ಕಾಫಿ ಮಂಡಳಿ ಅಧ್ಯಕ್ಷರಾಗಿ ಎಂ.ಜೆ. ದಿನೇಶ್ ಅವರನ್ನೇ ಮುಂದುವರಿಸಲು ಆಗ್ರಹ

KannadaprabhaNewsNetwork |  
Published : Nov 01, 2026, 03:15 AM IST
ಪೋಟೋ | Kannada Prabha

ಸಾರಾಂಶ

ಚಿಕ್ಕಮಗಳೂರುಭಾರತೀಯ ಕಾಫಿ ಮಂಡಳಿಗೆ ಹೊಸ ರೂಪ ನೀಡುವ ಜತೆಗೆ ಕಾಫಿ ಬೆಳೆಗಾರರ ಹಿತಾಸಕ್ತಿಗೆ ಪೂರಕವಾಗಿ ಹಲವು ಯೋಜನೆ ಗಳನ್ನು ಅನುಷ್ಠಾನಗೊಳಿಸಿರುವ ಕಾಫಿ ಮಂಡಳಿ ಅಧ್ಯಕ್ಷ ಎಂ.ಜೆ. ದಿನೇಶ್ ದೇವವೃಂದ ಅವರನ್ನು ಮುಂದಿನ ಅವಧಿಗೂ ಅಧ್ಯಕ್ಷರಾಗಿ ಮುಂದುವರಿಸಬೇಕು ಎಂದು ಕಾಫಿ ಬೆಳೆಗಾರರ ಹಿತರಕ್ಷಣಾ ವೇದಿಕೆ ಮುಖಂಡ ಹೊಲದಗದ್ದೆ ಗಿರೀಶ್ ಒತ್ತಾಯಿಸಿದ್ದಾರೆ.

ಮುಖಂಡ ಹೊಲದಗದ್ದೆ ಗಿರೀಶ್ ಒತ್ತಾಯ

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರುಭಾರತೀಯ ಕಾಫಿ ಮಂಡಳಿಗೆ ಹೊಸ ರೂಪ ನೀಡುವ ಜತೆಗೆ ಕಾಫಿ ಬೆಳೆಗಾರರ ಹಿತಾಸಕ್ತಿಗೆ ಪೂರಕವಾಗಿ ಹಲವು ಯೋಜನೆ ಗಳನ್ನು ಅನುಷ್ಠಾನಗೊಳಿಸಿರುವ ಕಾಫಿ ಮಂಡಳಿ ಅಧ್ಯಕ್ಷ ಎಂ.ಜೆ. ದಿನೇಶ್ ದೇವವೃಂದ ಅವರನ್ನು ಮುಂದಿನ ಅವಧಿಗೂ ಅಧ್ಯಕ್ಷರಾಗಿ ಮುಂದುವರಿಸಬೇಕು ಎಂದು ಕಾಫಿ ಬೆಳೆಗಾರರ ಹಿತರಕ್ಷಣಾ ವೇದಿಕೆ ಮುಖಂಡ ಹೊಲದಗದ್ದೆ ಗಿರೀಶ್ ಒತ್ತಾಯಿಸಿದ್ದಾರೆ.ಕಾಫಿ ಮಂಡಳಿ ಅಧ್ಯಕ್ಷರಾಗಿ ದಿನೇಶ್ ಅಧಿಕಾರಾವಧಿ ನವೆಂಬರ್‌ನಲ್ಲಿ ಮುಕ್ತಾಯಗೊಳ್ಳಲಿದೆ. ಅವರ ಅವಧಿಯಲ್ಲಿ ಕಾಫಿ ಉದ್ಯಮಕ್ಕೆ ಹೊಸ ಚೈತನ್ಯ ನೀಡುವ ಜತೆಗೆ ಭಾರತೀಯ ಕಾಫಿ ಜಾಗತಿಕ ಮಟ್ಟದಲ್ಲಿ ಬ್ರಾಂಡ್ ಮಾಡುವ ನಿಟ್ಟಿನಲ್ಲಿ ಹಲವು ಪ್ರಯತ್ನಗಳು ನಡೆದಿವೆ. ಮಂಡಳಿಯಲ್ಲಿ 32ಕ್ಕೂ ಹೆಚ್ಚು ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಅವುಗಳು ಪೂರ್ಣ ಪ್ರಮಾಣದಲ್ಲಿ ಯಶಸ್ವಿಯಾಗಲು ದಿನೇಶ್ ಅವರೇ ಮತ್ತೊಂದು ಅವಧಿಗೆ ಅಧ್ಯಕ್ಷರಾಗುವುದು ಅಗತ್ಯ ಎಂದು ತಿಳಿಸಿದ್ದಾರೆ.ಕಾಫಿ ಬೆಳೆಯಲ್ಲಿ ಆಧುನಿಕ ತಂತ್ರಜ್ಞಾನ ಅಳವಡಿಕೆ, ಇಳುವರಿ ಹೆಚ್ಚಳ ಹಾಗೂ ಹೊಸ ಸಂಶೋಧನೆಗಳಿಗೆ ಅವರ ಅವಧಿ ಯಲ್ಲಿ ಆದ್ಯತೆ ನೀಡಲಾಗಿದೆ. ಕಾಫಿ ಮಂಡಳಿಯ ವಿಜ್ಞಾನಿಗಳು ಕೂಡ ಅವರ ಮಾರ್ಗದರ್ಶನದಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಕಾರ್ಯಗಳು ಮುಂದುವರಿದರೆ ಬೆಳೆಗಾರರಿಗೆ ಹೆಚ್ಚಿನ ಅನುಕೂಲ ಎಂದು ಹೇಳಿದ್ದಾರೆ.ನಾಗಾಲ್ಯಾಂಡ್, ಅಸ್ಸಾಂ, ಆಂಧ್ರಪ್ರದೇಶ ಸೇರಿದಂತೆ ಈಶಾನ್ಯ ರಾಜ್ಯಗಳಲ್ಲಿ ಪ್ರವಾಸ ಕೈಗೊಂಡು ಕಾಫಿ ಬೆಳೆ ವಿಸ್ತರಣೆಗೆ ದಿನೇಶ್ ಅವರು ವಿಶೇಷ ಪ್ರಯತ್ನ ನಡೆಸಿದ್ದಾರೆ. ಇದರಿಂದ ಅಲ್ಲಿನ ಸರ್ಕಾರಗಳು ಬೆಳೆಗಾರರಿಗೆ ಭೂಮಿ ಒದಗಿಸಿ ಕಾಫಿ ಕೃಷಿಗೆ ಉತ್ತೇಜನ ನೀಡುತ್ತಿವೆ. ಕಾಫಿ ಉದ್ಯಮದ ಅಭಿವೃದ್ಧಿಯಿಂದ ಹಿಡಿದು ಬೆಳೆಗಾರರ ಸಮಸ್ಯೆಗಳ ಪರಿಹಾರದವರೆಗೆ ಗಮನಹರಿಸಿದ್ದಾರೆ.ರಾಜ್ಯ ಹಾಗೂ ಕೇಂದ್ರ ಸಚಿವರನ್ನು ನೇರವಾಗಿ ಭೇಟಿ ಮಾಡಿ ಕಾಫಿ ಉದ್ಯಮದ ಅಭಿವೃದ್ಧಿಗೆ ಶ್ರಮಿಸುತ್ತಿರುವ ದಿನೇಶ್ ದೇವವೃಂದ ಅವರಿಗೆ ಮತ್ತೊಂದು ಅವಧಿ ನೀಡುವ ಮೂಲಕ ಅವರ ಯೋಜನೆಗಳಿಗೆ ಪೂರ್ಣಗೊಳಿಸಲು ಕೇಂದ್ರ ಸರ್ಕಾರ ಅವಕಾಶ ಕಲ್ಪಿಸಬೇಕು ಎಂದು ಹೊಲದಗದ್ದೆ ಗಿರೀಶ್ ಆಗ್ರಹಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು ಹೋಟೆಲ್‌ ಈಜು ಕೊಳದಲ್ಲಿ 2 ವಿದೇಶಿಗರ ಸಾವು
ಪ್ರಜ್ವಲ್‌ ಜೀವಾವಧಿಗೆ ಕಾರಣ ಆದ ಮೂವರಿಗೆ ಕೇಂದ್ರ ಗೃಹ ಪ್ರಶಸ್ತಿ