ಕೆಪಿಸಿಎಸ್ ವಿದ್ಯಾರ್ಥಿಗಳಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸಲು ಆಗ್ರಹ

KannadaprabhaNewsNetwork |  
Published : Aug 18, 2026, 02:45 AM IST
17ವಿನಯಚಂದ್ರ | Kannada Prabha

ಸಾರಾಂಶ

ರಾಜ್ಯ ಸರ್ಕಾರವು ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸದಿರುವ ಕಾರಣ ಈ ಶಾಲೆಗಳ ಸಾವಿರಾರು ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರ ತಕ್ಷಣ ಪಬ್ಲಿಕ್ ಶಾಲೆಗಳಿಗೆ ಸಾರಿಗೆ ವ್ಯವಸ್ಥೆ ಮಾಡಬೇಕು ಎಂದು ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ ಆಗ್ರಹಿಸಿದೆ.

ಉಡುಪಿ: ರಾಜ್ಯ ಸರ್ಕಾರವು ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸದಿರುವ ಕಾರಣ ಈ ಶಾಲೆಗಳ ಸಾವಿರಾರು ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರ ತಕ್ಷಣ ಪಬ್ಲಿಕ್ ಶಾಲೆಗಳಿಗೆ ಸಾರಿಗೆ ವ್ಯವಸ್ಥೆ ಮಾಡಬೇಕು ಎಂದು ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ ಆಗ್ರಹಿಸಿದೆ.

ಕೆಪಿಎಸ್ ಶಾಲೆಗೆ ಸುಮಾರು 5 ಕಿ.ಮೀ ವಿಸ್ತೀರ್ಣದಲ್ಲಿ ಬರುವ ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸಿ, ಆ ಶಾಲೆಯ ಮಕ್ಕಳಿಗೆ ಸಾರಿಗೆ ವ್ಯವಸ್ಥೆಯನ್ನು ಮಾಡುವುದಾಗಿ ರಾಜ್ಯ ಸರ್ಕಾರವು ಹೇಳಿತ್ತು. ಆದರೆ ಇಲ್ಲಿಯವರೆಗೂ ಸಹ ಸೂಕ್ತ ಸಾರಿಗೆ ವ್ವವಸ್ಥೆ ಕಲ್ಪಿಸಿಲ್ಲ. ವಿದ್ಯಾರ್ಥಿಗಳು ಸ್ವತಃ ತಾವೇ ಹಣ ಖರ್ಚು ಮಾಡಿಕೊಂಡು ಶಾಲೆ ತಲುಪುವ ಅಥವಾ ಪಾಲಕರೇ ಮಕ್ಕಳನ್ನು ಕೆಪಿಎಸ್ ಶಾಲೆಗೆ ಕರೆದುಕೊಂಡು ಹೋಗಿ ಬಿಡುವಂತಹ ಪರಿಸ್ಥಿತಿ ಎದುರಾಗಿದೆ. ಇದರಿಂದಾಗಿ ರಾಜ್ಯದಲ್ಲಿ 25,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಉಡುಪಿ ಜಿಲ್ಲೆಯಲ್ಲಿಯೇ (ರಾಜ್ಯದಲ್ಲಿಯೇ ಅತಿ ಹೆಚ್ಚು ವಿದ್ಯಾರ್ಥಿಗಳು) 6,863ಕ್ಕೂ ಅಧಿಕ ವಿದ್ಯಾರ್ಥಿಗಳು ಪರದಾಡುವಂತಾಗಿದೆ.

ಸರ್ಕಾರ ಈ ನಿರ್ಲಕ್ಷದಿಂದಾಗಿ ರಾಜ್ಯದ ಗುಡ್ಡಗಾಡಿನ ಪ್ರದೇಶಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ತೀವ್ರ ಸಂಕಷ್ಟ ಎದುರಾಗಿರುವುದಲ್ಲದೆ, ಶಿಕ್ಷಣದಿಂದ ಹೊರಗುಳಿಯುವ ಸ್ಥಿತಿಯನ್ನು ರಾಜ್ಯ ಸರ್ಕಾರವು ತಂದೊಡ್ಡಿದೆ. ರಾಜ್ಯ ಸರ್ಕಾರದ ಈ ಧೋರಣೆಯು ಖಂಡನೀಯ. ಸರ್ಕಾರಕ್ಕೆ ಕೆಪಿಎಸ್ ಕುರಿತಾದ ತನ್ನ ಹಠಮಾರಿ ಧೋರಣೆ ಬಿಟ್ಟು ನಮ್ಮೂರ ಸರ್ಕಾರಿ ಶಾಲೆಗಳನ್ನು ಬಲಪಡಿಸುವಂತೆ ಎಐಡಿಎಸ್ಓ ಜಿಲ್ಲಾ ಸಂಚಾಲಕ ವಿನಯಚಂದ್ರ ಎಸ್.ವಿ. ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹೆಸರಿನಲ್ಲಿ ನಕಲಿ ವೀಡಿಯೋ: ಪೊಲೀಸ್ ದೂರು
ಸುಂಟಿಕೊಪ್ಪ: ಕಾಡಾನೆ ಹಾವಳಿ, ಬೆಳೆ ನಷ್ಟ