ಕನ್ನಡಪ್ರಭ ವಾರ್ತೆ ರಾಮನಗರ
ನಿಯೋಗದಲ್ಲಿದ್ದ ಕಸಬಾ ಮತ್ತು ಕೈಲಾಂಚ ಹೋಬಳಿ ಭಾಗದ ಕಾಂಗ್ರೆಸ್ ನ ಹಿರಿಯ ಮತ್ತು ಯುವ ಮುಖಂಡರು, ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತನಾಗಿ ಎಸ್.ಗಂಗಾಧರಯ್ಯ ಶ್ರಮಿಸುತ್ತಿದ್ದಾರೆ. ಗ್ರಾಮ ಮತ್ತು ತಾಲೂಕಿನಲ್ಲಿ ಪಕ್ಷ ಸಂಘಟನೆಗೆ ತಮ್ಮದೇ ಆದ ಕಾಣಿಕೆ ನೀಡಿದ್ದಾರೆ. ಅವರಿಗೆ ರಾಮನಗರ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಕಲ್ಪಿಸಿದರೆ ಪಕ್ಷವನ್ನು ಮತ್ತಷ್ಟು ಬಲಿಷ್ಠವಾಗಿ ಸಂಘಟಿಸುತ್ತಾರೆ ಎಂದು ಡಿ.ಕೆ.ಸುರೇಶ್ ಮತ್ತು ಇಕ್ಬಾಲ್ ಹುಸೇನ್ ಅವರಿಗೆ ಮನವರಿಕೆ ಮಾಡಿಕೊಟ್ಟರು. ಇದಕ್ಕೆ ಇಬ್ಬರೂ ನಾಯಕರು ಸೂಕ್ತ ಕ್ರಮ ವಹಿಸುವುದಾಗಿ ಭರವಸೆ ನೀಡಿದರು.
ಈ ವೇಳೆ ಮಾತನಾಡಿದ ಎಸ್.ಗಂಗಾಧರಯ್ಯ, ಕಳೆದ 22 ವರ್ಷದಿಂದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಸುಗ್ಗನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಪಕ್ಷದ ಧ್ಯೇಯೋದ್ದೇಶವನ್ನು ಸಾರುವ ಮೂಲಕ ಯುವ ಸಮೂಹವನ್ನು ಕಾಂಗ್ರೆಸ್ ಪಕ್ಷಕ್ಕೆ ಕರೆ ತರುವಲ್ಲಿ ಸಾಕಷ್ಟು ಕೆಲಸ ಮಾಡಿದ್ದೇನೆ. ಈ ಎಲ್ಲ ಕಾರಣಗಳಿಂದಾಗಿ ಕಸಬಾ ಹೋಬಳಿ ವ್ಯಾಪ್ತಿಯಲ್ಲಿ ಪಕ್ಷವೂ ಸದೃಢವಾಗುತ್ತಿದೆ ಎಂದು ಹೇಳಿದರು.ನನ್ನ ಪಕ್ಷ ನಿಷ್ಠೆಯನ್ನು ಗುರುತಿಸಿ ಅಂದಿನ ಸಂಸದರಾಗಿದ್ದ ಡಿ.ಕೆ.ಸುರೇಶ್ ಅವರ ಸೂಚನೆ ಹಾಗೂ ಶಾಸಕ ಎಚ್.ಎ.ಇಕ್ಬಾಲ್ ಹುಸೇನ್ ಅವರ ಮಾರ್ಗದರ್ಶನದಲ್ಲಿ ಸುಗ್ಗನಹಳ್ಳಿ ವಿಎಸ್‌ಎಸ್‌ಎನ್ ನಿರ್ದೇಶಕನಾಗಿ ಅವಿರೋಧವಾಗಿ ಆಯ್ಕೆಯಾಗಿದ್ದೆ. ಇದೇ ಅವಧಿಯಲ್ಲಿ ಸಂಘದ ಅಧ್ಯಕ್ಷನಾಗಿ ಆಯ್ಕೆಯಾಗುವ ಭಾಗ್ಯವೂ ಲಭಿಸಿತು. ನನಗೆ ಸಿಕ್ಕ ಅಧಿಕಾರವಧಿಯಲ್ಲಿ ಸಾಕಷ್ಟು ಕೆಲಸ ಮಾಡಿದ್ದೇನೆ. ಜನಾಭಿಮುಖಿಯಾಗಿ ಹಾಗೂ
ನನ್ನ ಅವಧಿಯಲ್ಲಿ ಸಂಘಕ್ಕೆ ₹40 ಲಕ್ಷ ಆದಾಯ ಬಂದಿದ್ದು, ಎರಡು ಅಂತಸ್ತಿನ ಕಟ್ಟಡ ನಿರ್ಮಾಣ ಮಾಡಿ, ಲೋಕಾರ್ಪಣೆಗೊಳಿಸಲಾಗಿದೆ. ಕೆಸಿಸಿ ಬೆಳೆಸಾಲ, ರಸಗೊಬ್ಬರ ರೈತರಿಗೆ ವಿತರಣೆ ಮಾಡಲಾಗಿದೆ.
ಈಗ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತದಲ್ಲಿದ್ದು, ನಮ್ಮದೇ ಪಕ್ಷದ ಶಾಸಕರು ಇದ್ದಾರೆ. ಇದೆಲ್ಲವನ್ನೂ ಬಳಸಿಕೊಂಡು ಹಾಗೂ ಹಿರಿಯ- ಕಿರಿಯ ಮುಖಂಡರನ್ನು ವಿಶ್ವಾಸಕ್ಕೆ ಪಡೆದು ಪಕ್ಷವನ್ನು ಸದೃಢವಾಗಿ ಸಂಘಟಿಸುತ್ತೇನೆ. ಡಿ.ಕೆ.ಸುರೇಶ್ ಮತ್ತು ಇಕ್ಬಾಲ್ ಹುಸೇನ್ ಅವರಲ್ಲಿ ಅವಕಾಶ ನೀಡುವಂತೆ ಮನವಿ ಮಾಡಿದ್ದು, ಅಧ್ಯಕ್ಷ ಸ್ಥಾನ ಸಿಗುವ ನಂಬಿಕೆಯಿದೆ ಎಂದು ಗಂಗಾಧರಯ್ಯ ವಿಶ್ವಾಸ ವ್ಯಕ್ತಪಡಿಸಿದರು.