ಬರ ಪರಿಹಾರದ ಹಣ ಹೆಚ್ಚಳಕ್ಕೆ ಆಗ್ರಹ

KannadaprabhaNewsNetwork |  
Published : Oct 01, 2026, 02:15 AM IST
ರಾಣಿಬೆನ್ನೂರು ನಗರದಲ್ಲಿ ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ರಾಜ್ಯ ಸರ್ಕಾರ ಘೋಷಿಸಿರುವ ಬರ ಪರಿಹಾರದ ಹಣವನ್ನು ಹೆಚ್ಚಿಗೆ ಮಾಡುವಂತೆ ಆಗ್ರಹಿಸಿ ಗ್ರೇಡ್-2 ತಹಸೀಲ್ದಾರ ಅರುಣ ಕಾರಗಿ ಮೂಲಕ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರಿಗೆ ಮನವಿ ಸಲ್ಲಿಸಿದರು.  | Kannada Prabha

ಸಾರಾಂಶ

ರಾಜ್ಯ ಸರ್ಕಾರ ಬರಪೀಡಿತ ಪ್ರದೇಶಗಳ ರೈತರಿಗೆ ಘೋಷಣೆ ಮಾಡಿರುವ ₹2500 ಹಣ ಯಾವುದಕ್ಕೂ ಸಾಕಾಗುವುದಿಲ್ಲ

ರಾಣಿಬೆನ್ನೂರು: ರಾಜ್ಯ ಸರ್ಕಾರ ಘೋಷಿಸಿರುವ ಬರ ಪರಿಹಾರದ ಹಣವನ್ನು ಹೆಚ್ಚಿಸುವಂತೆ ಆಗ್ರಹಿಸಿ ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬುಧವಾರ ನಗರದಲ್ಲಿ ಗ್ರೇಡ್- 2 ತಹಸೀಲ್ದಾರ್ ಅರುಣ ಕಾರಗಿ ಮೂಲಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೆ ಮನವಿ ಸಲ್ಲಿಸಿದರು.

ಸಂಘಟನೆಯ ತಾಲೂಕು ಅಧ್ಯಕ್ಷ ಚಂದ್ರಪ್ಪ ಬಣಕಾರ ಮಾತನಾಡಿ, ರಾಜ್ಯ ಸರ್ಕಾರ ಬರಪೀಡಿತ ಪ್ರದೇಶಗಳ ರೈತರಿಗೆ ಘೋಷಣೆ ಮಾಡಿರುವ ₹2500 ಹಣ ಯಾವುದಕ್ಕೂ ಸಾಕಾಗುವುದಿಲ್ಲ. ರೈತರು ತಮ್ಮ ಜಮೀನಿನಲ್ಲಿ ಬಿತ್ತನೆ ಮಾಡಲು ಬೀಜ, ಗೊಬ್ಬರ, ಹೊಲ ಉಳುಮೆಗೆ ಒಂದು ಎಕರೆಗೆ ಸುಮಾರು ₹40ರಿಂದ 50 ಸಾವಿರವರೆಗೆ ಖರ್ಚು ಮಾಡಿರುತ್ತಾರೆ.

ಈಗ ಬಿತ್ತಿ ಬೆಳೆದ ಬೆಳೆಯು ಮಳೆ ಇಲ್ಲದೆ ಸಂಪೂರ್ಣವಾಗಿ ಒಣಗಿ ಹೋಗಿದೆ. ಒಂದು ಎಕರೆಗೆ 4 ರಿಂದ 5 ಕ್ವಿಂಟಲ್ ಜೋಳ ಬರುವುದು ಸಹ ಕಷ್ಟದ ಪರಿಸ್ಥಿತಿ ನಿರ್ಮಾಣವಾಗಿದೆ. ಕೆಲವೊಂದು ಜಮೀನಿನಲ್ಲಿ ಬೆಳೆ ಅರ್ಧಕ್ಕೆ ಒಣಗಿ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಆದ್ದರಿಂದ ರೈತರನ್ನು ಸಂಕಷ್ಟದಿಂದ ಪಾರು ಮಾಡಲು ಕೂಡಲೇ ಎಕರೆಗೆ ₹50000 ಹಣ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದರು.

ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಜಾಧವ, ರಾಜ್ಯ ಸಂಚಾಲಕ ಮಲ್ಲಿಕಾರ್ಜುನ ಸಾವಕ್ಕಳವರ, ಸಿದ್ದರೋಡ ಗುರುಂ, ಶ್ರೀಧರ ಛಲವಾದಿ, ಪರಶುರಾಮ ಕುರುವತ್ತಿ, ಆನಂದ ಲಮಾಣಿ, ಕೃಷ್ಣ ವೇಷಗಾರ, ಶ್ರೀಕಾಂತ ಕಡ್ಲಿಗೊಂದಿ, ಮಂಜಪ್ಪ ಆನ್ವೇರಿ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕ್ರೀಡಾಕೂಟದಲ್ಲಿ ನಿರ್ಣಾಯಕರ ಪಾತ್ರ ಮಹತ್ವದ್ದು: ತಹಸೀಲ್ದಾರ್
ಜಿಪಂ ಆವರಣದಲ್ಲಿ ಸ್ವಚ್ಛತಾ ಕಾರ್ಯ