ಕನ್ನಡಪ್ರಭ ವಾರ್ತೆ ಭದ್ರಾವತಿ
ತಾಲೂಕಿನ ಬಿಆರ್‌ಪಿ ಅಧೀಕ್ಷಕ ಅಭಿಯಂತರರ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ರೈತರು ಬೆಳೆದಿರುವ ಬೆಳೆಗಳಿಗೆ ಸೂಕ್ತ ಸಮಯದಲ್ಲಿ ನೀರು ಲಭ್ಯವಾಗದಿದ್ದಲ್ಲಿ ಬೆಳೆಗಳು ನಾಶವಾಗಲಿವೆ. ಈ ಹಿನ್ನಲೆಯಲ್ಲಿ ತಕ್ಷಣ ಎಡ ಮತ್ತು ಬಲದಂಡೆ ನಾಲೆಗಳಲ್ಲಿ ನೀರು ಹರಿಸಬೇಕು. ಇದರ ಜೊತೆಗೆ ಭದ್ರಾ ಜಲಾಶಯದಿಂದ ಸೋರಿಕೆಯಾಗುತ್ತಿರುವ ನೀರು ವ್ಯಕ್ತವಾಗಿ ಭದ್ರಾ ನದಿಗೆ ಸೇರುತ್ತಿದ್ದು, ಇದನ್ನು ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಸೋರಿಕೆಯಾಗುತ್ತಿರುವ ನೀರು ನಾಲೆಗಳಿಗೆ ಸೇರುವಂತೆ ಕ್ರಮ ಕೈಗೊಳ್ಳಬೇಕೆಂದು ಸಲಹೆ ನೀಡಲಾಯಿತು.
ಮನವಿ ಸ್ವೀಕರಿಸಿದ ಅಧೀಕ್ಷಕ ಅಭಿಯಂತರರು, ಜ. ೨ರಂದು ಈ ಸಂಬಂಧ ತುರ್ತು ಸಭೆ ಕರೆಯಲಾಗಿದೆ. ಎಡ ಮತ್ತು ಬಲ ದಂಡೆ ನಾಲೆಗಳಲ್ಲಿ ತಕ್ಷಣ ನೀರು ಹರಿಸುವ ಸಂಬಂಧ ಪ್ರಸ್ತಾವನೆ ಸಲ್ಲಿಸಿ ರೈತರ ಹಿತ ಕಾಪಾಡಲು ಬದ್ಧವಿರುವುದಾಗಿ ಭರವಸೆ ನೀಡಿದರು. ಅಲ್ಲದೆ ಜಲಾಶಯದಿಂದ ಸೋರಿಕೆಯಾಗುತ್ತಿರುವ ನೀರು, ಅನಾವಶ್ಯಕವಾಗಿ ಭದ್ರಾ ನದಿ ಸೇರುತ್ತಿದ್ದು, ಸೋರಿಕೆಯಾಗುತ್ತಿರುವ ನೀರು ನಾಲೆಗಳಿಗೆ ಹರಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಸಿ. ಮಂಜುಳಾ, ಗ್ರಾಮಾಂತರ ಮಂಡಲ ಅಧ್ಯಕ್ಷ ಕೆ.ಎಚ್ ತೀರ್ಥಯ್ಯ, ನಗರ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್, ಪ್ರಧಾನ ಕಾರ್ಯದರ್ಶಿಗಳಾದ ಅಣ್ಣಪ್ಪ, ರಘುರಾವ್, ಜಿಲ್ಲಾ ಸಮಿತಿ ಸದಸ್ಯರಾದ ಮುಂಗೋಟೆ ರುದ್ರೇಶ್, ಎಂ. ಮಂಜುನಾಥ್, ಜಿ. ಆನಂದ ಕುಮಾರ್ ಹಾಗೂ ಪದಾಧಿಕಾರಿಗಳಾದ ವಿಶ್ವನಾಥ್, ಧನುಷ್ ಬೋಸ್ಲೆ ಮುಖಂಡರಾದ ನಿರಂಜನ್ ಚಂದ್ರಶೇಖರ್, ಜಾದವ್, ನಕುಲ್, ಸಚಿನ್, ಸಿಂಗಾರಿಗೌಡ, ರಾಜೇಶ್, ಸುಧಾ ಸೇರಿದಂತೆ ಪಕ್ಷದ ಶಕ್ತಿ ಕೇಂದ್ರಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು