ಕೆಆರ್‌ಎಸ್ ಜಲಾಶಯದಿಂದ ನಾಲೆಗಳ ಮೂಲಕ ಕೊನೇ ಭಾಗದ ಜಮೀನುಗಳಿಗೆ ನೀರು ಹರಿಸಿ ಬೆಳೆ ರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಮದ್ದೂರು ತಾಲೂಕಿನ ರೈತ ಸಂಘದ ಕಾರ್ಯಕರ್ತರಿಂದ ಹೆದ್ದಾರಿ ತಡೆ ಮಾಡಿ ಪ್ರತಿಭಟನೆ.
ಕನ್ನಡಪ್ರಭ ವಾರ್ತೆ ಮದ್ದೂರು
ಕೆಆರ್‌ಎಸ್ ಜಲಾಶಯದಿಂದ ನಾಲೆಗಳ ಮೂಲಕ ಕೊನೇ ಭಾಗದ ಜಮೀನುಗಳಿಗೆ ನೀರು ಹರಿಸಿ ಬೆಳೆ ರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ತಾಲೂಕಿನ ರೈತ ಸಂಘದ ಕಾರ್ಯಕರ್ತರು ಪಟ್ಟಣದಲ್ಲಿ ಸೋಮವಾರ ಬೆಳಗ್ಗೆ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ರೈತ ಸಂಘದ ಮುಖಂಡ ಕೀಳಘಟ್ಟ ನಂಜುಂಡಯ್ಯ ಹಾಗೂ ಅಣ್ಣೂರು ಮಹೇಂದ್ರ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಪಟ್ಟಣದ ಶಿವಪುರದ ಕೊಪ್ಪ ವೃತ್ತದ ಬೆಂಗಳೂರು- ಮೈಸೂರು ಹಳೇ ಹೆದ್ದಾರಿಯಲ್ಲಿ ಪ್ರತಿಭಟನೆಗಿಳಿದು ಕೆಲ ಕಾಲ ವಾಹನಗಳ ಸಂಚಾರಕ್ಕೆ ಅಡ್ಡಿಪಡಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ, ಜಿಲ್ಲೆಯ ಕಾಂಗ್ರೆಸ್ ಶಾಸಕರುಗಳ ವಿರುದ್ಧ ಘೋಷಣೆ ಕೂಗಿ ಕೆಆರ್ ಎಸ್ ಜಲಾಶಯದಿಂದ ತಾಲೂಕಿನ ಎಲ್ಲಾ ನಾಲೆಗಳ ಮೂಲಕ ನೀರುಹರಿಸಿ ಒಣಗುತ್ತಿರುವ ಕಬ್ಬು, ಭತ್ತ ,ರಾಗಿ, ಹಾಗೂ ರೇಷ್ಮೆ ಬೆಳೆ ರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.