ರಾಮಲಿಂಗಾರೆಡ್ಡಿಗೆ ಡಿಸಿಎಂ ಮಾಡುವಂತೆ ಆಗ್ರಹ

KannadaprabhaNewsNetwork |  
Published : Jun 01, 2026, 01:15 AM IST
ಫೋಟೋ 31ಪಿವಿಡಿ4ರಾಜ್ಯ ಸಾರಿಗೆ ಸಚಿವ ರಾಮಲಿಂಗರೆಡ್ಡಿ  | Kannada Prabha

ಸಾರಾಂಶ

ರಾಮಲಿಂಗಾರೆಡ್ಡಿ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ತಾಲೂಕು ರೆಡ್ಡಿ ಜನ ಸಂಘದ ಅಧ್ಯಕ್ಷ ಹಾಗೂ ಜಿಲ್ಲಾ ಸಂಘದ ನಿರ್ದೇಶಕರಾದ ಬೆಳ್ಳಿಬಟ್ಟಲು ಚಂದ್ರಶೇಖರರೆಡ್ಡಿ ಸಚಿವರು ಹಾಗೂ ರಾಜ್ಯ ಕಾಂಗ್ರೆಸ್‌ ಹಿರಿಯ ಮುಖಂಡರಲ್ಲಿ ಒತ್ತಾಯಿಸಿ ಮನವಿ ಮಾಡಿದ್ದಾರೆ.

ಕನ್ನಡಪ್ರಭ ವಾರ್ತೆ ಪಾವಗಡ ನೂತನವಾಗಿ ಅಸ್ತಿತ್ವಕ್ಕೆ ಬರಲಿರುವ ಸಿಎಲ್‌ಪಿ ನಾಯಕ ಡಿ.ಕೆ.ಶಿವಕುಮಾರ್‌ ನೇತೃತ್ವದ ರಾಜ್ಯ ಸರ್ಕಾರದ ಸಚಿವ ಸಂಪುಟದಲ್ಲಿ ರೆಡ್ಡಿ ಸಮುದಾಯದ ಧೀಮಂತ ನಾಯಕ,ಹಿರಿಯ ಮುಖಂಡ,ಹಾಗೂ ರಾಜ್ಯ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ತಾಲೂಕು ರೆಡ್ಡಿ ಜನ ಸಂಘದ ಅಧ್ಯಕ್ಷ ಹಾಗೂ ಜಿಲ್ಲಾ ಸಂಘದ ನಿರ್ದೇಶಕರಾದ ಬೆಳ್ಳಿಬಟ್ಟಲು ಚಂದ್ರಶೇಖರರೆಡ್ಡಿ ಸಚಿವರು ಹಾಗೂ ರಾಜ್ಯ ಕಾಂಗ್ರೆಸ್‌ ಹಿರಿಯ ಮುಖಂಡರಲ್ಲಿ ಒತ್ತಾಯಿಸಿ ಮನವಿ ಮಾಡಿದ್ದಾರೆ. ಭಾನುವಾರ ಪಟ್ಟಣದಲ್ಲಿ ಸುದ್ಧಿಗಾರರ ಜತೆ ಅಧ್ಯಕ್ಷ ಚಂದ್ರಶೇಖರರೆಡ್ಡಿ ಮಾತನಾಡಿ, ಕರ್ನಾಟಕ ರಾಜ್ಯದಲ್ಲಿ ಒಂದು ಕೋಟಿಗೂ ಅಧಿಕ ಸಂಖ್ಯೆಯ ರೆಡ್ಡಿ ಸಮಾಜವಿದೆ. ರಾಜ್ಯ ರೆಡ್ಡಿ ಸಮುದಾಯದ ಹಿರಿಯ ಪ್ರಭಾವಿ ಮುಖಂಡರಾದ ರಾಮಲಿಂಗಾರೆಡ್ಡಿ ಅವರು ಪಕ್ಷ ಸಂಘಟಿಸಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ತರುವಲ್ಲಿ ತನ್ನದೇ ಆದ ಶ್ರಮ ವಹಿಸಿದ್ದಾರೆ. ಬೆಂಗಳೂರು ಬಿಟಿಎಂ ಲೇ ಔಟ್‌ ವಿಧಾನ ಸಭಾ ಕ್ಷೇತ್ರದಿಂದ ಸತತ ಏಳು ಬಾರಿ ಶಾಸಕರಾಗಿ ಆಯ್ಕೆಯಾಗಿ 5 ಬಾರಿ ರಾಜ್ಯ ಸಂಪುಟದಲ್ಲಿ ಸಚಿವರಾಗಿ ಪ್ರಾಮಾಣಿಕ ಹಾಗೂ ಉತ್ತಮ ಜನಪರ ಸೇವೆ ಸಲ್ಲಿಸಿದ್ದಾರೆ. ದಕ್ಷ ಹಾಗೂ ಪ್ರಾಮಾಣಿಕತೆಗೆ ಹೆಸರಾಗಿದ್ದು ಸಿಎಂ ಖಾತೆ ಕೊಟ್ಟರೂ ನಿಭಾಯಿಸುವಲ್ಲಿ ಸರ್ಮಥರಿದ್ದಾರೆ. ಜನಪ್ರಿಯ ನಾಯಕರಾಗಿದ್ದಾರೆಂದೇ ಹೆಗ್ಗಳಿಕೆ ಪಡೆದಿದ್ದು ಇವರಿಗೆ ಹೆಚ್ಚು ರಾಜಕೀಯ ಅನುಭವದ ಹಿನ್ನೆಲೆಯಲ್ಲಿ ಜನಪರ ಅಭಿವೃದ್ಧಿಯ ಬಗ್ಗೆ ಬದ್ಧತೆ ಹಾಗೂ ಕಾಳಜಿ ಇದೆ. ಹೀಗಾಗಿ ರಾಜ್ಯ ರೆಡ್ಡಿ ಸಮಾಜಕ್ಕೆ ಪ್ರಾಶಸ್ಯ ನೀಡುವಂತೆ ಒತ್ತಾಯಿಸಿದರು. ಕಳೆದ ಐದಾರು ದಶಕಗಳಿಂದ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದು ಸರ್ಕಾರದ ಆಡಳಿತ ಜನರ ಹಕ್ಕುಗಳ ರಕ್ಷಣೆ ಹಾಗೂ ಸಾಮಾಜಿಕ ನ್ಯಾಯ ಪರ ಕೆಲಸ ಮಾಡಿ ಜನ್ನಮನ್ನಣೆಗಳಿಸಿದ್ದಾರೆ.

ಮುಂಚೂಣಿ ರಾಜಕೀಯ ಮುತ್ಸದ್ದಿಯಾಗಿದ್ದು,ಡಿ.ಕೆ.ಶಿವಕುಮಾರ್‌ ಅವರ ನೇತೃತ್ವದ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿರುವ ಹಿನ್ನಲೆಯಲ್ಲಿ ನೂತನ ಸರ್ಕಾರದಲ್ಲಿ ರಾಮಲಿಂಗರೆಡ್ಡಿ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಸಮಸ್ತ ರಾಜ್ಯ ರೆಡ್ಡಿ ಸಮಾಜ ಸಚಿವ ಹಾಗೂ ರಾಷ್ಟ ಹಾಗೂ ಹಂಗಾಮಿ ಸಿಎಂ ಸಿದ್ದರಾಮಯ್ಯ, ಹಾಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹಾಗೂ ರಾಜ್ಯ ಸರ್ಕಾರದ ಸಚಿವರು ಮತ್ತು ರಾಜ್ಯ ಕಾಂಗ್ರೆಸ್‌ ಹಿರಿಯ ಮುಖಂಡರಲ್ಲಿ ಅವರು ಮನವಿ ಮಾಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪರಂಗೆ ಡಿಸಿಎಂ, ಮಹದೇವಪ್ಪಗೆ ಸಚಿವ ಸ್ಥಾನಕ್ಕೆ ಒತ್ತಾಯ
ಡಿ.ಟಿ.ಶ್ರೀನಿವಾಸಗೆ ಸಂಪುಟದಲ್ಲಿ ಸ್ಥಾನಕ್ಕೆ ಒತ್ತಾಯ