ಶಾಸಕ ಸಿ.ಪುಟ್ಟರಂಗಶೆಟ್ಟರಿಗೆ ಸಚಿವ ಸ್ಥಾನ ನೀಡಲು ಒತ್ತಾಯ

KannadaprabhaNewsNetwork |  
Published : Nov 20, 2025, 12:15 AM IST
19ಸಿಎಚ್ಎನ್‌55ಚಾಮರಾಜನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ  ಕಾಂಗ್ರೆಸ್ ಮುಖಂಡ ಹೆಚ್.ಎಸ್.ನಾಗರಾಜು ಸುದ್ದಿಗೋಷ್ಠಿ ನಡೆಸಿದರು. | Kannada Prabha

ಸಾರಾಂಶ

ಶಾಸಕ ಸಿ.ಪುಟ್ಟರಂಗಶಟ್ಟಿ ಅವರಿಗೆ ಕಳೆದ ಬಾರಿಯೇ ಸಚಿವ ಸ್ಥಾನ ನೀಡಬೇಕಿತ್ತು. ಆದರೆ ಕೊನೆ ಗಳಿಗೆಯಲ್ಲಿ ಅವರ ಹೆಸರನ್ನು ಕೈ ಬಿಡಲಾಗಿತ್ತು. ಆದ್ದರಿಂದ ಮುಂದಿನ‌ ಸಚಿವ ಸಂಪುಟ ಪುನಾರಚನೆ ವೇಳೆ ಸಚಿವ ಸ್ಥಾನ ನೀಡುವ ಮೂಲಕ ಉಪ್ಪಾರ ಜನಾಂಗಕ್ಕೆ ಸೂಕ್ತ ಪ್ರಾತಿನಿಧ್ಯ ದೊರಕಿಸಬೇಕು .

ಚಾಮರಾಜನಗರ: ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ 4 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಈ ಬಾರಿಯ ಸಚಿವ ಸಂಪುಟ ಪುನಾರಚನೆಯ ಸಂದರ್ಭದಲ್ಲಿ ಸಚಿವ ಸ್ಥಾನ, ಜಿಲ್ಲಾ ಉಸ್ತುವಾರಿ ನೀಡಬೇಕು ಎಂದು ಕಾಂಗ್ರೆಸ್ ಮುಖಂಡ ಎಚ್.ಎಸ್.ನಾಗರಾಜು ಒತ್ತಾಯಿಸಿದರು. ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಶಾಸಕ ಸಿ.ಪುಟ್ಟರಂಗಶಟ್ಟಿ ಅವರಿಗೆ ಕಳೆದ ಬಾರಿಯೇ ಸಚಿವ ಸ್ಥಾನ ನೀಡಬೇಕಿತ್ತು. ಆದರೆ ಕೊನೆ ಗಳಿಗೆಯಲ್ಲಿ ಅವರ ಹೆಸರನ್ನು ಕೈ ಬಿಡಲಾಗಿತ್ತು. ಆದ್ದರಿಂದ ಮುಂದಿನ‌ ಸಚಿವ ಸಂಪುಟ ಪುನಾರಚನೆ ವೇಳೆ ಸಚಿವ ಸ್ಥಾನ ನೀಡುವ ಮೂಲಕ ಉಪ್ಪಾರ ಜನಾಂಗಕ್ಕೆ ಸೂಕ್ತ ಪ್ರಾತಿನಿಧ್ಯ ದೊರಕಿಸಬೇಕು ಎಂದು ಆಗ್ರಹಿಸಿದರು.

ಮುಖಂಡ ಜವರಯ್ಯ ಮಾತನಾಡಿ ಸರಳ, ಸಜ್ಜನಿಕೆ ವ್ಯಕ್ತಿತ್ವದ, ಸದಾ ಜನರ ಕಷ್ಟ ಸುಖಗಳಲ್ಲಿ ಭಾಗಿಯಾಗುವ ಶಾಸಕ ಸಿ.ಪುಟ್ಟರಂಗಶೆಟ್ಟರಿಗೆ ಸಚಿವ ಸ್ಥಾನ ನೀಡಿದರೆ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಗೆಲ್ಲಲು ಸಹಕಾರಿಯಾಗಲಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಸಿದ್ದರಾಜು, ಅಂಬಿಕಾ, ಶಿವಕುಮಾರ್, ನಿಂಗರಾಜು, ಚೆನ್ನಬಸಪ್ಪ, ಸುಂದರ್ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಡ್ರಗ್ಸ್‌ ವಿರುದ್ಧ ಸಿಎಂ ತವರಿಂದಲೇ ಹೋರಾಟ : ವಿಜಯೇಂದ್ರ
ಚಿಕ್ಕಮಗಳೂರು ಗಿರಿಧಾಮಗಳಲ್ಲಿ ಪ್ರವಾಸಿಗರ ಕಾರುಬಾರು