)
ಮಾನ್ವಿ: ತುಂಗಭದ್ರ ಎಡದಂಡೆ ಕಾಲುವೆ ವ್ಯಾಪ್ತಿಯಲ್ಲಿನ ಉಪ ಕಾಲುವೆಗಳಿಗೆ ಅಳವಡಿಸಿರುವ ಅಕ್ರಮ ಪೈಪ್‌ಲೈನ್‌ಗಳನ್ನು ತೆರವುಗೊಳಿಸುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಸಲು ಕ್ರಮವಹಿಸಬೇಕು ಎಂದು ರಾಜ್ಯ ರೈತ ಸಂಘದ ತಾಲೂಕು ಸಮಿತಿ ಆಗ್ರಹಿಸಿದೆ.
ರೈತರ ಖಾತೆಗೆ ಜೋಳದ ಹಣ ಜಮಾ ಮಾಡಬೇಕು. ತಾಲೂಕಿನ ಪಶು ಆಸ್ಪತ್ರೆಗಳಲ್ಲಿ ಖಾಲಿ ಇರುವ ಪಶುವೈದ್ಯರ ಹಾಗೂ ಸಿಬ್ಬಂದಿಗಳ ಹುದ್ದೆಗಳನ್ನು ಭರ್ತಿ ಮಾಡಬೇಕು. ಗ್ರಾಮೀಣ ಭಾಗದ ಶಾಲಾ ವಿದ್ಯಾರ್ಥಿಗಳು ಶಾಲೆಗಳಿಗೆ ಹೊಗುವುದಕ್ಕೆ ಅನುಕೂಲವಾಗುವಂತೆ ಬಸ್ ಸೌಕರ್ಯ ಕಲ್ಪಿಸಬೇಕು. ಹಾಗೂ ಕಾಲುವೆಗಳ ಸೀಲ್ಟ್ ಸರ್ವಿಸ್ ರಸ್ತೆಗಳನ್ನು ಸರಿಪಡಿಸಬೇಕು ಎಂದು ಆಗ್ರಹಿಸಿದರು.
ಸಂಘದ ರಾಜ್ಯಕಾರ್ಯದರ್ಶಿ ಸೂಗುರಯ್ಯ ಆರ್.ಎಸ್.ಮಠ, ಜಿಲ್ಲಾ ಕಾರ್ಯಧ್ಯಕ್ಷರಾದ ಬಸವರಾಜ ಮಾಲಿ ಪಾಟೀಲ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಿಂಗರೆಡ್ಡಿ ಪಾಟೀಲ್, ತಾಲೂಕಾಧ್ಯಕ್ಷ ಸಿದ್ದಯ್ಯಸ್ವಾಮಿ ,ಅಮರೇಶ ಅಲ್ದಾಳ್, ಚಾಮರಸ ಜಾನೇಕಲ್, ತಾ.ಕಾರ್ಯದರ್ಶಿ ಬಸವರಾಜ ತಡಕಲ್ ಸೇರಿ ಇತರರು ಇದ್ದರು.