ಅತಿಥಿ ಉಪನ್ಯಾಸಕರ ನೇಮಕ ಗೊಂದಲ ಬಗೆಹರಿಸಲು ಆಗ್ರಹ

KannadaprabhaNewsNetwork |  
Published : Sep 09, 2025, 01:01 AM IST
ಅತಿಥಿ ಉಪನ್ಯಾಸಕರ ನೇಮಕಾತಿ ಗೊಂದಲ ಬಗೆಹರಿಸಲು ಆಗ್ರಹಿಸಿ ಪ್ರತಿಭಟನೆ. | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಉಂಟಾದ ಗೊಂದಲವನ್ನು ಬಗೆಹರಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಎಐಡಿಎಸ್ಒ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಪದವಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಉಂಟಾದ ಗೊಂದಲವನ್ನು ಬಗೆಹರಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಎಐಡಿಎಸ್ಒ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಪದವಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಎಐಡಿಎಸ್‌ಒ ಜಿಲ್ಲಾ ಕಾರ್ಯದರ್ಶಿ ಕಾವೇರಿ ರಜಪೂತ ಮಾತನಾಡಿ, ರಾಜ್ಯಾದ್ಯಂತ ಪದವಿ ತರಗತಿಗಳು ಪ್ರಾರಂಭವಾಗಿ ತಿಂಗಳು ಕಳೆದರೂ ಇಲ್ಲಿಯ ವರೆಗೂ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಿಲ್ಲ. ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು, ಇಲ್ಲಿಯವರೆಗೂ ತರಗತಿಗಳು ಸರಿಯಾಗಿ ನಡೆಯದೆ ಇರುವುದರಿಂದ ವಿದ್ಯಾರ್ಥಿಗಳು ಸಾಕಷ್ಟು ಆತಂಕದಲ್ಲಿದ್ದಾರೆ. ಇದು ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯವನ್ನು ಅತಂತ್ರವನ್ನಾಗಿಸಿದೆ. ಮುಂದಿನ ತಿಂಗಳು ಪದವಿ ವಿದ್ಯಾರ್ಥಿಗಳ ಮೊದಲ ಆಂತರಿಕ ಪರೀಕ್ಷೆಗಳು ನಡೆಯಬೇಕಿದ್ದು, ಪಾಠಗಳು ಇನ್ನೂ ಆರಂಭವಾಗಿಲ್ಲ. ಯುಜಿಸಿಯ ಹೊಸ ನಿರ್ದೇಶನಗಳು ಹಾಗೂ ಕೋರ್ಟ್‌ನಲ್ಲಿ ನಡೆಯುತ್ತಿರುವ ಮೊಕದ್ದಮೆಯಿಂದ ಅತಿಥಿ ಉಪನ್ಯಾಸಕರ ನೇಮಕಾತಿಯು ನನೆಗುದಿಗೆ ಬಿದ್ದಿದೆ. ಶೈಕ್ಷಣಿಕ ವಿಷಯಗಳಲ್ಲಿ ರಾಜ್ಯ ಸರ್ಕಾರ ಕೇಂದ್ರದ ನಿರ್ಧಾರಗಳನ್ನು ಪಾಲಿಸುವುದು ಕಡ್ಡಾಯವಲ್ಲ ಎಂದು ಸರ್ವೋಚ್ಛ ನ್ಯಾಯಾಲಯದ ನಿರ್ದೇಶನವಿದೆ. ಇದಕ್ಕೆ ಅನುಗುಣವಾಗಿ ರಾಜ್ಯ ಸರ್ಕಾರವು ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಗೆ ಪೂರಕವಾದ ಸ್ಪಷ್ಟ ನಿಲುವು ತಾಳಬೇಕು. ಇಂತಹ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರ ಶೈಕ್ಷಣಿಕ ಚಟುವಟಿಕೆಗಳು ಸರಾಗವಾಗಿ ನಡೆಯುವ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ತುರ್ತಾಗಿ ಕೈಗೊಳ್ಳಬೇಕು. ಅಲ್ಲದೇ, ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲವನ್ನು ಕೂಡಲೇ ಪರಿಹರಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆ ವೇಳೆ ವರದಾ.ಆ, ಶಂಕರ ಕಾಂಬಳೆ, ಕಿರಣ ರಾಠೋಡ, ಸೊಹೆಲ್, ಮೊಹಮದ್ ಜುಬೇರ್, ಸಿದ್ರಾಮ ಜೋಗಿ, ಮೊಹಮದ್ ಬಾಗವಾನ, ಖಾದೀರ್ ಮಾಶ್ಯಾಳ, ವಿಶ್ವ ಉಕ್ಕಲಿ, ಗೋಪಾಲ ಹಾದಿಮನಿ, ಡೆಂಗಿ, ಗಣೇಶ ಡೆಗಿನಾಳ ಹಾಗೂ ಇನ್ನೀತರ ವಿದ್ಯಾರ್ಥಿಗಳು ಭಾಗವಹಿಸಿದ್ದರು.

PREV

Recommended Stories

ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು