ಕನ್ನಡಪ್ರಭ ವಾರ್ತೆ ಕಲಬುರಗಿ
ಎಬಿವಿಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರಾದ ಹನುಮಂತ ಬಗಲಿ ಮಾತನಾಡಿ, ಕರ್ನಾಟಕ ರಾಜ್ಯದಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಪಡೆಯಲು ಅತಿ ಹೆಚ್ಚು ನಗರ ಪ್ರದೇಶಗಳ ಶಾಲಾ ಕಾಲೇಜುಗಳಿಗೆ ಬರುತ್ತಾರೆ. ವಿದ್ಯಾರ್ಥಿಗಳ ತರಗತಿಗಳು ಪ್ರಾರಂಭವಾದ ನಂತರ ಸರಿಯಾದ ಸಮಯಕ್ಕೆ ಬಸ್ ಪಾಸ್ ಅನ್ನು ವಿತರಣೆ ಮಾಡದೇ ಇರುವ ಕಾರಣ ಪ್ರತಿದಿನ ನೂರಾರು ರುಪಾಯಿಗಳನ್ನು ಖರ್ಚು ಮಾಡಿಕೊಂಡು ಬಡ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ಬರುವುದು ಕಷ್ಟದ ಸಂಗತಿ ಆಗಿದೆ ಎಂದರು.
ಸರ್ಕಾರ ಶಾಲಾ ಕಾಲೇಜುಗಳು ಪ್ರಾರಂಭವಾದ ತಕ್ಷಣವೇ ವಿದ್ಯಾರ್ಥಿಗಳಿಗೆ ಬಸ್ ಪಾಸ್ ಅನ್ನು ಸಕಾಲದಲ್ಲಿ ಒದಗಿಸುವ ನಿಟ್ಟಿನಲ್ಲಿ ಅತಿ ಹೆಚ್ಚು ಸಿಬ್ಬಂದಿಗಳನ್ನು ಬಳಸಿಕೊಂಡು ಒದಗಿಸುವ ಅವಶ್ಯಕತೆ ಇದೆ, ಅರ್ಜಿ ಸಲ್ಲಿಸಿದ ನಂತರ ವಿದ್ಯಾರ್ಥಿಗಳು ವಾರಗಳ ಕಾಲ ಬಸ್ ಪಾಸನ್ನು ಪಡೆಯಲು ಕಾಯುವಂತಾಗಿದೆ.ಬಡ ವಿದ್ಯಾರ್ಥಿಗಳು ಶಾಲಾ - ಕಾಲೇಜುಗಳಿಗೆ ಬಸ್ ಪಾಸ್ ಸಿಗುವರೆಗೂ ಬರದೆ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ವಿಶ್ವವಿದ್ಯಾಲಯಗಳ ಶೈಕ್ಷಣಿಕ ವೇಳಾಪಟ್ಟಿ ಬದಲಾವಣೆಯಿಂದು ಆಯೋಗ ವಿಶ್ವವಿದ್ಯಾಲಯಗಳ ಶೈಕ್ಷಣಿಕ ವೇಳಾಪಟ್ಟಿಗೆ ಅನುಗುಣವಾಗಿ ವಿದ್ಯಾರ್ಥಿಗಳಿಗೆ ಬಸ್ ಪಾಸ್ ಅನ್ನು ವಿತರಿಸುವಂತೆ ಆಗ್ರಹಿಸಿದರು.
ರಾಜ್ಯದಲ್ಲಿ ರಾಜ್ಯ ಸರ್ಕಾರ ಸ್ತ್ರೀ ಶಕ್ತಿ ಯೋಜನೆಯ ಜಾರಿ ಮಾಡಿದ ಪರಿಣಾಮ ಅತಿ ಹೆಚ್ಚು ಮಹಿಳೆಯರು ಬಸ್ ಗಳಲ್ಲಿ ಪ್ರಯಾಣಿಸುತ್ತಿದ್ದಾರೆ. ಆದರೆ ಬಸ್ಗಳ ಸಂಖ್ಯೆಯನ್ನು ಹೆಚ್ಚಳ ಮಾಡದೆ ಇರುವುದರಿಂದ ವಿದ್ಯಾರ್ಥಿಗಳಿಗೆ ಬಸ್‌ಗಳಲ್ಲಿ ಓಡಾಟ ಮಾಡಲು ಬಹಳ ಕಷ್ಟವಾಗುತ್ತಿದೆ ಎಂದರು.ಸರಕಾರ ಬಸ್‌ಗಳ ಸಂಖ್ಯೆಯನ್ನು ಹೆಚ್ಚಳ ಮಾಡುವ ನಿಟ್ಟಿನಲ್ಲಿ ಯೋಚಿಸಿ ಯಾವ ಹಳ್ಳಿಗಳಿಗೆ ಬಸ್ಗಳ ಕೊರತೆ ಇದೆ ಆ ಹಳ್ಳಿಗಳಿಗೆ ಸಮರ್ಪಕವಾದ ವ್ಯವಸ್ಥೆಯನ್ನು ಶಾಲಾ-ಕಾಲೇಜುಗಳ ಸಮಯಕ್ಕೆ ಒದಗಿಸಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ರಾಜ್ಯ ಸರ್ಕಾರಕ್ಕೆ ಒತ್ತಾಯಿಸತು.
ಸಹ ಸಂಘಟನಾ ಕಾರ್ಯದರ್ಶಿ ಗಂಗಾಧರ ಹಂಜಗಿ, ವಿಭಾಗ ಸಂಘಟನಾ ಕಾರ್ಯದರ್ಶಿ ಪಾಂಡು ಮೋರೆ, ಜಿಲ್ಲಾ ಸಂಚಾಲಕ ಮಂಜುನಾಥ್ ತಾಲೂಕು ಸಂಚಾಲಕ ಮನೋಜ್ ಕುಮಾರ್, ನಗರ ಕಾರ್ಯದರ್ಶಿ ಶಾಂತಕುಮಾರ್, ಕುಮಾರಿ ಶಿವಾನಿ, ಅರುಣಾ, ರಕ್ಷಿತಾ, ತರುಣ್, ಗುರು, ತಾಯಪ್ಪ, ಶರಣ, ಮುತ್ತು ಕಾಲೇಜ್ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.