ಶಾಸಕ ಸಂಗಮೇಶ್ವರ್‌ಗೆ ಮಂತ್ರಿ ಸ್ಥಾನ ನೀಡಲು ಒತ್ತಾಯ

KannadaprabhaNewsNetwork |  
Published : Jun 05, 2026, 01:45 AM IST
ರಾಜ್ಯ ಬಂಜಾರ ರೈತ ಸಂಘದ ಅಧ್ಯಕ್ಷ ಕೃಷ್ಣನಾಯ್ಕ. | Kannada Prabha

ಸಾರಾಂಶ

ಕ್ಷೇತ್ರದಲ್ಲಿ ೪ ಬಾರಿ ಗೆಲುವು ಸಾಧಿಸಿರುವ ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ರವರ ಸರ್ಕಾರದಲ್ಲಿ ಮಂತ್ರಿ ಸ್ಥಾನ ನೀಡಬೇಕೆಂಬ ಕೂಗು ಹೆಚ್ಚಾಗುತ್ತಿದ್ದು, ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ಗಳು ವ್ಯಾಪಕವಾಗಿ ಹರಿದಾಡುತ್ತಿವೆ. ಈ ನಡುವೆ ಕೆಲವು ಸಂಘ-ಸಂಸ್ಥೆಗಳು, ಮುಖಂಡರು ನೇರವಾಗಿ ಪತ್ರಿಕಾಗೋಷ್ಠಿ, ಪತ್ರಿಕಾ ಹೇಳಿಕೆಗಳ ಮೂಲಕ ಮಂತ್ರಿ ಸ್ಥಾನ ನೀಡುವಂತೆ ಆಗ್ರಹಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಭದ್ರಾವತಿ

ಕ್ಷೇತ್ರದಲ್ಲಿ ೪ ಬಾರಿ ಗೆಲುವು ಸಾಧಿಸಿರುವ ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ರವರ ಸರ್ಕಾರದಲ್ಲಿ ಮಂತ್ರಿ ಸ್ಥಾನ ನೀಡಬೇಕೆಂಬ ಕೂಗು ಹೆಚ್ಚಾಗುತ್ತಿದ್ದು, ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ಗಳು ವ್ಯಾಪಕವಾಗಿ ಹರಿದಾಡುತ್ತಿವೆ. ಈ ನಡುವೆ ಕೆಲವು ಸಂಘ-ಸಂಸ್ಥೆಗಳು, ಮುಖಂಡರು ನೇರವಾಗಿ ಪತ್ರಿಕಾಗೋಷ್ಠಿ, ಪತ್ರಿಕಾ ಹೇಳಿಕೆಗಳ ಮೂಲಕ ಮಂತ್ರಿ ಸ್ಥಾನ ನೀಡುವಂತೆ ಆಗ್ರಹಿಸಿದ್ದಾರೆ.

ಸಂಗಮೇಶ್ವರ್ ಜಿಲ್ಲೆಯಲ್ಲಿ ೪ ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಪಕ್ಷದ ಹಿರಿಯ ಶಾಸಕರಾಗಿದ್ದು, ಅಲ್ಲದೆ ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿಯಾಗಿದ್ದಾರೆ. ವಿಶೇಷವಾಗಿ ಕ್ಷೇತ್ರದಲ್ಲಿ ಸರ್ವ ಜನಾಂಗದ ನಾಯಕರಾಗಿ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದಾರೆ. ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಹೆಚ್ಚಿನ ಶ್ರಮ ವಹಿಸುತ್ತಿದ್ದಾರೆ. ಅವರಿಗೆ ಮಂತ್ರಿ ಸ್ಥಾನ ಹೊಂದುವ ಹಕ್ಕಿದೆ. ಈ ಬಾರಿ ಸಚಿವ ಸ್ಥಾನಬೇಕೆಂದು ಪೋಸ್ಟ್‌ಗಳಲ್ಲಿ ಆಗ್ರಹಿಸಲಾಗಿದೆ.

ಎರಡು ಬಾರಿ ನಿಗಮ ಮಂಡಳಿ ಅಧ್ಯಕ್ಷ: ಕಳೆದ ಎರಡು ಅವಧಿಯಿಂದ ಮಂತ್ರಿ ಸ್ಥಾನ ನೀಡುವಂತೆ ಶಾಸಕ ಬಿ.ಕೆ ಸಂಗಮೇಶ್ವರ್ ಪಕ್ಷದ ವರಿಷ್ಠರಿಗೆ ಒತ್ತಾಯಿಸಿಕೊಂಡು ಬರುತ್ತಿದ್ದಾರೆ. ಆದರೆ ಮಂತ್ರಿ ಸ್ಥಾನ ನೀಡುವ ಬದಲು ಎರಡು ಬಾರಿ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ನೇಮಕಗೊಳಿಸಲಾಗಿದೆ. ಈ ಬಾರಿ ಮಂತ್ರಿಯಾಗುತ್ತಾರೆಂಬ ನಿರೀಕ್ಷೆ ಕ್ಷೇತ್ರದ ಜನರು ಹೊಂದಿದ್ದಾರೆ. ಅಲ್ಲದೆ ಸಂಗಮೇಶ್ವರ್ ಅವರು ತಮ್ಮ ಸ್ಥಾನಕ್ಕೆ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲು ಪುತ್ರ ಬಿ.ಎಸ್ ಗಣೇಶ್ ಅವರಿಗೆ ಅನುವು ಮಾಡಿಕೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಬಾರಿ ಮಂತ್ರಿ ಸ್ಥಾನ ಲಭಿಸಲೇಬೇಕೆಂಬುದು ಅಭಿಮಾನಿಗಳು, ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರ ಆಗ್ರಹವಾಗಿದೆ.

ರಾಜ್ಯ ಬಂಜಾರ ರೈತ ಸಂಘದಿಂದ ಮಂತ್ರಿ ಸ್ಥಾನಕ್ಕೆ ಆಗ್ರಹ: ಕ್ಷೇತ್ರ ಸರ್ವತೋಮುಖ ಬೆಳವಣಿಗೆ ಹಿನ್ನೆಲೆಯಲ್ಲಿ ಹಾಗೂ ೪ ಬಾರಿ ಶಾಸಕರಾಗಿ ಹೆಚ್ಚಿನ ಅನುಭವ ಹೊಂದಿರುವ ಬಿ.ಕೆ ಸಂಗಮೇಶ್ವರ್ ಅವರಿಗೆ ಈ ಬಾರಿ ಮಂತ್ರಿ ಸ್ಥಾನ ನೀಡಬೇಕೆಂದು ರಾಜ್ಯ ಬಂಜಾರ ರೈತ ಸಂಘ ಆಗ್ರಹಿಸಿದೆ. ಮಂತ್ರಿ ಸ್ಥಾನ ನೀಡುವುದರಿಂದ ಜಿಲ್ಲೆಯ ಸರ್ವತೋರ್ಮುಖ ಅಭಿವೃದ್ಧಿಗೆ ಸಹಕಾರಿಯಾಗಲಿದ್ದು, ಅದರಲ್ಲೂ ವಿಶೇಷವಾಗಿ ಭದ್ರಾವತಿ ವಿಧಾನಸಭಾ ಕ್ಷೇತ್ರಕ್ಕೆ ಇನ್ನೂ ಹೆಚ್ಚಿನ ಅನುಕೂಲವಾಗಲಿದೆ. ಆ ಮೂಲಕ ಕ್ಷೇತ್ರದಲ್ಲಿ ಪುನಃ ಇತಿಹಾಸದ ವೈಭವ ಮರಳಲಿದೆ. ಸಂಗಮೇಶ್ವರ್ ಅವರು ಸರ್ವ ಧರ್ಮ, ಸಮುದಾಯ, ಜಾತಿ-ಜನಾಂಗಗಳನ್ನು ಪ್ರೀತಿಸುವ ಜಿಲ್ಲೆಯಲ್ಲಿರುವ ಏಕೈಕ ನಾಯಕರಾಗಿದ್ದಾರೆ. ಈ ಬಾರಿ ಮಂತ್ರಿ ಸ್ಥಾನ ನೀಡಲೇಬೇಕೆಂದು ಸಂಘದ ಅಧ್ಯಕ್ಷ ಕೃಷ್ಣನಾಯ್ಕ ಆಗ್ರಹಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತೆಲಂಗಾಣದಲ್ಲಿ ‘ನಂದಿನಿ’ ಮಾರಾಟಕ್ಕಿದ್ದ ತೊಡಕು ನಿವಾರಣೆ
ರಾಜ್ಯಸಭೆ, ಎಂಎಲ್ಸಿ ಎಲೆಕ್ಷನ್: ಇಂದು/ನಾಳೆ ಬಿಜೆಪಿ ಪಟ್ಟಿ?