ತಾಂತ್ರಿಕ ಹುದ್ದೆಗೆ ಸಮನಾದ ವೇತನ ನೀಡಲು ಆಗ್ರಹ

KannadaprabhaNewsNetwork |  
Published : Sep 28, 2024, 01:16 AM ISTUpdated : Sep 28, 2024, 01:17 AM IST
ಕಾರವಾರದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳು ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ವಿವಿಧ ಸಮಸ್ಯೆಗಳ ಮನವಿಯಲ್ಲಿ ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಗ್ರಾಮ ಆಡಳಿತ ಅಧಿಕಾರಿಗಳು ಸಲ್ಲಿಸಿದರು.

ಕಾರವಾರ: ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯನ್ನು ತಾಂತ್ರಿಕ ಹುದ್ದೆಗಳಿಗೆ ಸಮನಾದ ವೇತನ ಶ್ರೇಣಿ ನಿಗದಿಪಡಿಸಿ ಆದೇಶ ನೀಡಿಕೆ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಗ್ರಾಮ ಆಡಳಿತಾಧಿಗಳು ನಗರ ಜಿಲ್ಲಾಧಿಕಾರಿ ಕಚೇರಿ ಬಳಿ ಶುಕ್ರವಾರ ಮುಷ್ಕರ ನಡೆಸಿದರು.ತಮ್ಮ ವಿವಿಧ ಸಮಸ್ಯೆಗಳ ಮನವಿಯಲ್ಲಿ ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಈ ಸಂದರ್ಭದಲ್ಲಿ ಸಲ್ಲಿಸಿದರು. ಗ್ರಾಮ ಆಡಳಿತ ಅಧಿಕಾರಿಗಳಿಗೆ ಸುಸಜ್ಜಿತವಾದ ಕಚೇರಿ, ಉತ್ತಮ ಗುಣಮಟ್ಟದ ಟೇಬಲ್ ಮತ್ತು ಕುರ್ಚಿ ಮತ್ತು ಅಲ್ಮೆರಾ, ಅತ್ಯುತ್ತಮ ಗುಣಮಟ್ಟದ ಮೊಬೈಲ್ ಫೋನ್, ಸಿಯುಜಿ ಸಿಮ್ ಮತ್ತು ಡೇಟಾ, ಗೂಗಲ್ ಕ್ರೋಮ್ ಬುಕ್, ಲ್ಯಾಪ್‌ಟಾಪ್, ಪ್ರಿಂಟರ್ ಮತ್ತು ಸ್ಕ್ಯಾನರ್ ಸೇರಿದಂತೆ ಮೂಲ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ಜಿಲ್ಲಾಧ್ಯಕ್ಷ ಚಂದ್ರಶೇಖರ್ ಕಂಬಾರ್, ಮಂಜುನಾಥ ಹಡಗರಿ, ಎನ್.ಬಿ. ಕೊಟ್ರೆಶ್, ಚಂದ್ರಶೇಖರ್ ನಾಯ್ಕ, ಸಂತೋಶ ಬಾಂದೇಕರ್, ಭಾರ್ಗವ್ ನಾಯ್ಕ, ವಿಜಯಕುಮಾರ್, ಕೃಷ್ಣ ನಾಯ್ಕ, ಸಂತೋಷ, ಜ್ಞಾನೇಶ್ವರ, ಚರಣ, ಶಿವಾನಂದ, ಶ್ರೀಧರ ಸೇರಿದಂತೆ 300ಕ್ಕೂ ಹೆಚ್ಚು ಜನರಿದ್ದರು.

ಹಳಿಯಾಳ ತಾಲೂಕಾಡಳಿತಕ್ಕೆ ಕಂದಾಯ ಇಲಾಖೆಯ ರಾಜ್ಯಪ್ರಶಸ್ತಿ

ಹಳಿಯಾಳ: ಇಲ್ಲಿನ ತಾಲೂಕಾಡಳಿತಕ್ಕೆ ಕಂದಾಯ ಇಲಾಖೆಯ 2024ನೇ ಸಾಲಿನ ರಾಜ್ಯ ಅತ್ಯುತ್ತಮ ಕಂದಾಯ ಇಲಾಖೆಯ ಅಧಿಕಾರಿ ಪ್ರಶಸ್ತಿಯು ಲಭಿಸಿದ್ದು, ಪ್ರಸ್ತುತ ಸೇವೆಯಲ್ಲಿರುವ ಹಾಗೂ ನಿಕಟಪೂರ್ವ ತಹಸೀಲ್ದಾರ್ ಮತ್ತು ಮುತ್ತಲಮುರಿ ಗ್ರಾಮ ಆಡಳಿತಾಧಿಕಾರಿಗಳು ಪ್ರಶಸ್ತಿಗೆ ಭಾಜನರಾಗಿದ್ದಾರೆ.ತಹಸೀಲ್ದಾರಗಳ ವಿಭಾಗಗಳಲ್ಲಿ ಹಳಿಯಾಳದ ತಹಸೀಲ್ದಾರ್ ಪ್ರವೀಣ ಹುಚ್ಚಣ್ಣನವರ ಹಾಗೂ ನಿಕಟಪೂರ್ವ ರಾಣಿಬೆನ್ನೂರಿಗೆ ವರ್ಗವಾಗಿರುವ ತಹಸೀಲ್ದಾರ್ ಆರ್.ಎಚ್. ಭಾಗವಾನ ಮತ್ತು ಗ್ರಾಮ ಆಡಳಿತಾಧಿಕಾರಿಗಳ ವಿಭಾಗದಲ್ಲಿ ಮುತ್ತಲಮುರಿ ಗ್ರಾಮ ಆಡಳಿತಾಧಿಕಾರಿ ಆತ್ಮಾನಂದ ಕೆ. ಹಾಗೂ ಗೌರಮ್ಮ ಅವರು ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ- 2024 ಭಾಜನರಾಗಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ವಿಕಾಸ ಸೌಧದಲ್ಲಿ ನಡೆದ ಸಮಾರಂಭದಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಪ್ರಶಸ್ತಿ ಪ್ರದಾನ ಮಾಡಿದರು.

ಅತ್ಯುತ್ತಮ ಕಂದಾಯ ಇಲಾಖೆಯ ಅಧಿಕಾರಿ ಪ್ರಶಸ್ತಿಯು ಹಳಿಯಾಳದ ತಹಸೀಲ್ದಾರ್ ಪ್ರವೀಣ ಹುಚ್ಚಣ್ಣನವರ ಹಾಗೂ ನಿಕಟಪೂರ್ವ ರಾಣಿಬೆನ್ನೂರಿಗೆ ವರ್ಗವಾಗಿರುವ ತಹಸೀಲ್ದಾರ್ ಆರ್.ಎಚ್. ಭಾಗವಾನ ಅವರಿಗೆ ಲಭಿಸಿದ್ದು, ಬೆಂಗಳೂರಿನಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಪ್ರಶಸ್ತಿ ಪ್ರದಾನ ಮಾಡಿದರು.

PREV

Recommended Stories

ಮದ್ದೂರು ಗಣೇಶ ಗಲಾಟೆಗೆ ಪೂರ್ಣ ಮುಸ್ಲಿಮರೇ ಕಾರಣ: ಸಚಿವ ಚಲುವ
ಬುರುಡೆ ಕೇಸ್‌ : ಸಾಕ್ಷಿದಾರರ ಬಂಧನ..? ಮಟ್ಟಣ್ಣವರ್‌, ಜಯಂತ್‌, ಅಭಿಷೇಕ್, ಮನಾಫಾ ವಿಠಲಗೆ ಗ್ರಿಲ್