ನಿವೃತ್ತ ನೌಕರರಿಗೆ ಸೌಲಭ್ಯ ಕಲ್ಪಿಸಲು ಒತ್ತಾಯ

KannadaprabhaNewsNetwork |  
Published : Jun 23, 2025, 11:49 PM IST
೨೩ಕೆಎಲ್‌ಆರ್-೬ಕೋಲಾರದ ಸ್ಕೌಟ್ಸ್ ಭವನದಲ್ಲಿ ನಿವೃತ್ತ ನೌಕರರ ವೇದಿಕೆಯ ಜಿಲ್ಲಾ ಮಟ್ಟದ ಸಮಾವೇಶದಲ್ಲಿರಾಜ್ಯ ನಿವೃತ್ತ ನೌಕರರ ವೇದಿಕೆಯ ಮಹಾ ಪ್ರಧಾನ ಸಂಚಾಲಕ ಡಾ.ಎಂ.ಪಿ.ಎಂ.ಷಣ್ಮುಖಯ್ಯ ಮಾತನಾಡಿದರು. | Kannada Prabha

ಸಾರಾಂಶ

೭ನೇ ವೇತನ ಆಯೋಗದ ಲೆಕ್ಕಾಚಾರದಲ್ಲಿ ನಿವೃತ್ತಿ ಉಪಲಬ್ಧಗಳನ್ನು ಪಾವತಿ ಮಾಡುವುದರಲ್ಲಿ ಆಗಿರುವ ತಾರತಮ್ಯದ ಕುರಿತು ನಿವೃತ್ತ ಸರ್ಕಾರಿ ನೌಕರರು ರಾಜ್ಯ ಸರ್ಕಾರದ ಗಮನ ಸೆಳೆದಿದ್ದರೂ ನಿವೃತ್ತ ಉದ್ಯೋಗಿಗಳಿಗೆ ಸರಿಯಾದ ಸೌಲಭ್ಯಗಳನ್ನು ಕಲ್ಪಿಸದೆ ಸರ್ಕಾರ ಮಲತಾಯಿಧೋರಣೆ ಅನುಸರಿಸುತ್ತಿದೆ.

ಕನ್ನಡಪ್ರಭ ವಾರ್ತೆ ಕೋಲಾರ

ರಾಜ್ಯ ಸರ್ಕಾರ ಸರ್ಕಾರಿ ನೌಕರರು, ಅಧಿಕಾರಿಗಳಿಗೆ ಹಲವು ಯೋಜನೆಗಳ ಮೂಲಕ ಅಗತ್ಯ ನೆರವು ನೀಡುತ್ತಿದೆ. ಆದರೆ ನಿವೃತ್ತ ಸರ್ಕಾರಿ ನೌಕರರಿಗೆ ಸರಿಯಾದ ಸೌಲಭ್ಯಗಳನ್ನು ನೀಡುತ್ತಿಲ್ಲ ಎಂದು ರಾಜ್ಯ ನಿವೃತ್ತ ನೌಕರರ ವೇದಿಕೆಯ ಮಹಾ ಪ್ರಧಾನ ಸಂಚಾಲಕ ಡಾ.ಎಂ.ಪಿ.ಎಂ.ಷಣ್ಮುಖಯ್ಯ ಆರೋಪಿಸಿದರು.

ನಗರದ ಸ್ಕೌಟ್ಸ್ ಭವನದಲ್ಲಿ ನಿವೃತ್ತ ನೌಕರರ ವೇದಿಕೆಯ ಜಿಲ್ಲಾ ಮಟ್ಟದ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ೭ನೇ ವೇತನ ಆಯೋಗದ ಲೆಕ್ಕಾಚಾರದಲ್ಲಿ ನಿವೃತ್ತಿ ಉಪಲಬ್ಧಗಳನ್ನು ಪಾವತಿ ಮಾಡುವುದರಲ್ಲಿ ಆಗಿರುವ ತಾರತಮ್ಯದ ಕುರಿತು ನಿವೃತ್ತ ಸರ್ಕಾರಿ ನೌಕರರು ರಾಜ್ಯ ಸರ್ಕಾರದ ಗಮನ ಸೆಳೆದಿದ್ದರೂ ನಿವೃತ್ತ ಉದ್ಯೋಗಿಗಳಿಗೆ ಸರಿಯಾದ ಸೌಲಭ್ಯಗಳನ್ನು ಕಲ್ಪಿಸದೆ ಸರ್ಕಾರ ಮಲತಾಯಿಧೋರಣೆ ಅನುಸರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಅಧಿವೇಶನದಲ್ಲಿ ಚರ್ಚಿಸಲಿ

ಮಳೆಗಾಲ ಅಧಿವೇಶನ ಆರಂಭವಾಗುತ್ತಿದ್ದು, ನಮ್ಮ ಸಮಸ್ಯೆಯ ಬಗ್ಗೆ ಚರ್ಚಿಸಿ, ಸಚಿವ ಸಂಪುಟ ಈ ಸಮಸ್ಯೆಗೆ ತಿಲಾಂಜಲಿವಿಟ್ಟು. ನಿವೃತ್ತಿ ನೌಕರರ ಹಿತ ಕಾಯಬೇಕು. ಹಾಗಾಗಿ ರಾಜ್ಯದ ನಿವೃತ್ತಿ ನೌಕರರು ಮುಖ್ಯಮಂತ್ರಿಗಳ ಗಮನ ಸೆಳೆಯುವ ಕೆಲಸ ಮಾಡುವ ನಿಟ್ಟಿನಲ್ಲಿ ಹೋರಾಟ, ಧರಣಿಗಳನ್ನು ಮಾಡುವ ಅನಿವಾರ್ಯವಿದೆ ಎಂದು ತಿಳಿಸಿದರು.ಕರ್ನಾಟಕ ರಾಜ್ಯದಲ್ಲಿ ೨೦೨೨ ರ ಜುಲೈ ೧ ರಿಂದ-೨೦೨೪ ರ ಜುಲೈ ೩೧ರ ಅವಧಿಯಲ್ಲಿ ನಿವೃತ್ತರಾದ ಸರಕಾರಿ ಅಧಿಕಾರಿ/ನೌಕರ ವರ್ಗದ ೨೬,೭೦೦ ನಿವೃತ್ತರಿಗೆ ೭ ನೇ ವೇತನ ಆಯೋಗದ ಲೆಕ್ಕಾಚಾರದಲ್ಲಿ ನಿವೃತ್ತಿ ಆರ್ಥಿಕ ಸೌಲಭ್ಯ ನೀಡಲು ಮುಖ್ಯಮಂತ್ರಿಗಳಿಗೆ ಆಗ್ರಹಿಸಿ ಹೋರಾಟದ ನಡೆಸುವ ರೂಪರೇಷೆಯನ್ನು ಸಿದ್ಧಪಡಿಸಲಾಗುವುದು ಎಂದರು.ಮನವಿಗೆ ಬೆಲೆಯೇ ಇಲ್ಲ

ಹೋರಾಟಗಾರರಾದ ಅಣ್ಣಾ ಹಜಾರೆ ಮತ್ತು ಡಾ.ಸಂತೋಷ ಹೆಗಡೆ ಅವರುಗಳ ನೇತೃತ್ವದಲ್ಲಿ ಮುಖ್ಯಮಂತ್ರಿಗಳಿಗೆ, ಸಚಿವರಿಗೆ, ರಾಜ್ಯದ ಶಾಸಕರಿಗೆ, ವಿಧಾನ ಪರಿಷತ್ ಸದಸ್ಯರಿಗೆ ಮನವಿಗಳನ್ನು ನೀಡಲಾಗಿದೆ. ಆದರೂ ನಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸದೆ ಕಾಲಹರಣವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.ಕಾನೂನಾತ್ಮಕ ಹೋರಾಟ ನಡೆಸಲು ನಾವೆಲ್ಲರೂ ಸಿದ್ಧವಿದ್ದು. ಇದರ ಬಗ್ಗೆ ಚರ್ಚೆಗಳನ್ನು ನಡೆಸಿ ಮುಂದಿನ ಹೆಜ್ಜೆಯನ್ನು ಇಡುವುದು ಸೂಕ್ತವೆಂದರು.ಕರ್ನಾಟಕ ರಾಜ್ಯ ನಿವೃತ್ತ ರಾಜ್ಯ ಸಂಚಾಲಕ ಎ.ಕೆ.ವೆಂಕಟೇಶಪ್ಪ, ಮಂಡ್ಯ ಸಂಚಾಲಕ ನಾರಾಯಣಸ್ವಾಮಿ, ಜಿಲ್ಲಾ ಸಂಚಾಲಕರಾದ ಗೋಪಿಕೃಷ್ಣನ್, ಶಾರದಮ್ಮ, ಮಂಜುಳಮ್ಮ, ನರಸಿಂಹಯ್ಯ, ಜನಾರ್ಧನ್, ಮುನಿರತ್ನಂ, ರಂಗಪ್ಪ, ಆಂಜಪ್ಪ, ಕೃಷ್ಣಪ್ಪ, ಮುನಿನಾರಾಯಣಪ್ಪ ಇದ್ದರು.

PREV

Recommended Stories

ಅನನ್ಯಾ ಭಟ್‌ ಅರವಿಂದ್‌-ವಿಮಲಾ ಪುತ್ರಿ, ಕೊ* ಆಗಿದ್ದು ನಿಜ: ಸುಜಾತಾ
ಬುಕರ್‌ ವಿಜೇತ ಬಾನುರಿಂದ ದಸರಾ ಉದ್ಘಾಟನೆ: ಸಿಎಂ