ಕನ್ನಡಪ್ರಭ ವಾರ್ತೆ ಶಿರಾ
ರಾಷ್ಟ್ರ ಮಟ್ಟದ ಹಿರಿಯ ಸಹಕಾರ ನಾಯಕರು, ರಾಜ್ಯದ ಅಹಿಂದ ಮುಖಂಡರು, ಡಿಸಿಸಿ ಬ್ಯಾಂಕ್ ಅಧ್ಯಕ್ಷರು, ಮಾಜಿ ಸಚಿವರು ನಮ್ಮೆಲ್ಲರ ನೆಚ್ಚಿನ ನಾಯಕರಾದ ಕೆ.ಎನ್ ರಾಜಣ್ಣ ಅವರನ್ನು ಸಚಿವ ಸಂಪುಟಕ್ಕೆ ಪುನಃ ಸೇರ್ಪಡೆ ಮಾಡಿಕೊಳ್ಳಬೇಕೆಂದು ಸರ್ಕಾರನ್ನು ಒತ್ತಾಯಿಸಲು ಅ. 21ರಂದು ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಶಿರಾದಲ್ಲಿ ಜ್ಯಾತ್ಯಾತೀತವಾಗಿ, ಪಕ್ಷಾತೀತವಾಗಿ ಪ್ರತಿಭಟನೆ ಹಮ್ಮಿಕೊಂಡಿದ್ದು ತಾಲೂಕಿನಾದ್ಯಂತ ಬೃಹತ್ ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸಬೇಕೆಂದು ಡಿಸಿಸಿ ಬ್ಯಾಂಕ್ ನಿರ್ದೇಶಕ ಜಿ.ಎನ್.ಮೂರ್ತಿ ಹೇಳಿದರು.ಈ ಬಗ್ಗೆ ನಗರದ ಪ್ರವಾಸಿ ಮಂದಿರದಲ್ಲಿ ಭಾನುವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಕೆ.ಎನ್.ರಾಜಣ್ಣ ಅವರನ್ನು ತಪ್ಪು ಗ್ರಹಿಕೆಯಿಂದ ಸಚಿವ ಸಂಪುಟದಿಂದ ವಜಾ ಮಾಡಲಾಗಿದೆ. ಆದ್ದರಿಂದ ಇದನ್ನು ಸರಿಪಡಿಸುವಂತೆ ಕಾಂಗ್ರೆಸ್ ಹೈಕಮಾಂಡ್ ಅವರಿಗೆ ಮನವರಿಕೆ ಮಾಡಲು ಹಕ್ಕೊತ್ತಾಯ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು.
ಡಿಸಿಸಿ ಬ್ಯಾಂಕ್ ನಿರ್ದೇಶಕ ಜಿ.ಎಸ್.ರವಿ ಮಾತನಾಡಿ ರಾಜ್ಯದ ಅತ್ಯಂತ ಪ್ರಭಾವಿ ಸಚಿವರಾದ ಕೆ.ಎನ್.ರಾಜಣ್ಣ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಲು ಅ. 21ರಂದು ನಗರದ ಅಂಬೇಡ್ಕರ್ ಸರ್ಕಲ್‌ನಿಂದ ಮೆರವಣಿಗೆ ಮಾಡಿ ಹಕ್ಕೊತ್ತಾಯ ಸಮಾವೇಶ ಮಾಡಲಾಗುವುದು. ಕೆ.ಎನ್.ರಾಜಣ್ಣ ಅವರು ಸಚಿವರಾಗಿದ್ದಾಗ ತಂದಿದ್ದ ಕಾನೂನುಗಳನ್ನು ಜಾರಿಗೆ ತರಬೇಕು. ಪ್ರತಿಭಟನೆಗೆ ಪಕ್ಷಾತೀತವಾಗಿ, ರೈತರು, ಸಂಘ ಸಂಸ್ಥೆಯವರು ಆಗಮಿಸಬೇಕು ಎಂದರು.ಪತ್ರಿಕಾಗೋಷ್ಠಿಯಲ್ಲಿ ಟೌನ್ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ತ್ಯಾಗರಾಜು, ಸದಸ್ಯರಾದ ಚಂದ್ರಶೇಖರ ಆರಾಧ್ಯ, ಹಿರಿಯ ದಲಿತ ಮುಖಂಡ ಜೆ.ಎನ್.ರಾಜಸಿಂಹ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಅಜಯ್ಕುಮಾರ್, ಪಂಜಿಗಾನಹಳ್ಳಿ ದಯಾನಂದ ಸಾಗರ್, ಟಿಎಪಿಸಿಎಂಎಸ್ ಅಧ್ಯಕ್ಷ ಹಂದುಕುಂಟೆ ನಾರಾಯಣಪ್ಪ, ಮಾಜಿ ಉಪಾಧ್ಯಕ್ಷ ಡಿ.ವೈ.ಗೋಪಾಲ್, ಮಾಜಿ ತಾ.ಪಂ. ಅಧ್ಯಕ್ಷ ಬುಕ್ಕಾಪಟ್ಟಣ ಮಂಜುನಾಥ್, ಮಾಜಿ ಜಿ.ಪಂ. ಸದಸ್ಯ ಗುಜ್ಜಾರಪ್ಪ, ಕೆ.ಪಿ.ಶ್ರೀನಿವಾಸ್, ಚಿದಾನಂದ್ ಸಂಕಾಪುರ ಸೇರಿದಂತೆ ಹಲವರು ಹಾಜರಿದ್ದರು.
೧೯ಶಿರಾ೧: ಶಿರಾ ನಗರದ ಪ್ರವಾಸಿ ಮಂದಿರದಲ್ಲಿ ಮುಖಂಡರು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.