ನಾಡಿನ ಜನರ ಬೇಕು, ಬೇಡಗಳನ್ನು ರಾಜ್ಯ ಸರ್ಕಾರ ತಿರ್ಮಾನಿಸುತ್ತದೆ
ಕೊಪ್ಪಳ: ಹಿಂದಿ ಸಾಮ್ರಾಜ್ಯಶಾಹಿಗಳ ಪರ ವರ್ತಿಸುತ್ತಾ ಕರ್ನಾಟಕ ವಿರೋಧಿ ಧೋರಣೆ ತಳೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಕೇಂದ್ರ ಸರ್ಕಾರ ಕೂಡಲೇ ಹಿಂದಕ್ಕೆ ಕರೆಸಿಕೊಳ್ಳಬೇಕು ಎಂದು ಕರವೇ ಜಿಲ್ಲಾಧ್ಯಕ್ಷ ಬಿ.ಗಿರೀಶಾನಂದ ಜ್ಞಾನಸುಂದರ ಆಗ್ರಹಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದಿಂದ ಹಮ್ಮಿಕೊಂಡಿದ್ದ ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಎಸ್ಸೆಸ್ಸೆಲ್ಸಿ ಪರೀಕ್ಷೇಯಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ವ್ಯವಸ್ಥೆ ಜಾರಿಗೆ ತಂದ ನಿರ್ಧಾರ ಮರುಪರಿಶೀಲಿಸುವಂತೆ ರಾಜ್ಯಪಾಲರು ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ.ಈ ಪತ್ರದ ಹಿಂದೆ ಕರ್ನಾಟಕದಲ್ಲಿ ಹಿಂದಿ ಹೇರಿಕೆ ಶಾಶ್ವತವಾಗಿ ನಡೆಸುವ ಹುನ್ನಾರವಿದೆ. ರಾಜ್ಯಪಾಲರು ತಮ್ಮ ಕಾರ್ಯ ವ್ಯಾಪ್ತಿ ಮೀರಿ ಕನ್ನಡಿಗರ ಆಶೋತ್ತರಗಳಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಹೀಗಾಗಿ ಅವರು ಕರ್ನಾಟಕದಲ್ಲಿ ಒಂದೇ ಒಂದು ನಿಮಿಷ ರಾಜ್ಯಪಾಲರಾಗಿ ಉಳಿಯುವ ನೈತಿಕತೆ ಕಳೆದುಕೊಂಡಿದ್ದಾರೆ. ರಾಜ್ಯಪಾಲರು ದಿನನಿತ್ಯದ ಆಡಳಿತದಲ್ಲಿ ಮೂಗು ತೂರಿಸುವುದು ಅತ್ಯಂತ ಆಕ್ಷೇಪಾರ್ಹ ಬೆಳವಣಿಗೆಯಾಗಿದೆ. ರಾಜ್ಯ ಸರ್ಕಾರವನ್ನು ಕರ್ನಾಟಕದ ಜನತೆ ಆಯ್ಕೆ ಮಾಡಿದ್ದಾರೆ. ನಾಡಿನ ಜನರ ಬೇಕು, ಬೇಡಗಳನ್ನು ರಾಜ್ಯ ಸರ್ಕಾರ ತಿರ್ಮಾನಿಸುತ್ತದೆ. ಹೀಗಿರುವಾಗ ಸರ್ಕಾರದ ಮುಖ್ಯಸ್ಥರಾಗಿ ಸರ್ಕಾರದ ನಾಡಪರ ಕಾಳಜಿಯ ನಿರ್ಧಾರ ಬೆಂಬಲಿಸುವುದು ಅವರ ಕರ್ತವ್ಯವಾಗಿರುತ್ತದೆ. ಆದರೆ ಅವರು ಹಿಂದಿ ಮಾಫಿಯಾ ಪರ ಕಾರ್ಯ ನಿರ್ವಹಿಸುವಂತೆ ತೋರುತ್ತದೆ. ಹೀಗಿರುವಾಗ ಅವರನ್ನು ಕೇಂದ್ರ ಸರ್ಕಾರ ಕೂಡಲೇ ವಜಾಗೊಳಿಸಬೇಕೆಂದು ಆಗ್ರಹಿಸಿದರು.
ಜಿಲ್ಲಾ ಯುವ ಘಟಕ ಅಧ್ಯಕ್ಷ ಹನುಮಂತ ಬೆಸ್ತರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿಂಗಪ್ಪ ಮೂಗಿನ್, ಜಿಲ್ಲಾ ಉಪಾಧ್ಯಕ್ಷ ಶಿವನಗೌಡ ಪಾಟೀಲ ಹಲಗೇರಿ, ಜಿಲ್ಲಾ ಮಹಿಳಾ ಅಧ್ಯಕ್ಷೆ ಭುವನೇಶ್ವರಿ ಮೊಟಗಿ, ಜಿಲ್ಲಾ ಪ್ರಧಾನ ಸಂಚಾಲಕ ಗವಿಸಿದ್ದಪ್ಪ ಚಕ್ಕಡಿ, ಕೊಪ್ಪಳ ತಾಲೂಕಾಧ್ಯಕ್ಷ ಹುಸೇನ ಬಾಷಾ ಮಣ್ಣೂರು, ಕನಕಗಿರಿ ತಾಲೂಕಾಧ್ಯಕ್ಷ ಹರೀಶ ಪೂಜಾರ, ಕುಕನೂರು ತಾಲೂಕಾಧ್ಯಕ್ಷ ರಮೇಶ ಚಂಡೂರು, ಕುಷ್ಟಗಿ ತಾಲೂಕಾಧ್ಯಕ್ಷ ಪ್ರಕಾಶ ಮನ್ನೇರಾಳ, ಜಿ.ಸಾ. ಜಾಲತಾಣ ಸಂಚಾಲಕ ಸಿದ್ದು ಸಶಿಮಠ, ಮಹಿಳಾ ಘಟಕ ಉಪಾಧ್ಯಕ್ಷೆ ಗಂಗಮ್ಮ ಕುಂಬಾರ, ಕನಕಗಿರಿ ಮಹಿಳಾ ಅಧ್ಯಕ್ಷೆ ಹುಲಿಗೆಮ್ಮ ನಾಯಕ, ಮಹಿಳಾ ಗೌರವಾಧ್ಯಕ್ಷೆ ಶಂಕ್ರಮ್ಮ ಮ್ಯಾಗಳಮನಿ, ತಾಲೂಕು ಉಪಾಧ್ಯಕ್ಷ ಶ್ರೀಧರ ಭೂತಣ್ಣವರ, ರವಿ ಆದಿ,ಶೇಖರ ಭಾಗ್ಯನಗರ, ನಗರ ಅಧ್ಯಕ್ಷ ಪ್ರಫುಲ್ ಪಾಟೀಲ, ಕರವೇ ಮುಖಂಡ ಮಹೇಶ ನಾಯಕ ಅಗಳಕೇರಾ, ಶರಣು ಮದಲಗಟ್ಟಿ, ಮಲ್ಲು ಬಡಿಗೇರ, ಹುಲ್ಲಪ್ಪ ಟಕ್ಕಳಕಿ, ಮಹ್ಮದ ರಫೀ, ದ್ಯಾಮೇಶ ದದೇಗಲ್, ಶಿವು ಹರಿಜನ, ಶರಣಪ್ಪ ಆಡೂರು, ವಿರುಪಾಕ್ಷಪ್ಪ ದೊಡ್ಡಮನಿ, ರಮೇಶ ಪೂಜಾರ, ವಿರೇಶ ದೊಡ್ಡಮನಿ, ಮಾರುತಿ ದೊಡ್ಡಮನಿ, ಪ್ರಕಾಶ ಗಡ್ಡಿ, ಶಿವು ನಾಯಕ, ರಮೇಶ ಬೂದಗುಂಪಿ, ಮಂಜುನಾಥ ಕಿನ್ನಾಳ, ಮಾರುತಿ ಮುದ್ದಾಬಳ್ಳಿ, ಹನುಮಂತ ಹಟಮಾರಿ, ಅರುಣ ಎಚ್ ಮುದ್ದಾಬಳ್ಳಿ ಹಾಗೂ ಇನ್ನೂ ಅನೇಕರು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.