ಕನ್ನಡಪ್ರಭ ವಾರ್ತೆ ನಾಗಮಂಗಲ
ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಗಾಣಿಗ ಸಮಾಜದ ಮೂವರು ಶಾಸಕರು ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿದ್ದರೂ ಕೂಡ ಸಮುದಾಯದ ಯಾವೊಬ್ಬ ಶಾಸಕರಿಗೂ ಸರ್ಕಾರದಲ್ಲಿ ಸಚಿವ ಸ್ಥಾನ ನೀಡದಿರುವುದು ದುರದೃಷ್ಟಕರ ಎಂದು ಬೇಸರ ವ್ಯಕ್ತಪಡಿಸಿದರು.
ಕಾಂಗ್ರೆಸ್ ಸರ್ಕಾರದಲ್ಲಿ ನಮ್ಮ ಗಾಣಿಗ ಸಮಾಜದ ಶಾಸಕರು ಇಲ್ಲಿಯವರೆಗೂ ಸಚಿವ ಸ್ಥಾನ ಪಡೆಯುವಲ್ಲಿ ವಂಚಿತರಾಗಿದ್ದಾರೆ. ಈ ಹಿಂದೆ ಬಿಜೆಪಿ ಸರ್ಕಾರದಲ್ಲಿ ಲಕ್ಷ್ಮಣ ಸವದಿ ಅವರು ಉಪಮುಖ್ಯಮಂತ್ರಿ ಸ್ಥಾನ ಅಲಂಕರಿಸಿದ್ದರು. ಆದರೆ, ಕಾಂಗ್ರೆಸ್ ಪಕ್ಷ ಗಾಣಿಗ ಸಮಾಜಕ್ಕೆ ಸತತವಾಗಿ ಅನ್ಯಾಯ ಮಾಡುತ್ತಾ ಬಂದಿದೆ ಎಂದರು.ಶಾಸಕರಾದ ಬಿ.ಕೆ.ಸಂಗಮೇಶ್ ಮತ್ತು ವೀರೇಂದ್ರ ಪಪ್ಪಿ ಅವರಿಗೆ ಮುಂದಿನ ಕ್ಯಾಬಿನೆಟ್ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ನೀಡಬೇಕು. ಇಲ್ಲವಾದಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ನಾವು ಅನಿವಾರ್ಯವಾಗಿ ಹೋರಾಟ ಮಾಡಬೇಕಾಗುತ್ತದೆ ಎಂದು ಆಗ್ರಹಿಸಿದರು. ಜೂ.೨೦ಕ್ಕೆ ಬೆಂಗಳೂರಿನಲ್ಲಿ ಬೃಹತ್ ಪ್ರತಿರೋಧ ಸಮಾವೇಶಕನ್ನಡಪ್ರಭ ವಾರ್ತೆ ಮಂಡ್ಯ
ನಾಗರಿಕರ ಆಕ್ಷೇಪಣೆಗಳು ಮತ್ತು ಪ್ರಶ್ನೆಗಳ ನಡುವೆಯೂ ರಾಜ್ಯ ಚುನಾವಣಾ ಆಯೋಗದಿಂದ ಇದುವರೆಗೆ ಯಾವುದೇ ರೀತಿಯ ಪ್ರತಿಕ್ರಿಯೆ, ಸ್ಪಂದನೆ ದೊರಕಿಲ್ಲ. ಇದನ್ನು ಖಂಡಿಸುವುದಾಗಿ ಹೇಳಿದ ಅವರು, ಜೂ.೧೩ರಿಂದ ಜೂ.೧೮ರವರೆಗೆ ಐದು ಮಾರ್ಗಗಳಲ್ಲಿ ಇದು ಕರ್ನಾಟಕ- ನಡೆಯೋದಿಲ್ಲ ಯಾವುದೇ ದುಷ್ಟ ಆಟ ಎಂಬ ಘೋಷವಾಕ್ಯದೊಂದಿಗೆ ರಾಜ್ಯವ್ಯಾಪಿ ಜನಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು.ಬೀದರ್‌ನಿಂದ ಆರಂಭವಾಗಿ ಮಂಡ್ಯವರೆಗೂ ಎಲ್ಲಾ ಜಿಲ್ಲೆಗಳಲ್ಲೂ ಜಾಥಾ ಸಂಚರಿಸಲಿದೆ. ಜೂ.೨೦ರಂದು ಜಾಥಾ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸಮಾವೇಶಗೊಳ್ಳಲಿದೆ ಎಂದು ನುಡಿದರು.