ ಅಧ್ಯಕ್ಷ ಎ.ಟಿ. ಪೀಠದ, ದೈಹಿಕ ಶಿಕ್ಷಕರನ್ನು ಸಹ ಸರಕಾರ ಸಹ ಶಿಕ್ಷಕರೆಂದು ಪರಿಗಣಿಸಿ ಮುಖ್ಯ ಶಿಕ್ಷಕರಿಗೆ ಸಿಗುವ ಎಲ್ಲಾ ಸೌಲಭ್ಯಗಳನ್ನು ನೀಡುವಂತೆ ಈಗಾಗಲೇ ಹಲವು ಬಾರಿ ಮನವಿ ಸಲ್ಲಿಸಲಾಗಿದೆ ಆದರೆ ಇಲ್ಲಿಯವರೆಗೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಕೂಡಲೇ ದೈಹಿಕ ಶಿಕ್ಷಕರ ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿದರು.ಪ್ರೌಢಶಾಲೆಗಳ ಸಂಘದ ಅಧ್ಯಕ್ಷ ಪಿ.ಎಸ್. ಉಪ್ಪಣಸಿ ಮಾತನಾಡಿ, ರಾಜ್ಯದ ಪ್ರಾಥಮಿಕ ಹಾ ಗೂ ಪ್ರೌಢ ಶಾಲೆಗಳಲ್ಲಿ ಸಾವಿರಾರು ದೈಹಿಕ ಶಿಕ್ಷಕ ಹುದ್ದೆಗಳು ಖಾಲಿ ಉಳಿದಿವೆ. ಕಳೆದ ಹಲವು ವರ್ಷಗಳಿಂದ ಖಾಲಿ ಹುದ್ದೆ ತುಂಬುವ ಕೆಲಸವಾಗಿಲ್ಲ, ಕೂಡಲೇ ಖಾಲಿ ಇರುವ ಹುದ್ದೆಗಳನ್ನು ತುಂಬಿದಲ್ಲಿ ಮಕ್ಕಳು ದೈಹಿಕ ಶಿಕ್ಷಣದಿಂದ ವಂಚಿತರಾಗುವುದನ್ನು ತಪ್ಪಿಸುವ ಜೊತೆಗೆ ನಿರುದ್ಯೋಗಿಗಳಿಗೆ ಜೀವನ ಕಟ್ಟಿಕೊಳ್ಳಲು ಸಹಕಾರಿಯಾಗಲಿದೆ ಎಂದು ಮನವಿ ಮಾಡಿದರು.ಎಸ್.ಆರ್. ಬಡ್ಡಿಯವರ ಮಾತನಾಡಿ, ದೈಹಿಕ ಶಿಕ್ಷಕ ಹಿತ ಕಾಯುವ ನಿಟ್ಟಿನಲ್ಲಿ ರಾಜ್ಯದಲ್ಲಿ ದೈಹಿಕ ಶಿಕ್ಷಣದ ಪ್ರತ್ಯೇಕ ನಿರ್ದೇಶನಾಲಯ ಸ್ಥಾಪಿಸಬೇಕಿದೆ, ಇದರಿಂದ ದೈಹಿಕ ಶಿಕ್ಷಕರು ಎದುರಿಸುತ್ತಿರುವ ಹಲವು ಸಮಸ್ಯೆಗಳನ್ನು ಪರಿಹರಿಸಲು ಸಹಕಾರಿಯಾಗಲಿದೆ. ಆದ್ದರಿಂದ ಕೂಡಲೇ ದೈಹಿಕ ಶಿಕ್ಷಕರ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿದರು. ಈ ಸಂದರ್ಭದಲ್ಲಿ ಎಸ್.ಯು. ಮಾಸ್ತಿ, ಡಿ.ಎಸ್. ಲಮಾಣಿ, ಎಸ್.ಎಸ್. ಗೂಳೇರ, ವೀರೇಶ ಅರಳಿ, ಜೆ.ಐ. ಗಡಾದ, ಪಿ.ಎಂ. ಸೊಪ್ಪಿ ಎಸ್.ಟಿ. ಬಣಕಾರ, ಜೆ.ಐ. ಮೈದೂರ, ಆರ್.ಎಸ್. ಹಣಗೋಡಿಮಠ, ಎಚ್.ಎನ್. ಗೂಳೆರ, ಎಚ್.ಎನ್. ಹಿರೇಹಾಳ, ಎಂ.ಎಫ್. ಕರಿಯಣ್ಣನವರ ಹಾಗೂ ಇನ್ನಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ, ಎಚ್‌ಡಿಕೆ ಜಾತಿವಾದಿಗಳಲ್ಲ, ಕುಟುಂಬವಾದಿಗಳು : ಸಿದ್ದರಾಮಯ್ಯ ತರಾಟೆ
₹5 ಅಕ್ರಮದಲ್ಲಿ ಪಾರಾಗಿದ್ದ ಲಮಾಣಿ ₹5 ಲಕ್ಷ ಕೇಸ್‌ನಲ್ಲಿ ಲೋಕಾ ಖೆಡ್ಡಾಕ್ಕೆ!